ಕಾರ್ಮಿಕರಿಗೆ ವರವಾದ ನರೇಗಾ
Team Udayavani, Jul 28, 2018, 5:55 PM IST
ಯಾದಗಿರಿ: ಜನವರಿಯಿಂದ ಜುಲೈ 26ರ ವರೆಗೆ 223 ಮಿ. ಮೀಟರ್ ಜಿಲ್ಲಾದ್ಯಂತ ಮಳೆ ಸುರಿದಿದ್ದು, ವಾಡಿಕೆಗಿಂತ ಶೇ. 25ರಷ್ಟು ಕಡಿಮೆ ಮಳೆಯಾಗಿದೆ. ಮುಂಗಾರು ಹಂಗಾಮಿನಲ್ಲಿ ಶೇ. 56ರಷ್ಟು ಬಿತ್ತನೆ ಕಾರ್ಯ ಕೂಡ ಮುಕ್ತಾಯಗೊಂಡಿದ್ದು, 2,69,224 ಹೆಕ್ಟೇರ್ ಪ್ರದೇಶದಲ್ಲಿ 1,51,270 ಹೆಕ್ಟೇರ್ ಪ್ರದೇಶ ಮಾತ್ರ ಬಿತ್ತನೆ ಗುರಿ ಸಾಧಿಸಲಾಗಿದೆ.
ಯಾದಗಿರಿಯಲ್ಲಿ 71,700 ಹೆಕ್ಟೇರ್ ಬಿತ್ತನೆ ಗುರಿಯಲ್ಲಿ 58,140 ಹೆಕ್ಟೇರ್ ಪ್ರದೇಶ ಬಿತ್ತನೆಯಾಗಿದೆ. ಶಹಾಪುರಲ್ಲಿ 99,922 ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿಯಲ್ಲಿ 60,780 ಹೆಕ್ಟೇರ್ ಪ್ರದೇಶ ಬಿತ್ತನೆಯಾಗಿದ್ದು, ಇನ್ನು ಸುರಪುರ ತಾಲೂಕಿನಲ್ಲಿ 97,602 ಹೆಕ್ಟೇರ್ ಗುರಿಯಲ್ಲಿ 32,350 ಹೆಕ್ಟೇರ್ ಪ್ರದೇಶದಲ್ಲಿ ಶೇ. 33.34ರಷ್ಟು ಬಿತ್ತನೆಯಾಗಿದೆ.
ಜಿಲ್ಲೆಯಲ್ಲಿ ಹೆಚ್ಚಾಗಿ ಗುರುಮಠಕಲ್, ಯಾದಗಿರಿ ತಾಲೂಕಿನ ರೈತರು ಮಳೆ ಆಶ್ರಿತ ಬೇಸಾಯ ಅವಲಂಭಿಸಿದ್ದು, ಸೂಕ್ತ ನೀರಾವರಿ ಸೌಲಭ್ಯವಿಲ್ಲದೇ ಅತಿವೃಷ್ಟಿ ಅನಾವೃಷ್ಟಿಗೆ ತುತ್ತಾಗುವುದು ಸಾಮಾನ್ಯವಾಗಿದೆ. ಸುರಪುರ ಮತ್ತು ಶಹಾಪುರ ತಾಲೂಕು ವ್ಯಾಪ್ತಿಯಲ್ಲಿ ಹೆಚ್ಚಾಗಿ ರೈತರು ನೀರಾವರಿ ಅವಲಂಭಿಸಿದ್ದಾರೆ.
