ಆಪರೇಷನ್‌ ಕಮಲ; ಉ. ಕರ್ನಾಟಕದ ಅತೃಪ್ತ ನಾಯಕರೇ ಟಾರ್ಗೆಟ್‌


Team Udayavani, Jul 31, 2018, 6:00 AM IST

bjpsymbol.jpg

ಬೆಂಗಳೂರು: ಉತ್ತರ ಕರ್ನಾಟಕ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ರಾಜಕೀಯ ಅಸ್ತ್ರವಾಗಿ ಪ್ರಯೋಗಿಸುತ್ತಿರುವ ಬಿಜೆಪಿ ಸದ್ದಿಲ್ಲದೇ ಆಪರೇಷನ್‌ ಕಮಲ ಕಾರ್ಯಾಚರಣೆ ಪ್ರಯತ್ನಕ್ಕೆ ಕೈ ಹಾಕಿದೆ.

ಭಾವನಾತ್ಮಕ ವಿಚಾರ ಮುಂದಿಟ್ಟು ನಮ್ಮೊಂದಿಗೆ ಕೈ ಜೋಡಿಸಿದರೆ ಪಕ್ಷ ವಿರೋಧಿ ಚಟುವಟಿಕೆ ಅಥವಾ ದ್ರೋಹ ಮಾಡಿದರು ಎಂಬ ಹಣೆಪಟ್ಟಿ ಬರುವುದಿಲ್ಲ, ಕ್ಷೇತ್ರದ ಜನರ ಆಕ್ರೋಶಕ್ಕೂ ತುತ್ತಾಗುವುದಿಲ್ಲ. ಹೀಗಾಗಿ, ಮನಸ್ಸು ಮಾಡಿ ಎಂದು ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ಗಾಳ ಹಾಕಿದೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ.

ಸಚಿವ ಸ್ಥಾನ ವಂಚಿತರಾಗಿರುವ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿಗಳಾಗಿರುವ ಎಂ.ಬಿ.ಪಾಟೀಲ್‌, ಸತೀಶ್‌ ಜಾರಕಿಹೊಳಿ ಅವರನ್ನು ಸೆಳೆಯುವ ಮೆಗಾ ಪ್ಲ್ರಾನ್‌ ಇದಾಗಿದ್ದು, ಖುದ್ದು ಬಿ.ಎಸ್‌.ಯಡಿಯೂರಪ್ಪ ಹಾಗೂ ಶ್ರೀರಾಮುಲು ಆಪರೇಷನ್‌ ಕಮಲಕ್ಕೆ ಕೈ ಹಾಕಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ಲಿಂಗಾಯಿತ ಶಾಸಕರನ್ನು ಸಂಪರ್ಕ ಮಾಡಲಾಗಿದ್ದು, ಕೆಲವು ಮಠಾಧೀಶರ ಮೂಲಕವೂ ಒತ್ತಡ ಹಾಕಿಸಲಾಗುತ್ತಿದೆ. ಬಿಜೆಪಿಗೆ ದೊಡ್ಡ ಪ್ರಮಾಣದಲ್ಲಿ ಆ ಭಾಗದ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದೇ ಆದರೆ ಉಪ ಮುಖ್ಯಮಂತ್ರಿ ಸ್ಥಾನ ಆ ಭಾಗದವರಿಗೆ ಕೊಡಲು ಸಿದ್ಧ ಎಂಬ ಭರವಸೆ ಸಹ ಬಿಜೆಪಿಯ ಕೇಂದ್ರದ ನಾಯಕರಿಂದ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ.

ಎಂ.ಬಿ.ಪಾಟೀಲ್‌, ಸತೀಶ್‌ ಜಾರಕಿಹೊಳಿ ಇಬ್ಬರೂ ಜತೆಗೂಡಿದರೆ ಅವರ ಜತೆಗೂಡುವ ಶಾಸಕರ ಸಂಖ್ಯೆಯೂ ಹೆಚ್ಚಾಗುತ್ತದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಎರಡೂ ಪಕ್ಷಗಳಿಂದ ಸುಮಾರು 20 ಶಾಸಕರನ್ನು ಸೆಳೆಯುವ ಮಾಸ್ಟರ್‌ ಪ್ಲ್ರಾನ್‌ ಇದಾಗಿದ್ದು, ಇದು ಯಶಸ್ವಿಯಾದರೆ ಲೋಕಸಭೆ ಚುನಾವಣೆಗೆ ಮುನ್ನವೇ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡುವ ಟಾರ್ಗೆಟ್‌ ಹೊಂದಲಾಗಿದೆ ಎಂದು ಹೇಳಲಾಗಿದೆ.

