ನನೆಗುದಿಯಲ್ಲಿ ನ್ಯಾಯಾಧೀಶರ ವಸತಿ ಗೃಹ
Team Udayavani, Jul 28, 2018, 11:28 AM IST
ನಗರ : ನಗರದ ದರ್ಬೆ ಪರಿಸರದಲ್ಲಿ ಕಳೆದ ಹಲವು ವರ್ಷಗಳಿಂದ ನ್ಯಾಯಾಧೀಶರ ವಸತಿಗೃಹಗಳು ಉಪಯೋಗವಿಲ್ಲದೆ ಜೀರ್ಣಾವಸ್ಥೆಯಲ್ಲಿದೆ. ಇದರ ನವೀಕರಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಚಿಕ್ಕಮುಟ್ನೂರು ಕಲಿಯುಗ ಸೇವಾ ಸಮಿತಿ ವತಿಯಿಂದ ಲೋಕೋಪಯೋಗಿ ಸಚಿವರಿಗೆ ಮತ್ತು ಪುತ್ತೂರಿನ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ.
ಹೊಸ ಕಟ್ಟಡ ರಚನೆಯ ನೀಲ ನಕ್ಷೆಗಳು, ಎಷ್ಟು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡುವುದು ಇತ್ಯಾದಿಗಳ ಬಗ್ಗೆ ಸ್ಪಷ್ಟವಾದ ನಿರ್ಧಾರ ಮತ್ತು ಕಟ್ಟಡ ನಿರ್ಮಾಣ ವಿನ್ಯಾಸದಲ್ಲಿ ಉಂಟಾದ ವ್ಯತ್ಯಾಸಗಳು ಅನುದಾನ ಬಿಡುಗಡೆಯ ವಿಳಂಬಕ್ಕೆ ಕಾರಣ. ಈ ವಿಳಂಬದ ಕಾರಣದಿಂದ ಹಳೇ ಕಟ್ಟಡಗಳ ಸಮಾಗ್ರಿಗಳು ಕಳ್ಳಕಾಕರ ಪಾಲಾಗುತ್ತಿವೆ. ಮಳೆ, ಬಿಸಿಲುಗಳಿಗೆ ಛಾವಣಿ ಸಾಮಾಗ್ರಿಗಳು ಕೆಟ್ಟು ಹೋಗುತ್ತಿವೆ. ಪಾಳು ಬಿದ್ದಿರುವ ಕಟ್ಟಡದಲ್ಲಿ ಅನೈತಿಕ ಚಟುವಟಿಗಳಿಗೆ ಅವಕಾಶಗಳಾಗುತ್ತಿವೆ. ಆದ್ದರಿಂದ ವಸತಿಗೃಹ ನಿರ್ಮಾಣಕ್ಕೆ ಆಗಿರುವ ಗೊಂದಲಗಳನ್ನು ನಿವಾರಿಸುವಲ್ಲಿ ಮತ್ತು ಅನುದಾನಗಳ ಬಿಡುಗಡೆಗೆ ಕ್ರಮಕೈಗೊಳ್ಳುವಂತೆ ಸಚಿವರಿಗೆ ನೀಡಿದ ಮನವಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.