ದಿಲ್ಲಿಯಲ್ಲಿ ಅಪಾಯದ ಮಟ್ಟ ಮೀರಿದ ಯಮುನಾ ನದಿ; ನೆರೆ ಎಚ್ಚರಿಕೆ
Team Udayavani, Jul 28, 2018, 11:59 AM IST
ಹೊಸದಿಲ್ಲಿ : ದಿಲ್ಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ರಾಷ್ಟ್ರ ರಾಜಧಾನಿಯಲ್ಲಿ ನೆರೆಯ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಇನ್ನಷ್ಟು ಬಿರುಸು ಪಡೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ತಗ್ಗು ಪ್ರದೇಶ ವಾಸಿಗಳನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸುವ ಕೆಲಸವನ್ನು ಸಮರೋಪಾದಿಯಲ್ಲಿ ಮಾಡುವುದಕ್ಕಾಗಿ ನೀರಾವರಿ ಮತ್ತು ನೆರೆ ನಿಯಂತ್ರಣ ಇಲಾಖೆಯು ಸಾಕಷ್ಟು ಸಿದ್ದತೆಗಳನ್ನು ಮಾಡಿಕೊಂಡಿದೆ.
ಜು.27ರ ಶುಕ್ರವಾರ ಯಮುನಾ ನದಿಯು ದಿಲ್ಲಿಯ ಹಳೆ ರೈಲು ಸೇತುವೆಡಿ 204.10 ಮೀಟರ್ ತಲುಪಿದ್ದು ಇದು ಅಪಾಯದ ಮಟ್ಟವನ್ನು ದಾಟುವ ಎಲ್ಲ ಸೂಚನೆಗಳು ಕಂಡು ಬರುತ್ತಿವೆ ಎಂದು ಪೂರ್ವ ದಿಲ್ಲಿ ಜಿಲ್ಲಾಡಳಿತ ಹೇಳಿದೆ.
ತಗ್ಗು ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರಿಸುವುದಕ್ಕಾಗಿ ರಕ್ಷಣಾ ಬೋಟುಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಮೈಕ್ ಮೂಲಕ ಸುರಕ್ಷಾ ಸಲಹೆಗಳನ್ನು ಜಾಹೀರುಗೊಳಿಸಲಾಗುತ್ತಿದೆ. ಕ್ಷಿಪ್ರ ಸ್ಪಂದನ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.