ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಆರೋಪ


Team Udayavani, Jul 30, 2018, 11:11 AM IST

bid-1.jpg

ಬೀದರ: ಕೆಲವು ತಿಂಗಳುಗಳಿಂದ ಬೀದರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧನಾ ಆಸ್ಪತ್ರೆಯಲ್ಲಿ ಅಕ್ರಮಗಳ ಕುರಿತು ಅನೇಕ ಆರೋಪಗಳು ಸಾರ್ವಜನಿಕವಾಗಿ ಕೇಳಿಬರುತ್ತಿರುವ ಮಧ್ಯದಲ್ಲಿಯೇ, ಅಧಿಕಾರ ದುರುಪಯೋಗ ಪಡಿಸಿಕೊಂಡು ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಆರೋಪಿಸಿ 8 ಜನರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಕಚೇರಿಯಲ್ಲಿ ಶನಿವಾರ ರಾತ್ರಿ ಪ್ರಕರಣ ದಾಖಲಾಗಿದೆ.

ಬ್ರಿಮ್ಸ್‌ ಮುಖ್ಯ ಆಡಳಿತಾಧಿಕಾರಿ ಆನಂದಸಾಗರ ರೆಡ್ಡಿ, ಆಡಳಿತಾಧಿಕಾರಿ ಅನಸೂಯ, ಕಚೇರಿ ಅಧೀಕ್ಷಕ ಪ್ರಕಾಶ ಮಡಿವಾಳ, ಕಚೇರಿ ಅಧಿಧೀಕ್ಷ ಬಾಬುಕೋಟೆ, ಪ್ರಥಮ ದರ್ಜೆ ಸಹಾಯಕ ಪ್ರಕಾಶ ಮಾಳಗೆ, ಪ್ರಥಮ ದರ್ಜೆ ಸಹಾಯಕಿ ವರ್ಷಾ, ನಿವೃತ್ತ ಕಚೇರಿ ಅಧೀಕ್ಷಕ ಮಾಚೆ ಕಲ್ಲಪ್ಪ, ಹೊರಗುತ್ತಿಗೆ ಸಹಾಯಕ ಶಿವಾಜಿ ಎಂಬುವವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಕಚೇರಿಯಲ್ಲಿ ದೂರು ದಾಖಲಾಗಿದೆ. ಬ್ರಿಮ್ಸ್‌ ನಿರ್ದೇಶಕ ಡಾ| ಸಿ. ಚನ್ನಣ್ಣ ಹಾಗೂ ಪ್ರಭಾರಿ ವೈದ್ಯಕೀಯ ಅಧೀಕ್ಷಕ ಡಾ| ಶಿವಕುಮಾರ ಶೇಟ್ಕರ್‌ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ಹಿನ್ನೆಲೆಯಲ್ಲಿ ಇಬ್ಬರು ಹೆಸರು ಎಫ್‌ಐಆರ್‌ನಲ್ಲಿ ದಾಖಲಿಸಿಲ್ಲ. ತಡೆಯಾಜ್ಞೆ ತೆರವುಗೊಂಡ ನಂತರ ಆ ಇಬ್ಬರ ಹೆಸರಗಳು ಕೂಡ ಸೇರ್ಪಡೆಗೊಳ್ಳಲಿವೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

ಎರಡು ವರ್ಷಗಳಲ್ಲಿ ಟೆಂಡರ್‌ ಪ್ರಕ್ರಿಯೆ, ಸಿ ಮತ್ತು ಡಿ ದರ್ಜೆಯ ನೌಕರರ ನೇಮಕಾತಿ, ಔಷಧ ಖರೀದಿ, ಪೀಠೊಪಕರಣ ಖರೀದಿ ಸೇರಿದಂತೆ ವಿವಿಧ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 20 ಕೋಟಿಗೂ ಅಧಿಕ ಹಣ ದುರ್ಬಳಕೆಯಾಗಿರುವ ಆರೋಪಗಳಿದ್ದು, ವಿವಿಧ ಪೀಠೊಪಕರಣಗಳನ್ನು ಮಾರುಕಟ್ಟೆ ದರಕ್ಕಿಂತ ಎರಡೂ¾ರು ಪಟ್ಟು ಹೆಚ್ಚು ಬೆಲೆಯಲ್ಲಿ ಟೆಂಡರ್‌ ಕರೆದು ಖರೀದಿಸಿರುವ ಕುರಿತು ಕೂಡ ಗಂಭೀರ ಆರೋಪಗಳನ್ನು ಅಧಿಕಾರಿಗಳ ಮೇಲೆ ಮಾಡಲಾಗುತ್ತಿದೆ.

