ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್‌: ಶಾಲಾ ಪರಿಕರಗಳ ವಿತರಣೆ


Team Udayavani, Jul 27, 2018, 1:59 PM IST

2607mum03a.jpg

ಕಲ್ಯಾಣ್‌: ಈ ಸ್ಪರ್ಧಾತ್ಮಕ ಶೈಕ್ಷಣಿಕ ಯುಗದಲ್ಲಿ ಸರಕಾರಿ ಮತ್ತು ನಗರ ಪಾಲಿಕೆ ಶಾಲೆಗಳ ಶಿಕ್ಷಣದ ಗುಣಮಟ್ಟ ಬದಲಾಗಬೇಕಿದೆ. ಪಾಲಕರು ಆಂಗ್ಲ ಮಾಧ್ಯಮದತ್ತ ಮುಖ ಮಾಡುವ ಪರಿಸ್ಥಿತಿ ಇಂದು ತಲೆಎತ್ತಿ ನಿಂತಿದೆ. ಮಧ್ಯಮ  ಮತ್ತು ಶ್ರೀಮಂತ ವರ್ಗಕ್ಕೆ ಅನುಕೂಲಕರವಾದ ಶೈಕ್ಷಣಿಕ ಪದ್ಧತಿಯು ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ಶಿಕ್ಷಣದ ಗುಣಮಟ್ಟ ಎತ್ತರದ ಶಿಖರವೆ°àರಿರುವುದು ಮಾತ್ರವಲ್ಲ ಶಿಕ್ಷಣ ಇಂದು ವ್ಯಾಪಾರೀಕರಣವಾಗುತ್ತಿರುವುದ ವಿಷಾಧನೀಯ. ಕೂಲಿ ಕಾರ್ಮಿಕರ ಮಕ್ಕಳು ಇಂದು ಶಿಕ್ಷಣದಿಂದ ವಂಚಿತರಾಗುತ್ತಿರುವುದು ಖೇದಕರ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಎಲ್ಲರು ಒಮ್ಮತದಿಂದ ಕಾರ್ಯಪ್ರವೃತ್ತರಾಗಬೇಕು. ಜೊತೆಗೆ ಮಕ್ಕಳ ಹೆತ್ತವರಲ್ಲೂ ಸ್ಪೂರ್ತಿ ತುಂಬಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್‌ ಇದರ ಅಧ್ಯಕ್ಷೆ ಜ್ಯೋತಿ ಪ್ರಕಾಶ್‌ ಕುಂಠಿನಿ ಅವರು ನುಡಿದರು.

