ಶಾಸಕ ಕುಮಾರಸ್ವಾಮಿಗೆ ಹೈಕೋರ್ಟ್ ನೋಟಿಸ್
Team Udayavani, Jul 28, 2018, 6:50 AM IST
ಬೆಂಗಳೂರು: ಮತ ಎಣಿಕೆ ಕಾರ್ಯದಲ್ಲಿ ಲೋಪವಾಗಿದೆ ಎಂದು ಆರೋಪಿಸಿ ಸಲ್ಲಿಕೆಯಾದ ಅರ್ಜಿಗೆ ಸಂಬಂಧಿಸಿದಂತೆ ಸಕಲೇಶಪುರ ಶಾಸಕ ಎಚ್.ಕೆ. ಕುಮಾರಸ್ವಾಮಿಗೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.
ಈಚೆಗೆ ನಡೆದ ವಿಧಾನಸಭಾ ಚುನಾವಣೆ ವೇಳೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯದಲ್ಲಿ ಲೋಪವಾಗಿದೆ ಎಂದು ಆರೋಪಿಸಿ ಎ.ವಿ.ನರೇಶ್ ಎಂಬುವರು ಸಲ್ಲಿಸಿದ ಚುನಾವಣಾ ತಕಾರರು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಸ್.ಸುಜಾತ,
ಶಾಸಕ ಎಚ್.ಕೆ. ಕುಮಾರಸ್ವಾಮಿ ಸೇರಿ ಏಳು ಮಂದಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಆ.31ಕ್ಕೆ ಮುಂದೂಡಿದರು.
ಸಕಲೇಶಪುರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಸೋಮಶೇಖರ್ ಜಯರಾಜ್ ಪರ ಚುನಾವಣಾ ಪ್ರಚಾರ ಮಾಡಿದ್ದ ಎ.ವಿ. ನರೇಶ್ ತಾಲೂಕಿನ ಅರಕೆರೆಯ ಮತದಾರ. ಕುಮಾರಸ್ವಾಮಿ ಆಯ್ಕೆಯನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಅವರು,
ಇವಿಎಂ ಮತಯಂತ್ರಗಳ ಮತ ಎಣಿಕೆ ಕಾರ್ಯದಲ್ಲಿ ಸಾಕಷ್ಟು ಲೋಪಗಳಾಗಿವೆ ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.