ಹೆಣ್ಣು ಮಕ್ಕಳ ಜನನಾಂಗ ಊನ ಪದ್ಧತಿಗೆ ಸುಪ್ರೀಂ ಕೋರ್ಟ್ ಕಿಡಿ
Team Udayavani, Jul 31, 2018, 6:00 AM IST
ಹೊಸದಿಲ್ಲಿ: ದಾವೂದಿ ಬೋಹ್ರಾ ಮುಸ್ಲಿಂ ಸಮುದಾಯದಲ್ಲಿನ ಹೆಣ್ಣು ಮಕ್ಕಳ ಜನನಾಂಗ ಊನಗೊಳಿಸುವಿಕೆ ಪದ್ಧತಿ ವಿರುದ್ಧ ಕಿಡಿಕಾರಿರುವ ಸುಪ್ರೀಂಕೋರ್ಟ್, ಹೆಣ್ಣು ಮಕ್ಕಳು ಮದುವೆಗಾಗಿ ಮತ್ತು ಗಂಡನಿಗಾಗಿಯೇ ಬದುಕಬೇಕೇ ಎಂದು ಪ್ರಶ್ನಿಸಿದೆ. ಹೆಣ್ಣು ಮಕ್ಕಳು ಗಂಡನಿಗಾಗಿಯೇ ಎಲ್ಲವನ್ನು ನಿಗ್ರಹಿಸಿಕೊಂಡಿರಬೇಕು ಎಂಬುದು ಸಂವಿಧಾನದತ್ತವಾಗಿದೆ ಎಂದು ಹೇಳಲೂ ಸಾಧ್ಯವಿಲ್ಲ, ಹಾಗೆಯೇ ಇಂಥ ಪದ್ಧತಿಗಳು ಆಕೆಯ ಖಾಸಗಿ ಹಕ್ಕಿನ ಉಲ್ಲಂಘನೆಯೂ ಹೌದು ಎಂದು ಮುಖ್ಯ ನ್ಯಾಯ ಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ.
ಈ ಪದ್ಧತಿ ವಿರೋಧಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಕೇಂದ್ರವೂ ಬೆಂಬಲಿಸಿದ್ದು, ಧರ್ಮದ ಆಧಾರದಲ್ಲಿ ದೇಹದ ಯಾವುದೇ ಅಂಗದ ಊನ ಒಪ್ಪಲು ಸಾಧ್ಯವಿಲ್ಲ ಎಂದಿದೆ. ಈ ದಾವೂದಿ ಬೋಹ್ರಾ ಎನ್ನುವುದು ಶಿಯಾ ಪಂಗಡದಲ್ಲಿ ಉಪ ಸಮುದಾಯ. ಇದು ಖಾಟ್ನಾ ಅಥವಾ ಖಫ್j ಎಂಬ ಸಂಪ್ರದಾಯ ಹೊಂದಿದೆ. ಹೆಣ್ಣು ಮಗಳೊಬ್ಬಳು ವಿವಾಹದ ವರೆಗೆ ಶುದ್ಧಳಾಗಿ ಇರಬೇಕು ಎಂಬ ಕಾರಣಕ್ಕೆ ಅದನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸಮುದಾಯದ ಪರ ಹಾಜರಿದ್ದ ವಕೀಲ ಅಭಿಷೇಕ್ ಸಿಂಘ್ವಿ, ಈ ವಿಚಾರವನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸುವಂತೆ ಕೋರಿದರು. ಧಾರ್ಮಿಕ ಸಂಪ್ರದಾಯವಾಗಿರುವುದರಿಂದ ಕೋರ್ಟ್ ಮಧ್ಯಪ್ರವೇಶ ಮಾಡಬಾರದು ಎಂದು ವಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.