ಜು. 20 ರಂದು ಮಧ್ಯಾಹ್ನ ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್‌ ವತಿಯಿಂದ ನಡೆದ ಅಂಬರ್‌ನಾಥ್‌ ಪಶ್ಚಿಮದ ಗಾಂವೆªàವಿ ಪರಿಸರದಲ್ಲಿರುವ ಅಂಬರ್‌ನಾಥ್‌ ಮಹಾನಗರ ಪಾಲಿಕೆಯ ಕನ್ನಡ ಶಾಲೆಯ ಮಕ್ಕಳಿಗೆ ಉಚಿತ ಶಾಲಾ ಪರಿಕರಗಳ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಯಾವ ಮಕ್ಕಳು ಕೂಡಾ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ದೃಷ್ಟಿಯಿಂದ ಸಂಸ್ಥೆಯು ಕಳೆದ ಹಲವಾರು ವರ್ಷಗಳಿಂದ ಶ್ರಮಿಸುತ್ತಿದೆ. ಕಲ್ಯಾಣ್‌ ಪರಿಸರದ ಉದ್ಯಮಿ, ಸಮಾಜ ಸೇವಕ ಶ್ರೀಮತಿ ಶಾರದಾ ಮೆಮೋರಿಯಲ್‌ ಟ್ರಸ್ಟ್‌ನ ಅಧ್ಯಕ್ಷ ಭಾಸ್ಕರ ಶೆಟ್ಟಿ ಮತ್ತು ತೆರೆಮರೆಯ ಸಮಾಜ ಸೇವಕ ಶಂಕರ್‌ ಟಿ. ಶೆಟ್ಟಿ ಹಾಗೂ ನಮ್ಮ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಸುಬ್ಬಯ್ಯ ಶೆಟ್ಟಿ ಅವರ ಸಹಾಯದಿಂದ ಈ ನಮ್ಮ ಯೋಜನೆ ಸಾಕಾರಗೊಂಡಿದ್ದು, ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಜೊತೆಗೆ ನಮ್ಮಿಂದ ಈ ಸಣ್ಣ ಸಹಾಯವನ್ನು ಸ್ವೀಕರಿಸಿದ ಮಕ್ಕಳ ಹಾಗೂ ಪಾಲಕರ ಉಜ್ವಲ ಭವಿಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ವೇದಿಕೆಯಲ್ಲಿ ಅತಿಥಿಗಳಾಗಿ ಉಪಸ್ಥಿತರಿದ್ದ ಶಂಕರ ಟಿ. ಶೆಟ್ಟಿ ಅವರು ದೀಪಪ್ರಜ್ವಲಿಸಿ ತೆಂಗಿನ ಕಾಯಿ ಒಡೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಉಪಾಧ್ಯಕ್ಷ ಎಂ. ಬಿ. ಬಿರಾದರ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಉಪಸಮಿತಿ ಕಾರ್ಯಾಧ್ಯಕ್ಷ ಪುಟ್ಟಣ್ಣ ಹಾನಗಲ್‌ ಅವರು ಮಾತನಾಡಿ ಮಕ್ಕಳಿಗೆ ಶುಭಹಾರೈಸಿದರು. ಶಾಲಾ ಮುಖ್ಯ ಶಿಕ್ಷಕಿ ರಾಬಿಯಾ ರಾಜುಲ್‌ ಅವರು ಮಾತನಾಡಿ, ಕನ್ನಡ ಸಾಂಸ್ಕೃತಿಕ ಕೇಂದ್ರದ ಶೈಕ್ಷಣಿಕ ಕೊಡುಗೆ ಅಪಾರವಾಗಿದೆ. ಸಂಸೆœಯ ಅಧ್ಯಕ್ಷೆ ಜ್ಯೋತಿ ಪ್ರಕಾಶ್‌ ಕುಂಠಿನಿ ಅವರ ಸಮಾಜಪರ ಸೇವೆ ಇತರರಿಗೆ ಮಾದರಿಯಾಗಿದೆ ಎಂದು ನುಡಿದು, ಅವರನ್ನು ಶಾಲು ಹೊದೆಸಿ, ಫಲಪುಷ್ಪವನ್ನಿತ್ತು ಗೌರವಿಸಿದರು.

ಅತಿಥಿ ಶಂಕರ ಟಿ. ಶೆಟ್ಟಿ ಅವರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿದ್ದು ಸಾಂಸ್ಕೃತಿಕ ಕೇಂದ್ರ ಪದಾಧಿಕಾರಿಗಳು, ಉಪಾಧ್ಯಕ್ಷ ಎಂ. ಬಿ. ಬಿರಾದಾರ, ಕಾರ್ಯದರ್ಶಿ ರವೀಂದ್ರ ವೈ. ಶೆಟ್ಟಿ ಅವರು ಗೌರವಿಸಿದರು. 

