ಹುಲಿಕಲ್‌ ಏರಲು ಬೇಕು ಹುಲಿ ಗುಂಡಿಗೆ


Team Udayavani, Jul 31, 2018, 9:29 AM IST

balebare-gatti.jpg

ಸಿದ್ದಾಪುರ: ಬಿರುಸಿನ ಮಳೆ ಮತ್ತು ಘನ ವಾಹನಗಳ ಓಡಾಟದಿಂದಾಗಿ ಶಿವಮೊಗ್ಗ ಮತ್ತು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಬೆಸೆಯುವ ಹುಲಿಕಲ್‌ (ಬಾಳೆಬರೆ) ಘಾಟಿ ರಸ್ತೆಯೂ ಕುಸಿಯುವ ಭೀತಿಯಲ್ಲಿದೆ. ಆದರೆ ದುರಸ್ತಿಗೊಳಿಸಬೇಕಾದ ಲೋಕೋಪಯೋಗಿ ಇಲಾಖೆಯು ನಿರ್ವಹಣೆ ಹೊಣೆಯನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಕೊಟ್ಟು ಕೈ ತೊಳೆದು ಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ಇನ್ನೂ ಕಾರ್ಯ ಪ್ರವೃತ್ತ ರಾಗದಿರುವುದು ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಸಿದೆ.

ಶಿರಾಡಿ, ಚಾರ್ಮಾಡಿ ಸಹಿತ ಪ್ರಮುಖ ಘಾಟಿ ರಸ್ತೆಗಳು ವಿವಿಧ ಕಾರಣಗಳಿಂದ ಬಂದ್‌ ಆಗಿದ್ದ ಕಾರಣ ಘನ ವಾಹನಗಳು ಬಾಳೆಬರೆ ಘಾಟಿ ಯನ್ನು ಅವಲಂಬಿಸಿದ್ದವು. ರಾಜ್ಯ ಹೆದ್ದಾರಿಯಾಗಿದ್ದರೂ ರಸ್ತೆಯ ಗುಣಮಟ್ಟ ಬಹಳ ಚೆನ್ನಾಗಿರದ ಕಾರಣ ಘನ ವಾಹನಗಳ ಸಂಚಾರ ತುಸು ಕಷ್ಟ. ಮಿತಿಮೀರಿದ ಸರಕು ಹೇರಿದ ವಾಹನಗಳು ಸಾಗುವಾಗ ಕೆಲವೆಡೆ ಭೂಮಿ ಕಂಪಿಸುತ್ತಿದೆ. ಇದರ ಪರಿಣಾಮ ರಸ್ತೆ ಹಾಗೂ ರಸ್ತೆಯ ಬದಿ ಕುಸಿಯುತ್ತಿದೆ.


ಪ್ರಮುಖ ಘಾಟಿ
ಬಳ್ಳಾರಿ, ದಾವಣಗೆರೆ ಮತ್ತಿತರ ಜಿಲ್ಲೆಗಳಿಂದಲೂ ಮಂಗಳೂರಿಗೆ ಸಂಪರ್ಕ ಹೊಂದಿರುವ ಪ್ರಮುಖ ಘಾಟಿ ರಸ್ತೆ ಇದು. ನಿತ್ಯವೂ 1,500ಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತಿದ್ದು, ಕನಿಷ್ಠ ದುರಸ್ತಿಯನ್ನೂ ನಡೆಸಿಲ್ಲ. ರಸ್ತೆಯ ಒಂದು ಪಾರ್ಶ್ವದಲ್ಲಿ ಸುಮಾರು 6 ಕಿ.ಮೀ.ವರೆಗೆ ಒಂದು ಸಾವಿರಕ್ಕೂ ಅಧಿಕ ಅಡಿ ಆಳದ ಪ್ರಪಾತವಿದೆ. ಅಲ್ಲಲ್ಲಿ ನಿರ್ಮಿಸಿರುವ ತಡೆಗೋಡೆಗಳಿಗೆ ವಾಹನಗಳು ಢಿಕ್ಕಿಯಾಗಿ ನಾಶವಾಗಿವೆ. ಒಟ್ಟು 12 ಕಿ.ಮೀ. ವ್ಯಾಪ್ತಿಯಲ್ಲಿ ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸಬೇಕಾದ ಸ್ಥಿತಿ ಇದೆ ಎನ್ನುತ್ತಾರೆ ಬಸ್‌ ಚಾಲಕರು. ರಸ್ತೆಯನ್ನು ಕೆಲವೆಡೆ ಅಗಲ ಗೊಳಿಸ ಲಾಗಿದ್ದರೆ, ಇನ್ನು ಕೆಲವೆಡೆ ಕಾಂಕ್ರೀಟ್‌ ಹಾಕಲಾಗಿದೆ. ಒಂದೆಡೆ ಬಂಡೆ ಕಲ್ಲಿನಿಂದ ಆ ವೃತವಾದ ಗುಡ್ಡ, ಇನ್ನೊಂದು ಬದಿಯಲ್ಲಿ ಆಳವಾದ ಕಮರಿ ಇರುವುದರಿಂದ ಚರಂಡಿ ನಿರ್ಮಿಸಿಲ್ಲ. ರಸ್ತೆಯ ಇಕ್ಕೆಲಗಳಲ್ಲಿ ಬೆಳೆದು ನಿಂತ ಬೃಹದಾಕಾರದ ಮರಗಳು, ಗಿಡಗಂಟಿಗಳಿಂದಾಗಿ ತಿರುವಿನಲ್ಲಿ ಎದುರಿನಿಂದ ಬರುವ ವಾಹನಗಳು ತೋರುತ್ತಿಲ್ಲ. ಎಚ್ಚರಿಕೆ ಫಲಕಗಳೂ ಇಲ್ಲದೆ ಅಪಘಾತಗಳು ಸಂಭವಿಸುತ್ತಿವೆ. ದಿನೇ ದಿನೆ ವಾಹನಗಳ ಸಂಚಾರ ಹೆಚ್ಚುತ್ತಿದ್ದು, ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿ ಮಾಡಬೇಕೆಂಬುದು ಸಾರ್ವಜನಿಕರ ಆಗ್ರಹ.

