ಹೆಜಮಾಡಿ ಟೋಲ್‌ ಫ್ಲಾಝಾ


Team Udayavani, Jul 28, 2018, 6:25 AM IST

2707ra5e.jpg

ಪಡುಬಿದ್ರಿ: ಹೆಜಮಾಡಿಯಲ್ಲಿ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿ 66ರ ಟೋಲ್‌ ಫ್ಲಾಝಾದಿಂದ ಸಂತ್ರಸ್ತರಾದ 14 ಕುಟುಂಬಗಳಿಗೆ ನಿರಂತರ ಹೋರಾಟದ ಫಲವಾಗಿ ಹೆಜಮಾಡಿ ಗ್ರಾ. ಪಂ. ಬಳಿಯ ಸರಕಾರಿ ಜಮೀನಿನಲ್ಲಿ ನಿರ್ಮಿತಿ ಕೇಂದ್ರದಿಂದ ಮನೆಗಳು ವಸತಿ ಯೋಜನೆಯಡಿ ನಿರ್ಮಾಣ ಹಂತದಲ್ಲಿದೆ.
 
ಈ ಕುಟುಂಬಗಳು ರಾಷ್ಟ್ರೀಯ ಹೆದ್ದಾರಿ 66ರ ಶಿವನಗರದಲ್ಲಿ ಕಳೆದ ಸುಮಾರು 20 ವರ್ಷಗಳಿಂದ ವಾಸಿಸುತ್ತಿದ್ದವು. ಈ ಕುಟುಂಬಗಳಲ್ಲಿ ಕೆಲವೇ ಮಂದಿಗಷ್ಟೇ ಹಕ್ಕುಪತ್ರ ಲಭಿಸಿತ್ತು. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ಭೂಸ್ವಾಧೀನವಾದಾಗ ಈ ಕುಟುಂಬಗಳಿಗೆ ಪರಿಹಾರವೂ ದೊರಕಿತ್ತು. ಆದರೆ ಸೂಕ್ತ ನಿವೇಶನ ಇಲ್ಲದೆ ಭೂಸ್ವಾಧೀನಗೊಂಡ ಜಾಗದಲ್ಲಿಯೇ 14 ಕುಟುಂಬಗಳು ವಾಸಿಸುತಿದ್ದವು. ಸೂಕ್ತ ನಿವೇಶನ ನೀಡುವಂತೆ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಹಲವು ಭಾರೀ ಹೋರಾಟ ನಡೆದಿತ್ತು. ಗ್ರಾಮಸಭೆಗಳಲ್ಲೂ ಪ್ರತಿಧ್ವನಿಸಿತ್ತು.  ಬಳಿಕ ಸಂತ್ರಸ್ತ  ಕುಟುಂಬಗಳಿಗೆ ಪಂಚಾಯತ್‌ ಬಳಿ ಇರುವ 48 ಸೆಂಟ್ಸ್‌ ಸರಕಾರಿ ಜಮೀನಿನಲ್ಲಿ ಪ್ರತೀ ಕುಟುಂಬಕ್ಕೂ 2.12 ಸೆಂಟ್ಸ್‌ ಜಮೀನು ವಿಂಗಡಿಸಿಕೊಡಲಾಗಿತ್ತು. 

ಬಸವ ವಸತಿ ಯೋಜನೆಯಲ್ಲಿ ಮನೆ
ಸರಕಾರದ ಬಸವ ವಸತಿ ಯೋಜನೆಯಡಿ ತಲಾ 250 ಚದರ ಅಡಿಗಳ 14 ಮನೆಗಳನ್ನು ಇಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರ ನವಯುಗ ಕಂಪೆನಿಯ 9 ಲಕ್ಷ ರೂ. ಅನುದಾನ ಬಳಸಿ ಒಟ್ಟು ರೂ. 31 ಲಕ್ಷ ವೆಚ್ಚದಲ್ಲಿ ಈ ಮನೆಗಳಿಗೆ ನಿರ್ಮಾಣವಾಗುತ್ತಿದೆ. ಇದರಲ್ಲಿ 6 ಪರಿಶಿಷ್ಟ ಜಾತಿ, ಒಂದು ಅಲ್ಪಸಂಖ್ಯಾತ ಹಾಗೂ ಇತರ ವರ್ಗದ 7 ಕುಟುಂಬಗಳಿವೆ. ಬಸವ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿಯ 6 ಫಲಾನುಭವಿಗಳಿಗೆ ತಲಾ ರೂ. 1.65 ಲಕ್ಷ ಹಾಗೂ ಇತರರಿಗೆ ತಲಾ ರೂ 1.50 ಲಕ್ಷ ಅನುದಾನ ಬಿಡುಗಡೆಯಾಗಲಿದೆ. ಈಗಾಗಲೇ ಪ್ರಥಮ ಹಂತದ ಮೊತ್ತ ಬಿಡುಗಡೆಯಾಗಿದ್ದು, ಬಾಕಿಯಿರುವ ಮೊತ್ತ ಹಂತ ಹಂತವಾಗಿ ಬಿಡುಗಡೆಯಾಗಲಿದೆ. ವಸತಿ ನಿರ್ಮಾಣ ಕಾಮಗಾರಿಯನ್ನು ಉಡುಪಿ ನಿರ್ಮಿತಿ ಕೇಂದ್ರಕ್ಕೆ ವಹಿಸಿಕೊಡಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ಮನೆಗಳು ಪೂರ್ಣಗೊಳ್ಳಲಿವೆ.
  
ಹೇಗಿರಲಿದೆ ಮನೆ?
ನಿರ್ಮಾಣ ಹಂತದಲ್ಲಿರು ಈ ಮನೆಗಳಲ್ಲಿ ಅಡುಗೆ ಕೋಣೆ, ಹಾಲ್‌, ಹಾಗೂ ಬೆಡ್‌ರೂಂ ಒಳಗೊಂಡಿದೆ.  ಹಿಂದಿನ ಯೋಜನೆ ಪ್ರಕಾರ ಅಡುಗೆ ಕೋಣೆಗೆ ಹೊಂದಿಕೊಂಡು ಶೌಚಾಲಯವೂ ಸೇರಿತ್ತು. ಅಡುಗೆ ಕೋಣೆಯಲ್ಲಿ ಸ್ಥಳಾವಕಾಶ ಕಡಿಮೆಯಾಗುವ ಕಾರಣದಿಂದ ಮನೆ ಹೊರಭಾಗದಲ್ಲಿ ಪ್ರತ್ಯೇಕವಾಗಿ ಶೌಚಾಲಯವನ್ನು ನಿರ್ಮಾಣ  ಮಾಡಲಾಗುತ್ತಿದೆ. ಶೌಚಾಲಯ ನಿರ್ಮಾಣಕ್ಕೆ ಪ್ರತ್ಯೇಕವಾಗಿ ಸರಕಾರದಿಂದ ರೂ. 12 ಸಾವಿರ ಲಭ್ಯವಾಗಲಿದ್ದು, ಇದೂ ಫಲಾನುಭವಿಗಳಿಗೆ ದೊರಕಲಿದೆ.

ಟಾಪ್ ನ್ಯೂಸ್

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.