ಭಂಡಾರಿ ಸೇವಾ ಸಮಿತಿ ಮುಂಬಯಿ 65 ನೇ ವಾರ್ಷಿಕ ಮಹಾಸಭೆ


Team Udayavani, Jul 31, 2018, 11:18 AM IST

2907mum02.jpg

ಮುಂಬಯಿ: ನಮ್ಮ ಸಂಘದಲ್ಲಿ ಮುಂದೆ ಅನೇಕ ಒಳ್ಳೆಯ ಕಾರ್ಯಕ್ರಮಗಳು ನಡೆಯಬೇಕು. ನಮ್ಮ ಸಮಾಜ ಎತ್ತರಕ್ಕೆ ಬೆಳೆದು ಅಭಿವೃದ್ಧಿ ಕಾಣಬೇಕೆಂದು ನನ್ನ ಆಸೆ. ಅದಕ್ಕಾಗಿ ನಾವೆಲ್ಲ ಒಗ್ಗೂಡಿ ಸಂಘದಲ್ಲಿ ನಮ್ಮನ್ನು ನಾವೂ ತೊಡಗಿಸಬೇಕು. ಅಧಿಕಾರ ಶಾಶ್ವತವಲ್ಲ ಸೇವೆಯೇ ಸ್ಥಿರವಾದುದು. ಆದ್ದರಿಂದ ಅವ ಕಾಶಗಳನ್ನು ಸದುಪಯೋಗ ಪಡಿಸಿ ಸಂಸ್ಥೆಯ ಮೂಲಕ ಸಮುದಾಯ ವನ್ನು ಮುನ್ನಡೆಸೋಣ ಎಂದು ಭಂಡಾರಿ ಸೇವಾ ಸಮಿತಿ ಮುಂಬಯಿ ಅಧ್ಯಕ್ಷ, ನ್ಯಾಯವಾದಿ ಶೇಖರ್‌ ಎಸ್‌. ಭಂಡಾರಿ ತಿಳಿಸಿದರು.

ಜು. 28ರಂದು ಅಪರಾಹ್ನ ಸಯಾನ್‌ನ ಮುಖ್ಯ ಅಧ್ಯಾಪ‌ಕ ಭವನದ ಶ್ರೀ ಸ್ವಾಮಿ ನಿತ್ಯಾನಂದ ಸಭಾಗೃಹದಲ್ಲಿ ನಡೆದ ಭಂಡಾರಿ ಸೇವಾ ಸಮಿತಿಯ  65 ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಎರಡು ಅವಧಿಗೆ ಈ ಸಂಸ್ಥೆಯ ಚುಕ್ಕಾಣಿಯನ್ನಿತ್ತು ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸಲು ಸಹಯೋಗವನ್ನಿತ್ತ ಸರ್ವರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮುಂದಿನ ಅಧ್ಯಕ್ಷರಿಗೂ ಹಾಗೂ ನೂತನ ಸಮಿತಿಗೂ ನನ್ನ ಪ್ರೋತ್ಸಾಹ, ಸಹಕಾರ ಸದಾಯಿದೆ ಎಂದರು.

