ಹಡಪದ ಅಪ್ಪಣ್ಣನ ಕಾಯಕ ತತ್ವ ಪಾಲಿಸಿ
Team Udayavani, Jul 28, 2018, 2:58 PM IST
ಆಳಂದ: 12ನೇ ಶತಮಾನದಲ್ಲಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ವಚನ ಸಾಹಿತ್ಯದ ಮೂಲಕ ಜನರ ಬಾಳು ಬೆಳಗಲು ಶ್ರಮಿಸಿದ ಶರಣ ಹಡಪದ ಅಪ್ಪಣ್ಣನ ಕಾಯಕ ಮತ್ತು ವಚನ ತತ್ವಗಳನ್ನು ಆಚರಣೆಗೆ ತರಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಶಾಸಕ ಸುಭಾಷ ಗುತ್ತೇದಾರ ಹೇಳಿದರು.
ಪಟ್ಟಣದ ಗುರುಭವನ ಆವರಣದಲ್ಲಿ ತಾಲೂಕು ಆಡಳಿತ ಏರ್ಪಡಿಸಿದ್ದ ಶರಣ ಹಡಪದ ಅಪ್ಪಣ್ಣನವರ ಜಯಂತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಹಡಪದ ಬಾಂಧವರ ಕಾಯಕ ಆಧುನಿಕ ಜಗತ್ತಿಗೆ ಅತಿ ಮಹತ್ವ ಪಡೆದುಕೊಳ್ಳುತ್ತಿದ್ದು, ಅನ್ಯ ಸಮುದಾಯದವರು ಕಾಯಕ ಮಾಡಲು ಮುಂದಾಗುತ್ತಿದ್ದಾರೆ. ಆದರೆ ಸಮುದಾಯದವರು ಇದನ್ನು ಕೀಳೆಂದು ಭಾವಿಸಿದೆ ಆಧುನಿಕ ಸ್ಪರ್ಶದೊಂದಿಗೆ ಈ ಕಾರ್ಯವನ್ನು ನಿರ್ವಹಿಸಿ ಆರ್ಥಿಕ ಮತ್ತು ಸಾಮಾಜಿಕ, ಶೈಕ್ಷಣಿಕವಾಗಿ ಅಭಿವೃದ್ಧಿ ಸಾಧಿಸಬೇಕು. ಅಲ್ಲದೇ ಶರಣರು ಕಾಯಕವನ್ನು ಸಮಾನವಾಗಿ ಕಂಡಿದ್ದಾರೆ ಎಂದು ಹೇಳಿದರು.
ತಹಶೀಲ್ದಾರ್ ಬಸವರಾಜ ಎಂ. ಬೆಣ್ಣೆಶಿರೂರ ಮಾತನಾಡಿದರು. ಸಾವಳಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಸುಭಾಶ್ಚಂದ್ರ ಕರಹರಿ ಉಪನ್ಯಾಸ ನೀಡಿದರು. ಪುರಸಭೆ ಅಧ್ಯಕ್ಷ ಅಂಬಾದಾಸ ಪವಾರ, ಹಡಪದ ಸಮಾಜದ ಅಧ್ಯಕ್ಷ ಶಂಕರ ಎಸ್. ಹಡಪದ, ಉಪಾಧ್ಯಕ್ಷ ಪ್ರಕಾಶ ಎಲ್. ಹಡಪದ, ಡಾ| ಸಂಜಯ ರೆಡ್ಡಿ, ಮುಖಂಡ ಅಶೋಕ ಗುತ್ತೇದಾರ, ಗ್ರೇಡ್-2 ತಹಶೀಲ್ದಾರ್ ಬಿ.ಜಿ. ಕುದರಿ, ಕಂದಾಯ ನಿರೀಕ್ಷಕ ಶರಣಬಸಪ್ಪ ಹಕ್ಕಿ, ಶರಣ ಗುಂಡಯ್ಯ ಸ್ವಾಮಿ, ಮುಖಂಡ ಭೀಮಶಾ ಹಡಪದ, ಚಂದ್ರಕಾಂತ ಹಡಪದ ತೀರ್ಥ ಅವರು ಶಾಸಕರನ್ನು ಮತ್ತು ತಹಶೀಲ್ದಾರ್‌ರನ್ನು ಸಮಾಜದ ಪರವಾಗಿ ಸನ್ಮಾನಿಸಲಾಯಿತು.
ವಿದ್ಯಾಧರ ಕಾಂಬಳೆ ನಿರೂಪಿಸಿದರು. ಕೈಗಾರಿಕೆ ಅಧಿಕಾರಿ ಜಫರ ಅನ್ಸಾರಿ ವಂದಿಸಿದರು. ನಂತರ ಪ್ರಮುಖ ರಸ್ತೆಗಳ ಮೂಲಕ ಹಡಪದ ಅಪ್ಪಣ್ಣನ ಭಾವಚಿತ್ರದ ಮೆರವಣಿಗೆ ಕೈಗೊಳ್ಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.