ನೂತನ ತಾಲೂಕು ಕೇಂದ್ರವಾದ ಗುರುಮಠಕಲ್ ಮತ್ತು ಯಾದಗಿರಿ ಜನರು ಸೂಕ್ತ ಕೆಲಸ ಸಿಗದೇ ಬೆಂಗಳೂರು, ಮುಂಬೈ ಇನ್ನಿತರ ನಗರಗಳಿಗೆ ಗುಳೆ ಹೋಗುವುದು ತಪ್ಪಿಲ್ಲ. ಇನ್ನು ನರೇಗಾ ಯೋಜನೆಯಿಂದ ಕೂಲಿ ಕಾರ್ಮಿಕರಿಗೆ ಸ್ವಲ್ಪ ಮಟ್ಟಿಗೆ ಅನುಕೂಲವಾಗಿದೆ. ಎಪ್ರಿಲ್‌ನಿಂದ ಜೂನ್ ವರೆಗೆ ಕೆರೆ ಹೂಳೆತ್ತುವುದು, ಕೃಷಿ ಹೊಂಡ ನಿರ್ಮಾಣ, ನಮ್ಮ ಹೊಲ ನಮ್ಮ ರಸ್ತೆ, ತಡೆಗೋಡೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿ ನಿರ್ವಹಿಸಲು ಪ್ರಸಕ್ತ ಸಾಲಿನಲ್ಲಿ 1,39,005 ಕುಟುಂಬಗಳು ಜಾಬ್ ಕಾರ್ಡಗಾಗಿ ನೋಂದಣಿಯಾಗಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡ ಸೇರಿದಂತೆ ಒಟ್ಟು 1,35,482 ಜಾಬ್ ಕಾರ್ಡ್ ವಿತರಿಸಲಾಗಿದೆ.
13,473 ಕುಟುಂಬದ 18,722 ಜನರು 2,77,784 ದಿನ ಕೆಲಸ ಮಾಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ
ಅಸಂಖ್ಯಾತ ಸಂಖ್ಯೆಯಲ್ಲಿ ಗುರುಮಠಕಲ್ ಮತ್ತು ಯಾದಗಿರಿ ತಾಲೂಕಿನ ಜನರು ಕೆಲಸ ಅರಿಸಿ ಗುಳೆ ಹೋಗುತ್ತಿರುವುದನ್ನು ತಪ್ಪಿಸಲು ನರೇಗಾ ಯೋಜನೆ ಸಾಕಷ್ಟು ಅನುಕೂಲವಾಗಿದ್ದು, ಮಹಾನಗರಗಳಲ್ಲಿ ಕಟ್ಟಡ ಕಾರ್ಮಿಕ ಕೆಲಸ ಮಾಡುವವರಿಗೆ ಹೆಚ್ಚಿನ ಬೇಡಿಕೆ ಮತ್ತು ದುಡಿಮೆಗೆ ತಕ್ಕ ಸಂಬಳ ಸಿಗುವುದರಿಂದ ಕಟ್ಟಡ ಕಾರ್ಮಿಕರು ಮಾತ್ರ ವಲಸೆ ಹೋಗುತ್ತಿರುವುದು ಕಂಡು ಬರುತ್ತಿದೆ.
ಜಿಲ್ಲೆಯಲ್ಲಿ ನರೇಗಾ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಹೆಚ್ಚಿನ ಉದ್ಯೋಗ ದಿನ ಸೃಷ್ಟಿಯಾಗಿರುವುದರಿಂದ ಕೂಲಿ ಕಾರ್ಮಿಕರು ಗುಳೆ ಹೋಗುವುದು ಹೆಚ್ಚಾಗಿ ಕಾಣುತ್ತಿಲ್ಲ. ಕೂಲಿ ಕಾರ್ಮಿಕರಿಗೆ ನರೇರಾ ಯೋಜನೆ ವರದಾನವಾಗಿದೆ. ಸ್ಥಳೀಯವಾಗಿಯೇ ನಿತ್ಯ ಕೆಲಸಕ್ಕೆ 249 ರೂ. ಕೂಲಿ ಪಡೆಯಬಹುದು.
ವಸಂತರಾವ್ ಕುಲಕರ್ಣಿ, ಜಿಪಂ ಉಪ ಕಾರ್ಯದರ್ಶಿ
ಅನೀಲ ಬಸೂದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.