ಸೇವಾ ಸಮಿತಿಯ ಉಪಾಧ್ಯಕ್ಷರಾದ ನ್ಯಾಯವಾದಿ ರಾಮಣ್ಣ ಎಂ. ಭಂಡಾರಿ ಮತ್ತು ಪ್ರಭಾಕರ್‌ ಪಿ. ಭಂಡಾರಿ, ಜೊತೆ ಕಾರ್ಯದರ್ಶಿ ಶಶಿಧರ್‌ ಡಿ. ಭಂಡಾರಿ ಜೊತೆ ಕೋಶಾಧಿಕಾರಿ ಪ್ರಕಾಶ್‌ ಭಂಡಾರಿ, ಮಹಿಳಾ ವಿಭಾಗಧ್ಯಕ್ಷೆ ಶೋಭಾ ಸುರೇಶ್‌ ಭಂಡಾರಿ ಕಡಂದಲೆ, ಉಪ ಕಾರ್ಯಾಧ್ಯಕ್ಷೆ ಪಲ್ಲವಿ ರಂಜಿತ್‌ ಭಂಡಾರಿ, ಕಾರ್ಯದರ್ಶಿ ರೇಖಾ ಎ. ಭಂಡಾರಿ, ಕೋಶಾಧಿಕಾರಿ ಕು| ಕ್ಷಮಾ ಆರ್‌. ಭಂಡಾರಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪದಾಧಿಕಾರಿಗಳನ್ನೊಳಗೊಂಡು ಅಧ್ಯಕ್ಷ ಶೇಖರ ಭಂಡಾರಿ ಅವರು ದೀಪ ಪ್ರಜ್ವಲಿಸಿ, ಕುಲದೇವರಾದ ಕಚ್ಚಾರು ಶ್ರೀ ನಾಗೇಶ್ವರ ದೇವರಿಗೆ ಆರತಿ ನೆರವೇರಿಸಿ ಸಭೆಗೆ ಚಾಲನೆ ನೀಡಿದರು. ಸಭೆಯಲ್ಲಿ ಸೇವಾ ಸಮಿತಿಯ ಇತರ ಪದಾಧಿಕಾರಿಗಳು, ಸದಸ್ಯರು, ಭಂಡಾರಿ ಸಮಾಜದ ಬಂಧುಗಳು ಉಪಸ್ಥಿತರಿದ್ದು ಗತ ಸಾಲಿನಲ್ಲಿ ಅಗಲಿದ ಸರ್ವ ಭಂಡಾರಿ ಬಾಂಧವರು ಹಾಗೂ ಗಣ್ಯರಿಗೆ ಮೌನ ಪ್ರಾರ್ಥನೆಯೊಂದಿಗೆ ಬಾಷ್ಪಾಂಜಲಿ ಅರ್ಪಿಸಲಾಯಿತು. ಸಭಿಕರ ಪರವಾಗಿ ರಂಜಿತ್‌ ಎಸ್‌. ಭಂಡಾರಿ, ಪ್ರಕಾಶ್‌ ಭಂಡಾರಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಸಲಹೆ ಸೂಚನೆಗಳನ್ನು ನೀಡಿದರು.

ಕು| ರಿಯಾ ಆರ್‌. ಭಂಡಾರಿ ಪ್ರಾರ್ಥನೆಗೈದರು. ಗೌ| ಪ್ರ| ಕಾರ್ಯದರ್ಶಿ ವಿಜಯ ಆರ್‌. ಭಂಡಾರಿ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಶಶಿಧರ್‌ ಡಿ. ಭಂಡಾರಿ ಗತ ವಾರ್ಷಿಕ ಮಹಾಸಭೆ ವರದಿ, ವಾರ್ಷಿಕ ಚಟುವಟಿಕೆಗಳ ಮಾಹಿತಿ ನೀಡಿದರು. ಗೌರವ  ಕೋಶಾಧಿಕಾರಿ ಕರುಣಾಕರ ಜಿ. ಭಂಡಾರಿ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಜೊತೆ ಕಾರ್ಯದರ್ಶಿ ಪುರುಷೋತ್ತಮ ಜಿ.ಭಂಡಾರಿ ವಂದಿಸಿದರು. ಸಭೆಯ ಕೊನೆಯಲ್ಲಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸಮಿತಿಯ ಸದಸ್ಯರ ಮಕ್ಕಳಿಗೆ ಶೈಕ್ಷಣಿಕ ನೆರವು ವಿತರಿಸಿ, ಪ್ರತಿಭಾವಂದ ವಿದ್ಯಾರ್ಥಿಗಳನ್ನು ಗೌರವಿಸಿ ಶುಭಹಾರೈಸಿದರು.

ಕಚ್ಚಾರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್‌ನ ಆಡಳಿತ ಮೊಕ್ತೇಸರ ಕಡಂದಲೆ ಸುರೇಶ್‌ ಎಸ್‌. ಭಂಡಾರಿ,  ಮಾಜಿ ಅಧ್ಯಕ್ಷ ಬಾಲಕೃಷ್ಣ ಪಿ. ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು. ಸಭೆಯಲ್ಲಿ ಸಂಸ್ಥೆಯ 2018-2020 ರ ಎರಡು ವರ್ಷಗಳ ಕಾಲಾವಧಿಗೆ ನೂತನ  ಕಾರ್ಯಕಾರಿ ಸಮಿತಿಯ  ಸದಸ್ಯರುಗಳ ಹೆಸರನ್ನು ಪ್ರಕಟಿಸಲಾಯಿತು. ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಆರ್‌. ಎಂ. ಭಂಡಾರಿ, ಪ್ರಧಾನ ಕಾರ್ಯದರ್ಶಿ ಆಗಿ ಶಶಿಧರ್‌ ಡಿ. ಭಂಡಾರಿ ಅವರನ್ನು ಆಯ್ಕೆ ಮಾಡಲಾಯಿತು. ಸದಸ್ಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಚಿತ್ರ-ವರದಿ :  ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.