ಇಂದು ಶರಣಬಸವ ವಿವಿ ಸಂಸ್ಥಾಪನಾ ದಿನ


Team Udayavani, Jul 29, 2018, 10:48 AM IST

gul-4.jpg

ಕಲಬುರಗಿ: ಉತ್ತರ ಕರ್ನಾಟಕದ ಪ್ರಥಮ ಖಾಸಗಿ ವಿಶ್ವವಿದ್ಯಾಲಯ ಎಂದೇ ಖ್ಯಾತಿ ಪಡೆದಿರುವ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶರಣಬಸವ ವಿಶ್ವವಿದ್ಯಾಲಯದ ಪ್ರಥಮ ಸಂಸ್ಥಾಪನಾ ಸಮಾರಂಭ ಜುಲೈ 29ರಂದು ಸಂಜೆ 4ಕ್ಕೆ ಸಂಸ್ಥೆಯ ಶರಣಬಸವೇಶ್ವರ ಶತಮಾನೋತ್ಸವ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿವಿ ಕುಲಪತಿ ಡಾ| ನಿರಂಜನ್‌ ನಿಷ್ಠಿ ತಿಳಿಸಿದರು.

ಹೈಕ ಭಾಗದ ಶೈಕ್ಷಣಿಕ ಅಭಿವೃದ್ಧಿ ನಿಟ್ಟಿನಲ್ಲಿ ಅಸ್ತಿತ್ವಕ್ಕೆ ಬಂದಿರುವ ಶರಣಬಸವ ವಿವಿ ವರ್ಷದೊಳಗೆ 22 ವಿಭಾಗ ಪ್ರಾರಂಭಿಸಿರುವುದು ಶೈಕ್ಷಣಿಕ ಸಾಧನೆಗೆ ಹಿಡಿದ ಕನ್ನಡಿಯಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಸಕ್ತ ಸಾಲಿನಿಂದ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗದಲ್ಲಿ ಹಾಸ್ಪಿಟಲ್‌ ಮ್ಯಾನೇಜ್‌ಮೆಂಟ್‌ ಮತ್ತು ಬ್ಯಾಚುಲರ್‌ ಆಫ್‌ ಆರ್ಕಿಟೆಕ್ಟ್ ಕೋರ್ಸ್‌ ಆರಂಭಿಸಲಾಗಿದೆ. ವಿವಿಯ ಪ್ರಥಮ ಸಂಸ್ಥಾಪನಾ ದಿನಾಚರಣೆ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಶರಣಬಸವಪ್ಪ ಅಪ್ಪ ಸಾನ್ನಿಧ್ಯದಲ್ಲಿ ಆಯೋಜಿಸಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಮುಜರಾಯಿ ಖಾತೆ ಸಚಿವ ರಾಜಶೇಖರ ಪಾಟೀಲ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. 

ಕಡಗಂಚಿ ಬಳಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ| ಎಚ್‌.ಎಂ. ಮಹೇಶ್ವರಯ್ಯ, ಗುಲಬರ್ಗಾ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ| ಎಸ್‌.ಆರ್‌. ನಿರಂಜನ್‌, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹಾಜರಿರಲಿದ್ದಾರೆ ಎಂದರು.

ಪರಿಸರ ಸ್ನೇಹಿ ವಿವಿ: ಶರಣಬಸವ ವಿಶ್ವವಿದ್ಯಾಲಯವನ್ನು ಪರಿಸರ ಸ್ನೇಹಿಯಾಗಿ ರೂಪಿಸಲಾಗಿದೆ. ಈಗಾಗಲೇ ವಿವಿ ಆವರಣವು ಅತಿ ದೊಡ್ಡ ಮಳೆ ಕೋಯ್ಲು ರಚನೆ ವಿಧಾನ ಹೊಂದಿದೆ. ವಿವಿಗೆ ಅಗತ್ಯವಿರುವ ವಿದ್ಯುತ್‌ನ್ನು ಸೌರಶಕ್ತಿಯಿಂದ ಪಡೆಯಲಾಗಿದೆ. ಅಲ್ಲದೇ ಸೌರಶಕ್ತಿ ಹೊಂದಿದ ಮೊದಲ ವಿಶ್ವವಿದ್ಯಾಲಯ ಇದಾಗಿದೆ. ಇತ್ತೀಚೆಗೆ ಅಟೋಮೊಬೈಲ್‌ ಕ್ಷೇತ್ರದ ಜರ್ಮನ್‌ನ ದೈತ್ಯ ಕಂಪನಿ ಬಿಎಂಡಬ್ಲ್ಯೂ ತರಬೇತಿಗಾಗಿ ವಿವಿಯನ್ನು ಆಯ್ಕೆ ಮಾಡಿಕೊಂಡಿದೆ ಎಂದು ತಿಳಿಸಿದರು.

