ದಕ್ಷಿಣದಲ್ಲಿ ನೆರೆ, ಉತ್ತರದಲ್ಲಿ ಬರೆ!

Team Udayavani, Jul 28, 2018, 6:35 AM IST

babhima-river.jpg

ಹುಬ್ಬಳ್ಳಿ: ರಾಜ್ಯದ ಮಲೆನಾಡು ಸೇರಿ ದಕ್ಷಿಣ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆ ನಿರೀಕ್ಷೆಗೂ ಮೀರಿ ಸುರಿದಿದ್ದರೆ, ಉತ್ತರ ಕರ್ನಾಟಕದ ಒಂಭತ್ತು ಜಿಲ್ಲೆಗಳಲ್ಲಿ ವರುಣನ ಕಣ್ಣಾಮುಚ್ಚಾಲೆ ಮುಂದುವರಿದಿದೆ. ಬಿತ್ತಿರುವ ಬೆಳೆ ಒಣಗುತ್ತಿದ್ದು ರೈತರು ಮಳೆಗಾಗಿ ಮುಗಿಲು ನೋಡುತ್ತಿದ್ದಾರೆ. ಈ ಜಿಲ್ಲೆಗಳಲ್ಲಿ ಬರಗಾಲ ಭೀತಿ ಎದುರಾಗಿದ್ದು, ಬಿತ್ತನೆಗಾಗಿ ಸಾಲ ಮಾಡಿರುವ ರೈತರು ಕೆಲಸ ಅರಸಿ ಗುಳೆ ಆರಂಭಿಸಿದ್ದಾರೆ. 

ಕಳೆದ ನಾಲ್ಕು ವರ್ಷಗಳಿಂದಲೂ ಉತ್ತರ ಕರ್ನಾಟಕ ಭಾಗ ಮಳೆ ಕೊರತೆ ಅನುಭವಿಸಿತ್ತು. ಆಲಮಟ್ಟಿ, ತುಂಗಭದ್ರಾ, ನಾರಾಯಣಪುರ, ಘಟಪ್ರಭಾ, ಹಿಡಕಲ್‌ ಸೇರಿ ಪ್ರಮುಖ ಜಲಾಶಯಗಳು ಭರ್ತಿಯಾಗಿರಲಿಲ್ಲ. ಪ್ರಸಕ್ತ ವರ್ಷ ಆರಂಭದಲ್ಲಿ ಮುಂಗಾರು ಉತ್ತಮವಾಗುವ ಲಕ್ಷಣ ಕಂಡರೂ ಕಾಲಕ್ರಮೇಣ ಮಳೆ ಕೊರತೆ ಎದುರಾಗಿದೆ. ಮೇಲ್ಭಾಗದಲ್ಲಿ ಉತ್ತಮ ಮಳೆಯಾಗಿರುವುದರಿಂದ ಜಲಾಶಯಗಳು ಭರ್ತಿಯಾಗಿದ್ದರೂ ಬರದ ಛಾಯೆ ಆವರಿಸಿದೆ.

ಗದಗ, ಕೊಪ್ಪಳ, ಬಳ್ಳಾರಿ, ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್‌, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಬರಗಾಲ ಸ್ಥಿತಿ ನಿರ್ಮಾಣವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಕಳೆದ 16 ವರ್ಷದಲ್ಲಿ 11 ವರ್ಷಗಳ ಕಾಲ ಬರದ ಪರಿಸ್ಥಿತಿ ಇತ್ತು. 2.50 ಲಕ್ಷ ಹೆಕ್ಟೇರ್‌ ಪ್ರದೇಶದ ಪೈಕಿ 1.70 ಲಕ್ಷ ಹೆಕ್ಟೇರ್‌ ಈಗಾಗಲೇ ಬಿತ್ತನೆಯಾಗಿದ್ದು, ಬೆಳೆಗಳು ಒಣಗುತ್ತಿವೆ. ಕೊಪ್ಪಳ ತಾಲೂಕಿನ ಕುಣಕೇರಿ ತಾಂಡಾ, ಕುಷ್ಟಗಿ ತಾಲೂಕಿನ ತಾವರಗೇರಾ ವ್ಯಾಪ್ತಿಯ ಸಾಸ್ವಿಹಳ್ಳಿ, ಜುಮಲಾಪುರ ಸೇರಿ ಹಲವು ಹಳ್ಳಿಗಳಲ್ಲಿ ಊರಿನ ಜನರೆಲ್ಲ ಮನೆಯಲ್ಲಿ ವೃದ್ಧರು, ಅಂಗವಿಕಲರನ್ನು ಬಿಟ್ಟು ಲಾರಿಗಳಲ್ಲಿ ತಂಡೋಪತಂಡವಾಗಿ ಗುಳೆ ಹೋಗಿದ್ದಾರೆ. ಕೆಲಸ ಅರಸಿ ಬೆಂಗಳೂರು, ಪಕ್ಕದ ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೆ ತೆರಳಿದ್ದಾರೆ.