ಉಪಸ್ಥಿತರಿದ್ದ ಎಲ್ಲಾ 110 ಮಕ್ಕಳಿಗೆ ಶ್ರೀಮತಿ ಶಾರದಾ ಮೆಮೋರಿಯಲ್‌ ಟ್ರಸ್ಟ್‌ ಹಾಗೂ ಶಂಕರ ಟಿ. ಶೆಟ್ಟಿ ಅವರ ವತಿಯಿಂದ ಕೊಡಮಾಡಿದ ಉಚಿತ ಶೆಕ್ಷಣಿಕ ಪರಿಕರಗಳನ್ನು ಗಣ್ಯರು ವಿತರಿಸಿದರು. ಪಾಲಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ಕೋಶಾಧಿಕಾರಿ ಪ್ರಕಾಶ್‌ ನಾೖಕ್‌ ಕಾರ್ಯಕ್ರಮ ನಿರ್ವಹಿಸಿದರು. ಮಕ್ಕಳು ಪ್ರಾರ್ಥನೆಗೈದರು. ಮಕ್ಕಳಿಂದ ದೇಶ ಭಕ್ತಿಗೀತೆಗಳ ಗಾಯನ ನಡೆಯಿತು. ಕನ್ನಡ ಸಾಂಸ್ಕೃತಿಕ ಕೇಂದ್ರದ ಜತೆ ಕೋಶಾಧಿಕಾರಿ ಎಂ. ಆರ್‌. ಹೊಸಕೋಟಿ, ಕ್ರೀಡಾ ಕಾರ್ಯಾಧ್ಯಕ್ಷ ಚೆನ್ನವೀರ ಅಡಿಗಣ್ಣನವರ್‌, ಕಾರ್ಯದರ್ಶಿ ರವೀಂದ್ರ ವೈ. ಶೆಟ್ಟಿ, ಜೊತೆ ಕಾರ್ಯದರ್ಶಿ ಕುಂಠಿನಿ ಪ್ರಕಾಶ್‌ ಹೆಗ್ಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಭಾರತಿ ಬಿ. ಶೆಟ್ಟಿ, ಕಾರ್ಯದರ್ಶಿ ಗಿರಿಜಾ ವಿ. ಸೊಗಲದ, ಕಾರ್ಯಕಾರಿ ಸಮಿತಿಯ ಸದಸ್ಯೆ ಉಮಾ ಹುನ್ಸಿಮರ ಉಪಸ್ಥಿತರಿದ್ದರು. ಶಿಕ್ಷಕ ಶಂಕರ ಆರ್‌. ರಾಥೋಡ್‌, ಶಿಕ್ಷಕಿಯರಾದ ಜಯಂತಿ ದಾಂಡೇಕರ್‌, ಶ್ರೀದೇವಿ ಸ್ವಾಮಿ, ಪದ್ಮಜಾ ಪಾಚಾಪುರRರ್‌, ಕಮಲಾ ಪೂಜಾರಿ ಅವರು ಕೇಂದ್ರದ ಸದಸ್ಯರುಗಳಿಗೆ, ಅತಿಥಿಗಳನ್ನು ಪುಷ್ಪಗುಚ್ಚವನ್ನಿತ್ತು ಸ್ವಾಗತಿಸಿದರು. ಜಯಂತಿ ದಾಂಡೇಕರ್‌ ವಂದಿಸಿದರು.

ಯಾವುದೇ ಮಾಧ್ಯಮದಲ್ಲಿ ಕಲಿತರೂ ಇಲ್ಲಿ ಭಾಷೆ ಮುಖ್ಯವಾಗುವುದಿಲ್ಲ. ನಮ್ಮ ಮಾತೃಭಾಷೆಯಲ್ಲಿ ಶಿಕ್ಷಣ ಪಡೆದು ದೇಶದ ಒಳ್ಳೆಯ ಪ್ರಜೆಯಾಗುವುದು ಬಹಳ ಮುಖ್ಯ. ನಮ್ಮ ಜ್ಞಾನ ಭಂಡಾರವನ್ನ ಹೆಚ್ಚಿಸಿಕೊಳ್ಳುವುದು ಮುಖ್ಯ. ಸುಶೀಕ್ಷಿತರಾಗಿ ಬೆಳೆದು ಯೋಗ್ಯ ನಾಗರಿಕರಾಗುವುದು, ಸಂಸ್ಕಾರ
ಯುತವಾದ ಬದುಕು ನಡೆಸುವುದು ಬಹಳ ಮುಖ್ಯ. ಶಿಕ್ಷಕರು ತಿಳಿಸಿದ ವಿಷಯಗಳನ್ನು ಚೆನ್ನಾಗಿ ಅರಗಿಸಿಕೊಂಡು ಉತ್ತಮ ಅಂಕಗಳನ್ನು ಪಡೆಯುವುದು ವಿದ್ಯಾರ್ಥಿಗಳ ಕರ್ತವ್ಯವಾಗಬೇಕು. ಕನ್ನಡ ಮಾಧ್ಯಮದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ ಎಂಬ ಸಂಶಯ ಪಾಲಕರಿಗೆ ಬೇಡ. ಆದರೆ ಕನ್ನಡದ ಜೊತೆಗೆ ಇಂಗ್ಲೀಷ್‌ ಮತ್ತು ಮರಾಠಿ ಭಾಷೆಗಳನ್ನು ಕಲಿಯುವುದು ಬಹಳ ಮುಖ್ಯ. ಇಂದಿನ ಜಾಗತೀಕರಣದ ಯುಗದಲ್ಲಿ ಎಲ್ಲಾ ಭಾಷೆಗಳ ಅಗತ್ಯತೆಯಿದೆ.
– ಶಂಕರ ಟಿ. ಶೆಟ್ಟಿ, ಉದ್ಯಮಿ, ಸಮಾಜ ಸೇವಕ

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.