ನಗರದೆಲ್ಲೆಡೆ ಗುರುಪೌರ್ಣಿಮೆ ಸಂಭ್ರಮ-ವಿವಿಧ ಕಾರ್ಯಕ್ರಮ


Team Udayavani, Jul 28, 2018, 10:59 AM IST

dvg-1.jpg

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ಶುಕ್ರವಾರ ಹೋಮ, ಹವನ, ಉಪನ್ಯಾಸ, ಅನ್ನ ಸಂತರ್ಪಣೆ… ವಿವಿಧ ರಚನಾತ್ಮಕ ಕಾರ್ಯಕ್ರಮದ ಮೂಲಕ ಗುರುಪೌರ್ಣಿಮೆಯನ್ನು ಶ್ರದ್ಧಾಪೂರ್ವಕವಾಗಿ ಆಚರಿಸಲಾಯಿತು.

ಶ್ರೀ ಶಿರಡಿ ಸಾಯಿಬಾಬಾ ಸೇವಾ ಕಲ್ಯಾಣ ಟ್ರಸ್ಟ್‌ನಿಂದ ತೊಗಟವೀರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಗುರುಪೌರ್ಣಿಮೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಬಾಳೆಹೊಸೂರಿನ ಶ್ರೀ ದಿಂಗಾಲೇಶ್ವರ ಸ್ವಾಮಿಜಿ, ನವಗ್ರಹಗಳಲ್ಲಿ ಅತಿ ದೊಡ್ಡದಾದ ಗ್ರಹ ಗುರು. ಅಂತೆಯೇ ಲೌಕಿಕ ಬದುಕಿನಲ್ಲಿ ಗುರುವಿನ ಸ್ಥಾನ ಅತ್ಯಂತ ಪ್ರಮುಖ. ಗುರುವಿನ ಒಲುಮೆಯ ಪಡೆಯಲು ಸಾಕಷ್ಟು ಪರಿಶ್ರಮ
ಪಡಬೇಕಾಗುತ್ತದೆ. ಹರ ಮುನಿದರೂ ಗುರು ಕಾಯುವನು… ಎನ್ನುವ ಮಾತಿನಂತೆ ಗುರು ನಮ್ಮನ್ನು ಸದಾ ಕಾಪಾಡುತ್ತಾನೆ. ಅಂತಹ ಗುರುವಿನ ಕೃಪೆಗೆ ಎಲ್ಲರೂ ಪಾತ್ರರಾಗಬೇಕು ಎಂದು ತಿಳಿಸಿದರು.

ತಂದೆ-ತಾಯಿ ಸಹ ನಮಗೆ ಗುರುಗಳು. ತಾಯಿ ಮೊದಲ ಗುರು. ಗುರುವಿನ ಮೂಲಕ ಲೌಕಿಕ ಮಾತ್ರವಲ್ಲ ಆಧ್ಯಾತ್ಮಿಕ ಶಿಕ್ಷಣ ಪಡೆಯಬಹುದು. ಜಗತ್ತಿನಲ್ಲಿ ಆಧ್ಯಾತ್ಮಿಕ ಸಂಪತ್ತು ನೀಡುವಂತಹ ನೆಮ್ಮದಿಯನ್ನು  ಬೇರೆ ಯಾವ ಸಂಪತ್ತಿನಿಂದಲೂ ಪಡೆಯಲಿಕ್ಕೆ ಸಾಧ್ಯ ಇಲ್ಲ. ಅನೇಕರು ಹಣದ ಸಂಪತ್ತಿನ ಮೂಲಕ ನೆಮ್ಮದಿ ಪಡೆಯಬಹುದು ಅಂದುಕೊಂಡಿದ್ದಾರೆ. ಹಣದ ಬಲದಿಂದ ಪಡೆಯುವ ನೆಮ್ಮದಿ ಕ್ಷಣಿಕ. ಆಧ್ಯಾತ್ಮಿಕ ಸಂಪತ್ತು ಶಾಶ್ವತ. ಅಂತಹ ಸಂಪತ್ತು ದೊರೆಯುವುದು ಗುರುವಿನ ಮೂಲಕ. ನಾವೆಲ್ಲರೂ ಗುರುವಿಗೆ
ತಲೆಬಾಗಬೇಕು ಎಂದು ತಿಳಿಸಿದರು. 