ಕೃತಿಗಳ ಬಿಡುಗಡೆ: ವಿವಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶರಣಬಸವ ವಿಶ್ವವಿದ್ಯಾಲಯದಿಂದ ಪ್ರಥಮ ಸಂಶೋಧನಾ ಜರ್ನಲ್‌ ಆಗಿ ಪ್ರಕಟಗೊಳ್ಳುತ್ತಿರುವ ಇಂಟರ್‌ನ್ಯಾಷನಲ್‌ ಮಲ್ಟಿ ಡಿಸಿಪ್ಲೇನರಿ ರಿಸರ್ಚ್‌ ಜರ್ನಲ್‌, ಡಾ| ಶಿವರಾಜ ಶಾಸ್ತ್ರೀ ಹೇರೂರ, ಡಾ| ಸಾರಿಕಾದೇವಿ ಕಾಳಗಿ, ನಾನಾಸಾಹೇಬ ಸಂಪಾದಕತ್ವದಲ್ಲಿ ರಚನೆಯಾಗಿರುವ ಶರಣಬಸವೇಶ್ವರ ಮಹಾದಾಸೋಹ ಸಂಪದ ಕೃತಿಗಳನ್ನು ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಬಿಡುಗಡೆ ಮಾಡುವರು ಎಂದರು.

ಜನ್ಮ ದಿನ: ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರ 53ನೇ ಜನ್ಮ
ದಿನವನ್ನು ಇದೆ ವೇಳೆ ಆಚರಿಸಲಾಗುತ್ತಿದೆ. ಪೂಜ್ಯ ಡಾ| ಅಪ್ಪ ಹಾಗೂ ಇತರ ಗಣ್ಯರು ಸನ್ಮಾನಿಸಲಿದ್ದಾರೆ ಎಂದರು.

ಶಾಸಕರಿಗೆ ಸನ್ಮಾನ: ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಗೆ ಆಯ್ಕೆಯಾದ ಶಾಸಕರಾದ ಎಂ.ವೈ. ಪಾಟೀಲ, ಸುಭಾಷ ಆರ್‌. ಗುತ್ತೇದಾರ, ಡಾ| ಉಮೇಶ ಜಾಧವ, ದತ್ತಾತ್ರೇಯ ಪಾಟೀಲ ರೇವೂರ, ಖನೀಜಾ ಫಾತೀಮಾ, ಡಾ| ಅಜಯಸಿಂಗ್‌, ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮೂಡ, ಡಾ| ಚಂದ್ರಶೇಖರ ಪಾಟೀಲ ಅವರನ್ನು ಸನ್ಮಾನಿಸಲಾಗುತ್ತಿದೆ ಎಂದು ಡಾ| ನಿಷ್ಠಿ ತಿಳಿಸಿದರು. ಶರಣಬಸವ ವಿವಿ ಕುಲಾಧಿಪತಿ ಡಾ| ಶರಣಬಸವಪ್ಪ ಅಪ್ಪ, ಕುಲಸಚಿವರಾದ ಡಾ| ವಿ. ಡಿ. ಮೈತ್ರಿ, ಡಾ| ಅನೀಲಕುಮಾರ ಬಿಡವೆ, ಡೀನ್‌ ಡಾ| ಲಿಂಗರಾಜ ಶಾಸ್ತ್ರೀ ಹಾಜರಿದ್ದರು.

ಶರಣಬಸವ ವಿಶ್ವವಿದ್ಯಾಲಯಪ್ರವೇಶಾತಿಗೆ ಹೆಚ್ಚಿದ ಬೇಡಿಕೆ ಕಲಬುರಗಿ: ಗುಣಮಟ್ಟದ ಶೈಕ್ಷಣಿಕ ವಾತಾವರಣವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಂಡ ಪರಿಣಾಮ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಂಸ್ಥೆಯಲ್ಲಿ ಪ್ರವೇಶಾತಿಗೆ ಬೇಡಿಕೆ ಹೆಚ್ಚಳವಾಗಲು ಕಾರಣವಾಗಿದೆ. ಕಳೆದ ವರ್ಷವಷ್ಟೇ ಪ್ರಾರಂಭವಾಗಿರುವ ಶರಣಬಸವ ವಿವಿಯಲ್ಲೂ ಎಲ್ಲ ಕೋರ್ಸುಗಳ ಪ್ರವೇಶಾತಿಗೆ ನೂಕು ನುಗ್ಗಲು ಉಂಟಾಗಿದೆ ಎಂದು ವಿವಿ ಕುಲಾಧಿಪತಿ ಹಾಗೂ ಶರಬಸವೇಶ್ವರ ಮಹಾದಾಸೋಹ ಸಂಸ್ಥಾನದ ಪೀಠಾಧಿಪತಿ ಡಾ| ಶರಣಬಸವಪ್ಪ ಅಪ್ಪ ನುಡಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ವಿವಿಗೆ ಅನುಮತಿ ಸಿಕ್ಕ ನಂತರ ಪ್ರವೇಶಾತಿಗೆ ಸ್ವಲ್ಪ ಸಮಯ ವಿಳಂಬವಾಗಿ ಹಸಿರು ನಿಶಾನೆ ದೊರಕಿತಾದರೂ ವಿವಿಧ ಸ್ನಾತಕೋತ್ತರ ಕೋರ್ಸುಗಳಲ್ಲಿ ಕಳೆದ ವರ್ಷ 450 ಅಭ್ಯರ್ಥಿಗಳು ಪ್ರವೇಶಾತಿ ಪಡೆದಿದ್ದರು. ಈ ವರ್ಷ ಈಗಾಗಲೇ 700 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದು, ಈ ಸಂಖ್ಯೆ 1100ಕ್ಕೆ ನಿಶ್ಚಿತವಾಗಿ ಏರಲಿದೆ ಎಂದರು.

