ಕೇಂದ್ರ ಸರಕಾರಕ್ಕೆ ಎಲ್ಜೆಪಿ ಗಡುವು
Team Udayavani, Jul 28, 2018, 6:00 AM IST
ಹೊಸದಿಲ್ಲಿ: ಬಿಹಾರದಲ್ಲಿ ಜೆಡಿಯು ಜತೆಗಿನ ಸ್ಥಾನ ಹೊಂದಾಣಿಕೆ ವಿಚಾರ ಬಗೆಹರಿಯುತ್ತಲೇ ಬಿಜೆಪಿಗೆ ಮತ್ತೂಂದು ಸವಾಲು ಎದುರಾಗಿದೆ. ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನೇತೃತ್ವದ ಎಲ್ಜೆಪಿ, ಎನ್ಜಿಟಿ ಅಧ್ಯಕ್ಷ ನ್ಯಾ| ಎ.ಕೆ.ಗೋಯಲ್ ಅವರನ್ನು ಆ ಹುದ್ದೆಯಿಂದ ವಜಾ ಮಾಡಬೇಕು ಹಾಗೂ ಕೇಂದ್ರ ಎಸ್ಎಸಿ, ಎಸ್ಟಿ ದೌರ್ಜನ್ಯ ಕಾಯ್ದೆ ಬದಲಾಗಿ ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರವನ್ನು ಹಾಲಿ ಅಧಿವೇಶನದಲ್ಲಿಯೇ ಪ್ರಕಟಿಸಬೇಕು ಎಂದು ಒತ್ತಾಯಿಸಿದೆ.
ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಶೀಘ್ರವೇ ದಲಿತ ಸಂಘಟನೆಗಳು ಕೇಂದ್ರದ ವಿರುದ್ಧ ನಡೆಸಲಿರುವ ಪ್ರತಿಭಟನೆಯಲ್ಲಿ ತಾವೂ ಭಾಗವಹಿಸುವುದಾಗಿ ಎಲ್ಜೆಪಿ ಎಚ್ಚರಿಕೆ ನೀಡಿದೆ. ಇದಕ್ಕೆ ಆ.9ರ ಗಡು ವನ್ನು ನೀಡಿದೆ. ಇಲ್ಲದೇ ಹೋದಲ್ಲಿ ಎನ್ಡಿಎ ಮೈತ್ರಿಕೂಟದಿಂದ ಹೊರ ನಡೆಯುವ ಅಂಶ ವನ್ನೂ ಪರಿಶೀಲಿಸಬೇಕಾಗುತ್ತದೆ ಎಂದು ಎಲ್ಜೆಪಿ ನಾಯಕ ಚಿರಾಗ್ ಪಾಸ್ವಾನ್ ಎಚ್ಚರಿಕೆ ನೀಡಿದ್ದಾರೆ. ಇದೇ ವಿಚಾರಕ್ಕೆ ಸಂ ಬಂಧಿಸಿ ದಲಿತ ಸಂಘಟನೆಗಳು ಆ.10 ರಂದು ಭಾರತ್ ಬಂದ್ಗೆ ಕರೆ ನೀಡಿವೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.