ಉತ್ತರ ಕರ್ನಾಟಕ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ನೀಡಿರುವ ಹೇಳಿಕೆ ವಿವಾದದ ಸ್ವರೂಪ ಪಡೆದಿರುವುದರಿಂದ ಇದೇ ಸಮಯ ಎಂದು ಬಿಜೆಪಿ ರಂಗಪ್ರವೇಶ ಮಾಡಿದ್ದು, ಇತ್ತೀಚೆಗೆ ನಡೆದ ಕೋರ್‌ ಕಮಿಟಿ ಸಭೆಯಲ್ಲೂ ಈ ಬಗ್ಗೆ ಸುದೀರ್ಘ‌ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಬಜೆಜ್‌ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಮಾಡಲಾಗಿದೆ ಎಂಬ ಆರೋಪದ ಜತೆಗೆ ಇದೀಗ ಮುಖ್ಯಮಂತ್ರಿಯವರ ಹೇಳಿಕೆ ವಿರುದ್ಧ ಉತ್ತರ ಕರ್ನಾಟಕ ಭಾಗದಲ್ಲಿ ಹೋರಾಟ ತೀವ್ರ ಪ್ರಾರಂಭವಾಗಿರುವುದರಿಂದ ಕಾಂಗ್ರೆಸ್‌ಗೆ ರಾಜಕೀಯವಾಗಿ ನಷ್ಟವಾಗಲಿದೆ.

ಈ ಬಗ್ಗೆ ಖುದ್ದು ಆ ಭಾಗದ ಕಾಂಗ್ರೆಸ್‌ ನಾಯಕರೇ ಆತಂಕಗೊಂಡಿದ್ದಾರೆ. ಹೈಕಮಾಂಡ್‌ ಮಧ್ಯಪ್ರವೇಶಕ್ಕೂ ಒತ್ತಡ ಹಾಕಿದ್ದಾರೆ. ಹೀಗಾಗಿ,  ಈ ವಿಚಾರದಲ್ಲಿ ನಾವು ಹೋರಾಟ ನಡೆಸಿದರೆ ಆ ಭಾಗದ ಜನರ ವಿಶ್ವಾಸಗಳಿಸಬಹುದು. ರಾಜಕೀಯವಾಗಿಯೂ ಲಾಭ ಪಡೆಯಬಹುದು. ಕಾಂಗ್ರೆಸ್‌ ಹಾಗೂ ಜೆಡಿಎಸ್‌ಅನ್ನು ಆ ಭಾಗದಲ್ಲಿ ಕಟ್ಟಿ ಹಾಕಬಹುದು.

ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿರುವ  ಕಾಂಗ್ರೆಸ್‌ ಶಾಸಕರನ್ನು ಸೆಳೆದು ಭಾವನಾತ್ಮಕ ವಿಚಾರ ಮುಂದಿಟ್ಟು ಪಕ್ಷದ ವಿರುದ್ಧವೇ ಬಂಡೇಳುವಂತೆ ಮಾಡಬೇಕು.  ಉತ್ತರ ಕರ್ನಾಟಕಕ್ಕೆ ಅನ್ಯಾಯ ವಿಚಾರದಲ್ಲಿ ಒಂದೊಮ್ಮೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಕ್ಷೇತ್ರದ ಜನ ಗೆಲ್ಲಿಸುತ್ತಾರೆ. ಹೀಗಾಗಿ, ಯೋಚಿಸಿ ಎಂದು ಕಾಂಗ್ರೆಸ್‌ ಶಾಸಕರ ಮನವೊಲಿಸುವುದು. ಇದು ಯಶಸ್ವಿಯಾದರೆ ಆಪರೇಷನ್‌ ಕಮಲ ಕಾರ್ಯಾಚರಣೆಗೆ ಇಳಿಯುವುದು ಬಿಜೆಪಿಯ ಕಾರ್ಯತಂತ್ರವಾಗಿದೆ ಎಂದು ಹೇಳಲಾಗಿದೆ.

