ಹೆಗ್ಗಡೆ ಸೇವಾ ಸಂಘ ಮುಂಬಯಿ ಗುರುಪೂರ್ಣಿಮೆ
Team Udayavani, Jul 31, 2018, 10:59 AM IST
ನವಿಮುಂಬಯಿ: ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ವಾರ್ಷಿಕ ಗುರುಪೂರ್ಣಿಮೆ ಮಹೋತ್ಸವವು ಜು. 29 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಐರೋಲಿಯ ಹೆಗ್ಗಡೆ ಭವನದಲ್ಲಿ ಅದ್ದೂರಿಯಾಗಿ ನಡೆಯಿತು.
ಧಾರ್ಮಿಕ ಕಾರ್ಯಕ್ರಮವಾಗಿ ಅಪರಾಹ್ನ 3ರಿಂದ ದೇವತಾ ಪ್ರಾರ್ಥನೆ, ಕಲಶ ಪ್ರತಿಷ್ಠೆ, ಅಪರಾಹ್ನ 3.30 ರಿಂದ ಶ್ರೀ ಅಯ್ಯಪ್ಪ ಭಜನ ಮಂಡಳಿ ಐರೋಲಿ ವತಿಯಿಂದ ಭಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಜೆ 5 ರಿಂದ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಸಂಜೆ 5.30 ರಿಂದ ಪದ್ಮನಾಭ ಸಸಿಹಿತತ್ಲು ಅವರ ನಿರ್ದೇಶನದಲ್ಲಿ ಕಲಾ ಸೌರಭ ಮುಂಬಯಿ ಇವರಿಂದ ಸಂಗೀತ ಶೃಂಗಾರ ಭಕ್ತಿ-ಭಾವ ಸಂಗಮ ಕಾರ್ಯಕ್ರಮ ನೆರವೇರಿತು.
ರಾತ್ರಿ 8 ರಿಂದ ಮಹಾಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು. ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಅಧ್ಯಕ್ಷ ವಿಜಯ್ ಬಿ. ಹೆಗ್ಡೆ, ಗೌರವಾಧ್ಯಕ್ಷ ಸಂಜೀವ ಪಿ. ಹೆಗ್ಡೆ, ಗೌರವ ಪ್ರಧಾನ ಕಾರ್ಯದರ್ಶಿ ಶಂಕರ ಆರ್. ಹೆಗ್ಡೆ, ಕೋಶಾಧಿಕಾರಿ ರಮೇಶ್ ಎಂ. ಹೆಗ್ಡೆ, ಉಪಾಧ್ಯಕ್ಷ ಸುರೇಶ್ ಹೆಗ್ಡೆ, ಜತೆ ಕಾರ್ಯದರ್ಶಿ ರವಿ ಎಸ್. ಹೆಗ್ಡೆ, ಜತೆ ಕೋಶಾಧಿಕಾರಿ ಚಂದ್ರಶೇಖರ್ ಬಿ. ಹೆಗ್ಡೆ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಪದಾಧಿಕಾರಿಗಳು, ಯುವ ವಿಭಾಗದ ಪದಾಧಿಕಾರಿಗಳು, ಸದಸ್ಯ-ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಸಮಾಜ ಬಾಂಧವರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.
ಚಿತ್ರ-ವರದಿ : ಸುಭಾಶ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swara@150: ಪೊಲೇಂಡ್ ಕನ್ನಡಿಗರು ಸಂಘದ ಅದ್ದೂರಿ ಉದ್ಘಾಟನೆ
Desi Swara@150: ನವವಿಂಶತಿ ನೃತ್ಯ ಹಬ್ಬದಲ್ಲಿ ದ್ವಿದಳದ ಸತ್ರಿಯ ಪ್ರದರ್ಶನ
State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.