ಈ ಹಿಂದಿನ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ ಅವರು ಬ್ರಿಮ್ಸ್‌ ಬೋಧನಾ ಆಸ್ಪತ್ರೆ ಕುರಿತು ಹೆಚ್ಚು ಮುತ್ತುವರ್ಜಿ ವಹಿಸಿ ಅನೇಕ ಬಾರಿ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳನ್ನು ಸರಿಪಡಿಸುವ ಕೆಲಸ ಮಾಡಿದ್ದರು. ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ನಿರ್ವಹಿಸಿ ಸರ್ಕಾರಿ ಸಂಬಳ ಪಡೆಯುತ್ತಿದ್ದ ವೈದ್ಯರನ್ನು ಗುರುತಿಸಿ ನೋಟಿಸ್‌ ಜಾರಿಮಾಡಿದ್ದರು. ಅಲ್ಲದೇ ಮುಚ್ಚಳಿಗೆ
ಪತ್ರ ಬರೆಸಿಕೊಂಡು ಕರ್ತವ್ಯ ಲೋಪ ಎಸಗುವ ವೈದ್ಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಕೂಡ ನೀಡಿದ್ದರು. ವಿವಿಧ ಆರೋಪಗಳನ್ನು ಹೊತ್ತಿದ್ದ ನಿರ್ದೇಶಕರ ವಿರುದ್ಧ ಸರ್ಕಾರಕ್ಕೆ ವರದಿ ಸಲ್ಲಿಸಿ ಎತ್ತಂಗಡಿ ಮಾಡಿದ ಘಟನೆ ಕೂಡ ನಡೆದಿತ್ತು. ನಂತರ ಈ ಕುರಿತು ನ್ಯಾಯಾಲಯದ ಮೋರೆ ಹೋಗಿದ್ದ ನಿರ್ದೇಶಕ ಮರಳಿ ಅದೇ ಹುದ್ದೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಕೆಲವು ದಿನಗಳ ಹಿಂದೆ ಬ್ರಿಮ್ಸ್‌ ನಿರ್ದೇಶಕರ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡು ವಿವಿಧ ದಾಖಲೆ ಪತ್ರಗಳು, ಕಂಪ್ಯೂಟರ್‌ ಸೇರಿದಂತೆ ವಿವಿಧ ವಸ್ತುಗಳು ಬೆಂಕಿಗೆ ಆಹುತ್ತಿ ಆಗಿದ್ದವು. ಈ ಕುರಿತು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಬ್ರಿಮ್ಸ್‌ ಬೋಧನಾ ಆಸ್ಪತ್ರೆ ಮೇಲ್ಛಾವಣಿಯ ಸೋಲಾರ್‌ ಪ್ಲೇಟ್‌ಗಳಲ್ಲಿನ ತಂತಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಕೂಡ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿರುವುದನ್ನು ಇಲ್ಲಿ
ಸ್ಮರಿಸಬಹುದಾಗಿದೆ. ಪ್ರಕರಣ ದಾಖಲಿಸಿಕೊಂಡ ಎಸಿಬಿ ಅ ಧಿಕಾರಿಗಳು ಶೀಘ್ರದಲ್ಲಿಯೆ ತನಿಖೆ ಶುರು ಮಾಡುವ ಸಾಧ್ಯತೆಗಳು ಇವೆ.  

ಬ್ರಿಮ್ಸ್‌ ಅಕ್ರಮಗಳ ಕುರಿತು ಜಿಲ್ಲಾ ಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ದೆಹಲಿಯಿಂದ ಅ ಧಿಕಾರಿಗಳ ತಂಡ ಬಂದ ಸಂದರ್ಭದಲ್ಲಿ ಇಲ್ಲಿನ ವೈದ್ಯರು ಹಾಜರಾಗದ ಕಾರಣ 19 ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಬ್ರಿಮ್ಸ್‌ ಅವ್ಯವಸ್ಥೆ ಕುರಿತು ಸಚಿವ ಡಿ.ಕೆ. ಶಿವಕುಮಾರ ಅವರೊಂದಿಗೆ ಮಾತನಾಡುತ್ತೇನೆ. ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಜು.30ರಂದು ಅಧಿಕಾರಿಗಳ ಸಭೆ ಕರೆದಿದ್ದು, ಈ ಕುರಿತು ಸಭೆಯಲ್ಲಿ ಚರ್ಚೆ ನಡೆಸಿ ಮಾಹಿತಿ ನೀಡಲಾಗುವುದು.
ರಾಜಶೇಖರ ಪಾಟೀಲ, ಗಣಿ ಮತ್ತು ಭೂ ವಿಜ್ಞಾನ ಹಾಗೂ ಮುಜುರಾಯಿ ಸಚಿವ

„ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.