ಈ ಮೂಲಕ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಎರಡೂ ಪಕ್ಷಗಳಿಗೆ ರಾಜಕೀಯ ತಿರುಗೇಟು ನೀಡಲು ತಂತ್ರ ರೂಪಿಸಲಾಗಿದೆ. ಚುನಾವಣೆ ಮುಗಿದ ತಕ್ಷಣ ಇಂಥದ್ದೊಂದು ಪ್ರಯತ್ನಕ್ಕೆ ಮುಂದಾಗಿ ಬಿಜೆಪಿ ಕೈ ಸುಟ್ಟುಕೊಂಡ ಉದಾಹರಣೆ ಇದೆಯಾದರೂ ಈ ಬಾರಿಯ ಪ್ರಯತ್ನ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಪ್ರತಿಕ್ರಿಯಿಸದ ಪಾಟೀಲ್‌, ಜಾರಕಿಹೊಳಿ
ಉತ್ತರ ಕರ್ನಾಟಕ ಕುರಿತು ಸಿಎಂ ಕುಮಾರಸ್ವಾಮಿ ಹೇಳಿಕೆ ವಿವಾದದ ಸ್ವರೂಪ ಪಡೆದಿರುವ ಬಗ್ಗೆ ಎಂ.ಬಿ.ಪಾಟೀಲ್‌ ಆಗಲಿ, ಸತೀಶ್‌ ಜಾರಕಿಹೊಳಿ ಆಗಲಿ ಬಹಿರಂಗವಾಗಿ ಹೇಳಿಕೆ ಕೊಟ್ಟಿಲ್ಲ. ಒಂದೆಡೆ ಎಂ.ಬಿ.ಪಾಟೀಲ್‌ ಸಚಿವ ಸಂಪುಟದಲ್ಲಿ ಸ್ಥಾನ ಸಿಗದೇ ಆಕ್ರೋಶಗೊಂಡಿದ್ದಾರೆ. ಮತ್ತೂಂದೆಡೆ ಸತೀಶ್‌ ಜಾರಕಿಹೊಳಿ ಸಹ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದಲ್ಲದೇ, ಕಾಂಗ್ರೆಸ್‌ ನಡೆಸಿಕೊಳ್ಳುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಆಷಾಢದ ನಂತರ ವಿಸ್ತರಣೆ ಎಂದು ಹೇಳಲಾಗಿದೆಯಾದರೂ ರಾಜ್ಯ ನಾಯಕರು ಲೋಕಸಭೆ ಚುನಾವಣೆಯಲ್ಲಿ ವಂಚಿತರಿಂದ ತೊಂದರೆಯಾಗಬಹುದು ಎಂದು ಮೀನಾಮೇಷ ಎಣಿಸುತ್ತಿದ್ದಾರೆ. ಈ ಎಲ್ಲ ಮಾಹಿತಿ ಸಂಗ್ರಹಿಸಿರುವ ಬಿಜೆಪಿ ಉತ್ತರ ಕರ್ನಾಟಕದ ಭಾವನಾತ್ಮಕ ವಿಚಾರದಲ್ಲಿ ಆಪರೇಷನ್‌ ಕಮಲಕ್ಕೆ ಕೈ ಹಾಕುವ ಪ್ರಯತ್ನ ನಡೆಸಿದೆ ಎನ್ನಲಾಗಿದೆ.

ಬಿಜೆಪಿ ಭ್ರಮೆಯಲ್ಲಿದೆ: ಖಂಡ್ರೆ
ಬಿಜೆಪಿಯವರು ಭ್ರಮೆಯಲ್ಲಿದ್ದಾರೆ. ಸಮ್ಮಿಶ್ರ ಸರ್ಕಾರ ಬೀಳಿಸುವ ಕನಸು ಕಾಣುತ್ತಿದ್ದಾರೆ. ಆದರೆ, ಅದು ನನಸಾಗುವುದಿಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿ ಏನಾದರೂ ಆಗಿದ್ದರೆ ಅದು ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಮಾತ್ರ. ಹೈದಾರಾಬಾದ್‌ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ವಿಚಾರದಲ್ಲಿ  ಎಲ್‌.ಕೆ. ಅಡ್ವಾಣಿ ಏನು ಹೇಳಿದ್ದರು ಎಂಬುದು ನೆನಪಿಸಿಕೊಳ್ಳಲಿ. ಆದರೆ, ರಾಹುಲ್‌ಗಾಂಧಿಯವರು ಕಲಬುರಗಿಯಲ್ಲಿ ಬಂದು ಹೇಳಿ ಕೊಟ್ಟ ಮಾತಿಗೆ ತಕ್ಕಂತೆ ನಡೆದುಕೊಂಡರು. ಅದರಿಂದಾಗಿ ಇದೀಗ ಹೈದಾರಾಬಾದ್‌ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿಯಾಗುತ್ತಿದೆ. ಉದ್ಯೋಗಗಳು ಸಿಗುತ್ತಿವೆ ಎಂದು  ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

– ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.