ಬತ್ತಿದ ಭೀಮಾ ನದಿ:
ಕಲಬುರಗಿ ಜಿಲ್ಲೆಯಲ್ಲಿ ಶೇ.42ರಷ್ಟು ಮಳೆ ಕೊರತೆಯಾಗಿದೆ. 6 ಲಕ್ಷ ಹೆಕ್ಟೇರ್‌ ಪೈಕಿ 5 ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ಬಿತ್ತನೆಯಾಗಿದ್ದರೂ ಮಳೆ ಕೊರತೆಯಿಂದ ಬೆಳೆಗಳು ಬಾಡುತ್ತಿವೆ. ಭೀಮಾ, ಬೆಣ್ಣೆತೋರಾ, ಅಮರ್ಜಾ, ಭೀಮಾ ಏತ ನೀರಾವರಿ, ಕಾರಂಜಾ ಸೇರಿ ಇತರ ಜಲಾಶಯಗಳು ಬತ್ತಿದ್ದು, ಕುಡಿಯುವ ನೀರಿಗೆ ಈಗಲೇ ಪರದಾಟ ಶುರುವಾಗಿದೆ. ಇದೇ ಸ್ಥಿತಿ ಕೆಳದಂಡೆ ಮುಲ್ಲಾಮಾರಿ, ಚುಳುಕಿನಾಲಾ, ಅಮರ್ಜಾ, ಗಂಡೋರಿ ನಾಲಾ ಜಲಾಶಯದಲ್ಲೂ ಇದೆ. ಬೀದರ್‌ ಜಿಲ್ಲೆಯ ಕಾರಂಜಾ ಜಲಾಶಯದಲ್ಲಿ 7.69 ಟಿಎಂಸಿ ಅಡಿ ನೀರಿನ ಸಂಗ್ರಹಣಾ ಸಾಮರ್ಥ್ಯವಿದ್ದರೂ 3.49 ಅಡಿಗೆ ತಲುಪಿದೆ. ಯಾದಗಿರಿ ಜಿಲ್ಲೆಯ ಹತ್ತಿಕುಣಿ ಜಲಾಶಯ ಸಂಪೂರ್ಣ ಬತ್ತಿ ಹೋಗಿದೆ.

ರೈತರು ಕಂಗಾಲು:
ಬೀದರ್‌ ಜಿಲ್ಲೆಯಲ್ಲಿ ಶೇ.18ರಷ್ಟು ಮಳೆ ಕೊರತೆಯಾಗಿದ್ದು, 3.39 ಲಕ್ಷ ಹೆಕ್ಟೇರ್‌ ಕೃಷಿ ಭೂಮಿ ಪೈಕಿ 3.22 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಸೋಯಾ, ಹೆಸರು, ಉದ್ದು ಬಿತ್ತನೆ ಮಾಡಲಾಗಿದ್ದು, ಬೆಳೆ ಒಣಗುತ್ತಿವೆ. ಯಾದಗಿರಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.25ರಷ್ಟು ಮಳೆ ಕೊರತೆಯಾಗಿದೆ. ಗುರುಮಠಕಲ್‌, ಯಾದಗಿರಿ ತಾಲೂಕಿನ ಜನರು ಬೆಂಗಳೂರು, ಮುಂಬೈಗೆ ಹೋಗುತ್ತಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಶೇ.41ರಷ್ಟು ಮುಂಗಾರು ಮಳೆ ಕೊರತೆಯಾಗಿದ್ದು, ಶೇ.31ರಷ್ಟು ಮಾತ್ರ ಬಿತ್ತನೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ, ಬೀಳಗಿ ಮತ್ತು ಜಮಖಂಡಿ ಭಾಗದಲ್ಲಿ ಮಳೆ ಕೊರತೆಯಿಂದ ಕಬ್ಬು ಬೆಳೆ ಒಣಗಿ ಹೋಗುತ್ತಿದೆ. ಸಜ್ಜೆ, ಗೋವಿನ ಜೋಳ, ತೊಗರಿ, ಸೂರ್ಯಕಾಂತಿ, ಹೆಸರು ಬಿತ್ತನೆ ಮಾಡಿದ ರೈತರು ಕಂಗಾಲಾಗಿದ್ದಾರೆ.

