ರಾಜ್ಯಸಭೆಯಲ್ಲಿ ಎನ್‌ಆರ್‌ಸಿ ಗದ್ದಲ
Team Udayavani, Jul 31, 2018, 6:00 AM IST
ಹೊಸದಿಲ್ಲಿ: ಅಸ್ಸಾಂನಲ್ಲಿ ಬಿಡುಗಡೆಯಾದ ರಾಷ್ಟ್ರೀಯ ನಾಗರಿಕರ ನೋಂದಣಿ(ಎನ್‌ಆರ್‌ಸಿ) ಅಂತಿಮ ಕರಡು ವರದಿಯು ಸೋಮವಾರ ರಾಜ್ಯಸಭೆ ಕಲಾಪವನ್ನು ನುಂಗಿಹಾಕಿತು. ಎನ್‌ಆರ್‌ಸಿ ವಿಚಾರದಲ್ಲಿ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿದ ಕಾರಣ, ಕಲಾಪವನ್ನು ಮುಂದೂಡಬೇಕಾಯಿತು.
ರಾಜ್ಯಸಭೆಯಲ್ಲಿ ಕಲಾಪ ಆರಂಭವಾದೊಡನೆ ಎಸ್‌ಪಿ ಮತ್ತು ತೃಣಮೂಲ ಕಾಂಗ್ರೆಸ್ ಸದಸ್ಯರು ಎನ್‌ಆರ್‌ಸಿ ಕುರಿತು ಚರ್ಚೆಗೆ ಆಗ್ರಹಿಸಿ ಕೋಲಾಹಲ ಎಬ್ಬಿಸಿದರು. ಸತತ ಮೂರು ಬಾರಿ ಕಲಾಪ ಮುಂದೂಡಲ್ಪಟ್ಟರೂ, ಗದ್ದಲ ನಿಲ್ಲಲೇ ಇಲ್ಲ. ಟಿಎಂಸಿ ನಾಯಕ ಡೆರೆಕ್ ಒಬ್ರಿಯಾನ್ ಅವರು, ಎನ್‌ಆರ್‌ಸಿ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು. ಆದರೆ, ಇದಕ್ಕೆ ಒಪ್ಪದ ಸಭಾಪತಿ ವೆಂಕಯ್ಯ ನಾಯ್ಡು ಅವರು, ನಾನು ಈಗಾಗಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್‌ರನ್ನು ಇಲ್ಲಿಗೆ ಬಂದು, ಪ್ರತಿಕ್ರಿಯೆ ನೀಡುವಂತೆ ಸೂಚಿಸಿದ್ದೇನೆ ಎಂದರು. ಸಚಿವರು ಆಗಮಿಸಿದ ಬಳಿಕವೂ, ಪ್ರತಿಪಕ್ಷ ಸದಸ್ಯರು ಗದ್ದಲ ಮುಂದುವರಿಸಿದ ಕಾರಣ, ಒಂದು ಹಂತದಲ್ಲಿ ಆಕ್ರೋಶಗೊಂಡ ಸಭಾಪತಿ ನಾಯ್ಡು, “ನೀವೂ ಏನನ್ನೂ ಮಾತನಾಡುತ್ತಿಲ್ಲ, ಸಚಿವರಿಗೂ ಮಾತನಾಡಲು ಬಿಡುತ್ತಿಲ್ಲ ಎಂದರೆ ಹೇಗೆ’ ಎಂದು ಪ್ರಶ್ನಿಸಿ, ಕಲಾಪವನ್ನು 10 ನಿಮಿಷ ಮುಂದೂಡಿದರು.
ಮತ್ತೆ ಕಲಾಪ ಆರಂಭವಾದಾಗ ಒಬ್ರಿಯಾನ್ ಅವರು ಮಾತನಾಡಿ, ಎನ್‌ಆರ್‌ಸಿ ವಿಚಾರವು ರಾಜಕೀಯ ವಿಷಯವಲ್ಲ. ಅದು ಮಾನವ ಹಕ್ಕುಗಳು, ಮಾನವತೆ ಮತ್ತು ರಾಷ್ಟ್ರೀಯ ವಿಚಾರ. ಹೀಗಾಗಿ ಮಾತನಾಡಲು ಅವಕಾಶ ನೀಡಬೇಕು ಎಂದರು. ಇದಕ್ಕೆ ನಾಯ್ಡು ಅವರು, ಮಂಗಳವಾರ ಬೆಳಗ್ಗೆ ಮಾತ ನಾಡಲು ಅವಕಾಶ ನೀಡುತ್ತೇನೆ ಎಂದರು. ತೃಪ್ತರಾಗದ ಟಿಎಂಸಿ ಸದಸ್ಯರು ಗದ್ದಲ ನಡೆಸಿದ್ದರಿಂದ ಕಲಾಪ ಮುಂದೂಡಲಾಯಿತು.
ತನಿಖೆಯಾಗಲಿ: ಕೈಗಾರಿಕೋದ್ಯಮಿಗಳ ಅನುಕೂಲಕ್ಕಾಗಿ ಯುಪಿಎ ಅವಧಿಯಲ್ಲಿ 80:20 ಚಿನ್ನ ಆಮದು ಯೋಜನೆ ಜಾರಿ ಮಾಡಲಾಗಿತ್ತು. ಇದರಿಂದ ಒಂದು ಲಕ್ಷ ಕೋಟಿ ರೂ. ನಷ್ಟವಾಗಿದೆ. ಹೀಗಾಗಿ, ಈ ಕುರಿತು ಅಂದಿನ ಹಣಕಾಸು ಸಚಿವರು, ಆರ್‌ಬಿಐ ಗವರ್ನರ್ ವಿರುದ್ಧ ಸಿಬಿಐ ಅಥವಾ ಇ.ಡಿ.ತನಿಖೆ ನಡೆಸಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.