ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು
Team Udayavani, Jul 31, 2018, 6:00 AM IST
ಹೊಸದಿಲ್ಲಿ: ಹನ್ನೆರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆಗೆ ಲೋಕಸಭೆ ಸೋಮವಾರ ಅಂಗೀಕಾರ ನೀಡಿದೆ. ಅದು ಸದ್ಯ ಹೊರಡಿಸಲಾಗಿರುವ ಅಧ್ಯಾದೇಶ ಸ್ಥಾನದಲ್ಲಿ ಜಾರಿಯಾಗಲಿದೆ. ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಬಾಲಕಿ ಮೇಲೆ ಮತ್ತು ಉತ್ತರ ಪ್ರದೇಶದ ಉನ್ನಾವ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ತೀವ್ರ ವಿವಾದ ಸೃಷ್ಟಿಸಿದ ಬಳಿಕ ಕೇಂದ್ರ ಸರಕಾರ ಈ ಬಗ್ಗೆ ಅಧ್ಯಾದೇಶ ಹೊರಡಿಸಿತ್ತು.
ಕ್ರಿಮಿನಲ್ ಕಾನೂನು (ತಿದ್ದುಪಡಿ) ಮಸೂದೆ 2018ಕ್ಕೆ ಪಕ್ಷಭೇದ ಮರೆತು ಎಲ್ಲ ಸಂಸದರು ಧ್ವನಿಮತದಿಂದ ಅಂಗೀಕಾರ ನೀಡಿದ್ದಾರೆ. ಆದರೆ ವಿಪಕ್ಷಗಳ ಕೆಲವು ಸದಸ್ಯರು ಅಧ್ಯಾದೇಶ ಮೂಲಕ ಇಂಥ ಕಾನೂನು ಜಾರಿ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಎರಡೂವರೆ ಗಂಟೆಗಳ ಕಾಲ ನಡೆದ ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಕಿರಣ್ ರಿಜಿಜು, ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ರಕ್ಷಿಸಲು ಇಂಥ ಕ್ರಮ ಅಗತ್ಯ ಎಂದು ಸಮರ್ಥಿಸಿಕೊಂಡರು.
ಡೆಪ್ಯುಟಿ ಸ್ಪೀಕರ್ ಎಂ. ತಂಬಿದೊರೈ ಮಾತನಾಡಿ ಹೊಸ ಕಾನೂನಿನ ಬಗ್ಗೆ ವ್ಯಾಪಕ ಪ್ರಚಾರವಾಗಬೇಕು ಎಂದರು. ಚರ್ಚೆಯಲ್ಲಿ ಭಾಗವಹಿಸಿದ ಸಿಪಿಎಂನ ಪಿ.ಕೆ. ಶ್ರೀಮತಿ ಟೀಚರ್, ಸಂತ್ರಸ್ತ ಬಾಲಕಿಯರಿಗೆ ನೆರವು ನೀಡಲು 3 ಸಾವಿರ ಕೋಟಿ ರೂ. ಮೊತ್ತದ ನಿರ್ಭಯಾ ನಿಧಿ ಬಳಕೆ ಮಾಡಿಕೊಳ್ಳಬೇಕು ಎಂದು ಕೇಂದ್ರಕ್ಕೆ ಸಲಹೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.