ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಿದ್ಧ
Team Udayavani, Jul 29, 2018, 12:24 PM IST
ತಿ.ನರಸೀಪುರ: ವಿಶ್ವದ ಮಟ್ಟದಲ್ಲಿ ಭಾರತಕ್ಕೆ ಆರ್ಥಿಕವಾಗಿ ಅಭಿವೃದ್ಧಿಗೊಂಡ 6ನೇ ರಾಷ್ಟ್ರವೆಂಬ ಹೆಗ್ಗಳಿಕೆ ತಂದುಕೊಟ್ಟಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತೆ ಮುಂದಿನ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಭವಿಷ್ಯ ನುಡಿದರು.
ತಾಲೂಕಿನ ವಾಟಾಳು ಗ್ರಾಮದ ಶ್ರೀ ಸೂರ್ಯಸಿಂಹಾಸನ ಮಠಕ್ಕೆ ಶನಿವಾರ ಬೇಟಿ ನೀಡಿ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಕೇಂದ್ರ ಸರ್ಕಾರದ ನಾಲ್ಕು ವರ್ಷಗಳ ಸಾಧನೆಯ ಕೈಪಿಡಿಯನ್ನು ವಿತರಿಸಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದರು.
ನರೇಂದ್ರ ಮೋದಿ ಅವರು ಭಾರತ ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಬಲಿಷ್ಟಗೊಳಿಸುತ್ತಿದ್ದು, ಅವಧಿಯಲ್ಲಿ ಸಫಲರಾಗಿರುವುದರಿಂದ ಜನರು ಮುಂದಿನ ಎರಡು ಅವಧಿಗೂ ಬಿಜೆಪಿಯನ್ನೇ ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು.
ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ತೃತೀಯ ರಂಗವನ್ನು ಕಟ್ಟಿ ಕೇಂದ್ರದಲ್ಲಿ ಗದ್ದುಗೆ ಹಿಡಿಯಲು ಹೊರಟಿರುವ ಚಂದ್ರಬಾಬು ನಾಯ್ಡು, ಮಮತಾ ಬ್ಯಾನರ್ಜಿ, ಮಾಯಾವತಿ ಹಾಗೂ ಇನ್ನಿತರ ಯಾವುದೇ ನಾಯಕರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಸರಿಸಾಟಿಯಾಗಿ ನಿಲ್ಲಲಾರರು ಎಂದು ಬಣ್ಣಿಸಿದರು.
ಮೈತ್ರಿ ಸರ್ಕಾರ ಹೆಚ್ಚು ಕಾಲ ಉಳಿಯಲ್ಲ: ರಾಹುಲ್ ಗಾಂಧಿ ಸೂಚನೆಯಂತೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಆಡಳಿತರೂಢ ಸಮ್ಮಿಶ್ರ ಸರ್ಕಾರ ನುಂಗಲಾರದ ತುತ್ತಾಗಿದೆ. ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸಿದ್ದಕ್ಕೆ ಜೆಡಿಎಸ್ ನಾಯಕರಲ್ಲೂ ಅಸಮಾಧಾನವಿದೆ.
ಇಬ್ಬರ ನಡುವಿನ ಭಿನ್ನಮತ ಯಾವುದೇ ವೇಳೆ ಸ್ಫೋಟಗೊಳ್ಳುವುದರಿಂದ ಮೈತ್ರಿ ಸರ್ಕಾರ ಹೆಚ್ಚು ಕಾಲ ಅಧಿಕಾರದಲ್ಲಿ ಉಳಿಯುವುದಿಲ್ಲ. ಬಿಜೆಪಿಗೆ ಸರ್ಕಾರ ರಚನೆ ಮಾಡುವ ತರಾತುರಿಯೂ ಇಲ್ಲ. ಈ ಬಗ್ಗೆ ಹೈಕಮಾಂಡ್ ಹಾಗೂ ರಾಜ್ಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೋಟೆ ಎಂ.ಶಿವಣ್ಣ ತಿಳಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಸ್.ಸಿ.ಅಶೋಕ್, ಪ್ರಧಾನ ಕಾರ್ಯದರ್ಶಿ ಮಾರ್ಬಳ್ಳಿ ಮೂರ್ತಿ, ಕ್ಷೇತ್ರಾಧ್ಯಕ್ಷ ಹೆಚ್.ಎಂ.ಪರಶಿವಮೂರ್ತಿ, ಹಿರಿಯ ಮುಖಂಡ ರಾಜಕುಮಾರ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.