ಕಲಬುರಗಿ ಈಗ ಶೈಕ್ಷಣಿಕ ಹಬ್‌ ಆಗಿ ಹೊರ ಹೊಮ್ಮಿದೆ. ಇಲ್ಲಿರುವ ಐದು ವಿಶ್ವವಿದ್ಯಾಲಯಗಳು, ನಾಲ್ಕು ವೈದ್ಯಕೀಯ ಕಾಲೇಜುಗಳಲ್ಲದೇ ಹತ್ತಾರು ಇಂಜಿನಿಯರಿಂಗ್‌ ಕಾಲೇಜುಗಳು ಇದಕ್ಕೆ ಕಾರಣವಾಗಿದೆ. ಅದರಲ್ಲೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಲ್ಲಿ 25 ಸಾವಿರ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಒಟ್ಟಾರೆ ಕಲಬುರಗಿ ಮಹಾನಗರದಲ್ಲಿ ಮೂರು ಲಕ್ಷ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿರುವುದು ನಿಜಕ್ಕೂ ದೊಡ್ಡದ್ದೇ. ಇದನ್ನು ನೋಡಿದರೆ ಈ ಭಾಗ ಹಿಂದುಳಿದಿದೆ ಎನ್ನಲಿಕ್ಕಾಗದು ಎಂದರು.

ವರ್ಷಂಪ್ರತಿ ಸಂಸ್ಥೆಯಡಿ ಶಿಕ್ಷಣ ಪಡೆದ 250 ವಿದ್ಯಾರ್ಥಿಗಳು ವೈದ್ಯಕೀಯ ಕೋರ್ಸ್‌ ಪ್ರವೇಶಾತಿ ಪಡೆಯುತ್ತಿದ್ದಾರೆ. ಇದನ್ನು ನೋಡಿ ಕೆಲವರು, ಯಾಕ್ರೀ ಅಪ್ಪಾ ನಿವೇ ಒಂದು ವೈದ್ಯಕೀಯ ಕಾಲೇಜು ತೆರೆಯಬಾರದು ಎಂದು ಕೇಳುತ್ತಾರೆ. ತಾವು ವೈದ್ಯಕೀಯ ಕಾಲೇಜು ತೆರೆದರೆ ಇಲ್ಲೇ ವಿದ್ಯಾರ್ಥಿಗಳು ಓದಬಹುದು. ಆದರೆ ನೂರಾರು ಕಾಲೇಜುಗಳಲ್ಲಿ ತಮ್ಮ ಸಂಸ್ಥೆ ವಿದ್ಯಾರ್ಥಿಗಳು ಓದುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಅಸಮಾಧಾನ: ಕೇವಲ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಮಾತ್ರ ಉಚಿತ ಬಸ್‌ ನೀಡಿರುವ ಸರ್ಕಾರದ ಕ್ರಮಕ್ಕೆ ಕುಲಾಧಿಪತಿ ಡಾ| ಶರಣಬಸವಪ್ಪ ಅಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಬಹಳಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಖಾಸಗಿ ಮತ್ತು ಅನುದಾನಿತ ಶಾಲೆ-ಕಾಲೇಜುಗಳಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ.

ಸರ್ಕಾರದ ಈ ಕ್ರಮದಿಂದ ಮತ್ತೂಂದು ವಿಭಿನ್ನ ಸಮಸ್ಯೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಖಾಸಗಿ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಬಡವರ ಮಕ್ಕಳ ಮೇಲೆ ಈ ನಿರ್ಧಾರ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.