ನಿರ್ವಹಣೆ ಹೊಣೆ ನಮ್ಮದಲ್ಲ
ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದವರಿಗೆ ಈ ಸಾಲಿನಲ್ಲಿ ಕಾಮಗಾರಿಗಾಗಿ ರಸ್ತೆಯನ್ನು ಹಸ್ತಾಂತರಿಸಲಾಗಿದೆ. ಕುಂದಾಪುರದ ವಡೇರಹೋಬಳಿಯಿಂದ ಉಡುಪಿ ಜಿಲ್ಲೆಯ ಗಡಿ ಭಾಗದವರೆಗೆ 45 ಕಿ.ಮೀ. ರಸ್ತೆ ಕಾಮಗಾರಿಗೆ ಸಿಆರ್‌ಎಫ್‌ ನಿಧಿಯಿಂದ 10 ಕೋ.ರೂ. ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಕಾಮಗಾರಿ ಮುಗಿಸಿ, ಎರಡು ವರ್ಷ ನಿರ್ವಹಿಸಿದ ಮೇಲೆ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸುತ್ತದೆ. ಕಾಮಗಾರಿ ಪೂರ್ಣ ಆಗದಿರುವುದರಿಂದ ರಸ್ತೆಯ ಹೊಣೆ ಅವರದ್ದು. ಓವರ್‌ ಲೋಡ್‌ ಘನ ವಾಹನಗಳ ಸಂಚಾರದ ಬಗ್ಗೆ ಆರ್‌ಟಿಒ ಮೂಲಕ ಸರಕಾರಕ್ಕೆ ಬರೆದಿದ್ದೇವೆ.
– ಚಂದ್ರಶೇಖರ್‌, ಎಇ, ಲೋಕೋಪಯೋಗಿ ಇಲಾಖೆ ಉಡುಪಿ ಜಿಲ್ಲೆ ಉಪ ವಿಭಾಗ

ಸರಕಾರದ ಒಪ್ಪಿಗೆ ಅಗತ್ಯ
ಘಾಟಿ ರಸ್ತೆಗೆ ಡಾಮರು ಹಾಗೂ ತಡೆಗೋಡೆ ನಿರ್ಮಾಣದ ಬಗ್ಗೆ ಸರಕಾರಕ್ಕೆ ಬರೆದಿದ್ದು, ಒಪ್ಪಿಗೆ ಸಿಕ್ಕಿದ ಕೂಡಲೇ ಕಾಮಗಾರಿ ಆರಂಭಿಸುತ್ತೇವೆ.
– ಸುರೇಶ್‌, ಸೆಕ್ಷನ್‌ ಆಫೀಸರ್‌, ಲೋಕೋಪಯೋಗಿ ಇಲಾಖೆ ಹೊಸನಗರ ಉಪ ವಿಭಾಗ

*ಸತೀಶ್‌ ಆಚಾರ್‌ ಉಳ್ಳೂರ್‌

ಟಾಪ್ ನ್ಯೂಸ್

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

13

Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.