ದ್ರಾಕ್ಷಿ ನಾಡಲ್ಲೂ ಬರ:
ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಸುರಿದ ಭಾರಿ ಮಳೆಗೆ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದರೂ ವಿಜಯಪುರ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದೆ. 2.74 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆದಿರುವ ಬೆಳೆಗೆ ತುರ್ತಾಗಿ ತೇವಾಂಶ ಬೇಕಿದೆ. ಒಂದು ವಾರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಯದಿದ್ದರೆ ಬರ ಖಚಿತ. ಮತ್ತೂಮ್ಮೆ ಗುಳೆ ನಾಡಿನ ಜನರು ಬದುಕನ್ನರಸಿ ಗುಳೆ ಹೋಗಲು ಸಿದ್ಧವಾಗುತ್ತಿದ್ದಾರೆ. 

ಕೈ ಹಿಡಿಯದ ಉದ್ಯೋಗ ಖಾತ್ರಿ
ಬರಪೀಡಿತ ಜಿಲ್ಲೆಗಳಲ್ಲಿ ಉದ್ಯೋಗ ಖಾತ್ರಿ ಕೈ ಹಿಡಿಯುತ್ತಿಲ್ಲ. ಅಂಕಿಸಂಖ್ಯೆಯಲ್ಲಿ ಮಾತ್ರ ಲೆಕ್ಕ ತೋರಿಸುವ ಅಧಿಕಾರಿಗಳು ಗುಳೆ ಹೋಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಮರ್ಪವಾಗಿ ಯೋಜನೆ ಜಾರಿಗೆ ಯತ್ನಿಸುತ್ತಿಲ್ಲ. ಸ್ಥಳೀಯವಾಗಿಯೇ ನಿತ್ಯ ಕೆಲಸಕ್ಕೆ 249 ರೂ. ಕೂಲಿ ಪಡೆಯಬಹುದಾಗಿದ್ದರೂ ಸರಿಯಾದ ಸಮಯಕ್ಕೆ ಉದ್ಯೋಗ ಸಿಗುತ್ತಿಲ್ಲ. 

ಕಲಬುರಗಿ ಜಿಲ್ಲೆಯಲ್ಲಿ ಮಳೆ ಹಾಗೂ ಬೆಳೆಗಳ ಸ್ಥಿತಿಗತಿ ಕುರಿತಾಗಿ ಸರ್ಕಾರಕ್ಕೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ವರದಿ ತಿಳಿಸಲಾಗಿದೆ. ಜು.30, 31ರಂದು ಮುಖ್ಯಮಂತ್ರಿಯವರು ಕರೆದಿರುವ ಸಭೆಯಲ್ಲಿ ಸಮಗ್ರವಾದ ವರದಿ ಸಲ್ಲಿಸಲಾಗುವುದು. ಜಿಲ್ಲೆಯಲ್ಲಿ ಮಳೆ ಕೊರತೆಯುಂಟಾಗಿದೆ.
– ಆರ್‌. ವೆಂಕಟೇಶಕುಮಾರ, ಜಿಲ್ಲಾಧಿಕಾರಿ, ಕಲಬುರಗಿ

ಈಗಾಗಲೇ ಮುಂಗಾರು ಹಂಗಾಮಿಗೆ ಬಿತ್ತನೆ ಅವ ಧಿ ಮುಗಿಯುತ್ತಿದೆ. ಹೀಗಾಗಿ ಪರ್ಯಾಯ ಬೆಳೆ ಬೆಳೆಯಲು ರೈತರಿಗೆ ಸೂಚನೆ ನೀಡುತ್ತಿದ್ದೇವೆ. ಒಂದು ಸಾಲು ತೊಗರಿ ಹಾಗೂ ಎರಡು ಸಜ್ಜೆ, ಶೇಂಗಾ, ಹೆಸರು, ಮೆಕ್ಕೆಜೋಳದಂಥ ಬೆಳೆ ಬೆಳೆಯಲು ತಿಳಿಸಲಾಗುತ್ತಿದೆ.
– ಡಾ.ಚೇತನಾ ಪಾಟೀಲ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಯಚೂರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.