ನೂತನ ಡಿಸಿ ಕಚೇರಿ ಸಂಕೀರ್ಣ 2019 ಡಿಸೆಂಬರ್‌ಗೆ ಸಿದ್ಧ : ಖಾದರ್
Team Udayavani, Jul 28, 2018, 12:18 PM IST
ಮಹಾನಗರ : ಪಡೀಲ್‌ನಲ್ಲಿ ನಿರ್ಮಾಣವಾಗುತ್ತಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕಾಮಗಾರಿ 2019ರ ಡಿಸೆಂಬರ್‌ಗೆ ಪೂರ್ಣಗೊಳ್ಳಲಿದೆ ಎಂದು ರಾಜ್ಯ ವಸತಿ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಯು.ಟಿ. ಖಾದರ್ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಕಟ್ಟಡ ಕಾಮಗಾರಿಯನ್ನು ಶುಕ್ರವಾರ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು 41 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದ್ದು ಈಗಾಗಲೇ 10 ಕೋ.ರೂ. ಮೊತ್ತದ ಕಾಮಗಾರಿ ನಡೆದಿವೆ. ಒಟ್ಟು 5.89 ಎಕ್ರೆ ಪ್ರದೇಶದಲ್ಲಿ 3,25,000 ಚದರ ಅಡಿ ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ನೆಲ ಅಂತಸ್ತು ಹಾಗೂ 2 ಮೇಲಂತಸ್ತುಗಳನ್ನು ಹೊಂದಿದ್ದು, ಒಟ್ಟ 234 ವಾಹನಗಳ ನಿಲುಗಡೆ ಸ್ಥಳಾವಕಾಶವಿದೆ. ಕಟ್ಟಡದಲ್ಲಿ ಡಿಸಿ ಕಚೇರಿ, ಕಂದಾಯ, ಆರೋಗ್ಯ, ನೀರಾವರಿ, ಕಾರ್ಮಿಕ ಇಲಾಖೆಯ ಕಚೇರಿ ಸಹಿತ ವಿವಿಧ ಇಲಾಖೆಯ ಕಚೇರಿಗಳು ಕಾರ್ಯಾಚರಿಸಲಿದೆ. ಕಟ್ಟಡಕ್ಕೆ ಆರೋಗ್ಯ ಇಲಾಖೆ 7 ಕೋ.ರೂ. ನೀರವಾರಿ ಇಲಾಖೆ 1 ಕೋ.ರೂ., ಕಾರ್ಮಿಕ ಇಲಾಖೆ 3 ಕೋ. ರೂ. ಮೊತ್ತ ನೀಡಿದೆ ಎಂದರು.
ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಸಿದ್ದರಾಮಯ ಸರಕಾರದಲ್ಲಿ ಮಂಜೂರಾತಿ ನೀಡಿ ಅನುದಾನ ಬಿಡುಗಡೆಗೊಳಿಸಿದ್ದು, ಆಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ಶಿಲಾನ್ಯಾಸ ನೆರವೇರಿಸಲಾಗಿತ್ತು. ಮಳೆಗಾಲದ ಅವಧಿ ಬಿಟ್ಟು ಒಟ್ಟು 18 ತಿಂಗಳಿನಲ್ಲಿ ಕಾಮಗಾರಿ ಪೂರ್ಣಗೊಳಿಸಲು ಗಡುವು ನಿಗದಿ ಪಡಿಸಲಾಗಿದೆ ಎಂದರು. ದಟ್ಟನೆ ಕಡಿಮೆಯಾಗಲಿದೆ ಪಡೀಲ್‌ನಲ್ಲಿ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣದಿಂದ ಹಂಪನಕಟ್ಟೆ ಪ್ರದೇಶದಲ್ಲಿ ವಾಹನ, ಜನ ದಟ್ಟನೆ ಕಡಿಮೆಯಾಗಲಿದೆ. ಇದಲ್ಲದೆ ಜಿಲ್ಲೆಯ ಎಲ್ಲ ಭಾಗಗಳಿಂದ ಸಂಪರ್ಕಕ್ಕೆ ಸುಲಭ ಸಾಧ್ಯವಾಗಲಿದೆ. ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಕ್ಕೆ ಕಲ್ಪಿಸುವ ನಿಟ್ಟಿನಲ್ಲಿ ಬಜಾಲ್ -ಜಪ್ಪಿನಮೊಗರು ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಸಚಿವರು ವಿವರಿಸಿದರು. ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಜೆ.ಆರ್. ಲೋಬೋ, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಕುಮಾರ್, ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು ಉಪಸ್ಥಿತರಿದ್ದರು.
2ನೇ ಹಂತದ ಅನುದಾನಕ್ಕೆ ಶೀಘ್ರ ಮನವಿ
ಕಚೇರಿಯ ಪೀಠೊಪಕರಣಗಳು, ಒಳಾಂಗಣ ಸಹಿತ ಪೂರಕ ಕಾಮಗಾರಿಗೆ 2ನೇ ಹಂತದ ಅನುದಾನಕ್ಕೆ ಸರಕಾರಕ್ಕೆ ಶೀಘ್ರದಲ್ಲೇ ಕೋರಿಕೆ ಸಲ್ಲಿಸಲಾಗುವುದು. ಕಾಮಗಾರಿ ಹಾಗೂ ಇತರ ವಿಚಾರಗಳ ಬಗ್ಗೆ ಇದರಲ್ಲಿ ಕಚೇರಿಗಳನ್ನು ಹೊಂದುವ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗುವುದು ಎಂದು ಖಾದರ್ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.