ಶ್ರೀ ಶಿರಡಿ ಸಾಯಿಬಾಬಾ ಸೇವಾ ಕಲ್ಯಾಣ ಟ್ರಸ್ಟ್‌ನಿಂದ ಪ್ರಥಮ ಬಾರಿಗೆ ಗುರುಪೌರ್ಣಿಮೆ ನಡೆಸುತ್ತಿರುವುದು ಸಂತೋಷದ ವಿಚಾರ. ಸಂಘ-ಸಂಸ್ಥೆಗಳು ನೀ-ನಾ ಎನ್ನುವುದು ಬಿಟ್ಟು ನಾವು ಎಂಬ ಮನೋಭಾವನೆಯೊಂದಿಗೆ ಸಾಮಾಜಿಕ, ಧಾರ್ಮಿಕ ಸೇವಾ ಕಾರ್ಯದಲ್ಲಿ ತೊಡಗಬೇಕು ಎಂದು ತಿಳಿಸಿದರು.

ಟ್ರಸ್ಟ್‌ ಅಧ್ಯಕ್ಷ ಶಿವಮೂರ್ತಿ ಇಟ್ಟಿಗುಡಿ, ಉಪಾಧ್ಯಕ್ಷರಾದ ಸರ್ಫರಾಜ್‌ ಅಲಿಖಾನ್‌, ಎಸ್‌.ಬಿ. ಜಿನದತ್ತ, ಪ್ರಧಾನ ಕಾರ್ಯದರ್ಶಿ ಕೆ.ಸಿ. ಲಿಂಗರಾಜ್‌, ಸೂರಜ್‌, ಜಿ. ಬಸವರಾಜ್‌ ಇತರರು ಇದ್ದರು. 

ಶ್ರೀ ಶಿರಡಿ ಸಾಯಿ ಭಿಕ್ಷಾ ಕೇಂದ್ರದ ದಾವಣಗೆರೆ ಶಾಖೆಯಿಂದ ಆರ್‌.ಎಚ್‌. ಮಿನಿ ಛತ್ರದಲ್ಲಿ ಮುದ್ರಾ ಶಿರೋಮಣಿ ಎಂದೇ
ಖ್ಯಾತರಾಗಿರುವ ಶ್ರೀ ಲಕ್ಷ್ಮೀ ಶ್ರೀನಿವಾಸ ಗುರೂಜಿ ಸಾನ್ನಿಧ್ಯದಲ್ಲಿ ದತ್ತಾತ್ರೇಯ ಹೋಮ, ಸನ್ಮಾನ, ಅನ್ನ ಸಂತರ್ಪಣೆ ನಡೆಯಿತು. ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಶ್ರೀ ಶಿರಡಿ ಸಾಯಿಬಾಬಾ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಪಾಲಕಿ ಉತ್ಸವ, ಧುನಿ ಪೂಜೆ, ಶೇಜಾರತಿ, ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು. ಶಿವಾಜಿ ನಗರದ ಐರಣಿ ಶಾಖಾ ಮಠದಲ್ಲಿ ಉಪನ್ಯಾಸ ನಡೆಯಿತು.

ಹಳೆ ಪಿಬಿ ರಸ್ತೆಯ ಕರೂರು ಕ್ರಾಸ್‌ನಲ್ಲಿರುವ ಶ್ರೀ ಮಾತಾ ಮಾಣಿಕ್ಯೇಶ್ವರಿ ಸುಖಾಶ್ರಮದಲ್ಲಿ ಗುರುಪೌರ್ಣಿಮೆ, ಅಮ್ಮನವರ 85ನೇ ಜಯಂತ್ಯುತ್ಸವ ನಡೆಯಿತು. ಶ್ರೀ ಅಕ್ಕಮಹಾದೇವಿ ಸಮಾಜ. ಬಾಡ ಕ್ರಾಸ್‌ ಶ್ರೀ ವೀರೇಶ್ವರ ಪುಣ್ಯಾಶ್ರಮ. ಜಯದೇವ ವೃತ್ತದದ ದತ್ತ ಮಂದಿರ, ದೇವರಾಜ ಅರಸು ಬಡಾವಣೆಯ ಸಿ ಬ್ಲಾಕ್‌ನಲ್ಲಿರುವ ಆದರ್ಶ ಯೋಗ ಪ್ರತಿಷ್ಠಾನ, ಕೊಂಡಜ್ಜಿ ರಸ್ತೆಯ ವಿಜಯನಗರ ಬಡಾವಣೆ, ವಿವಿಧ ಶಾಲೆಯಲ್ಲಿ ಗುರುಪೌರ್ಣಿಮೆ ಕಾರ್ಯಕ್ರಮ ನಡೆದವು. 

ಟಾಪ್ ನ್ಯೂಸ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.