ಒಕ್ಕಲಿಗರ ಸಂಘದ ಅಧ್ಯಕ್ಷ ಪದಚ್ಯುತಿ


Team Udayavani, Jul 31, 2018, 11:23 AM IST

blore-7.jpg

ಬೆಂಗಳೂರು: ದಿಢೀರ್‌ ಬೆಳವಣಿಗೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫ‌ಲರಾದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಎನ್‌.ಬೆಟ್ಟೇಗೌಡ ಹಾಗೂ ಇತರ ಪದಾಧಿಕಾರಿಗಳು ಸೋಮವಾರ ಪದಚ್ಯುತಿಗೊಂಡಿದ್ದು, ಆ.7ರಂದು ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆ ನಡೆಯಲಿದೆ.

ನಾಲ್ಕೂವರೆ ವರ್ಷದ ಹಿಂದೆ ಒಕ್ಕಲಿಗರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಮೊದಲ ಮೂರು ವರ್ಷ ಡಾ.ಅಪ್ಪಾಜಿಗೌಡ
ಅಧ್ಯಕ್ಷರಾಗಿದ್ದರು. ಬಳಿಕ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಕೈಗೊಂಡ ಕಾರಣ 2017ರ ಜನವರಿಯಲ್ಲಿ ಡಿ.ಎನ್‌.ಬೆಟ್ಟೇಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಸದ್ಯ ಜಂಟಿ ಕಾರ್ಯದರ್ಶಿಯಾಗಿದ್ದ ನಾರಾಯಣ ಮೂರ್ತಿ ಅವರನ್ನು ಹಂಗಾಮಿ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ಒಕ್ಕಲಿಗರ ಸಂಘದ ಅಧೀನ ಸಂಸ್ಥೆಗಳಲ್ಲಿ ಅನಗತ್ಯವಾಗಿ ಸಾವಿರಾರು ಸಿಬ್ಬಂದಿಯನ್ನು ನೇಮಕ ಮಾಡುವ ಮೂಲಕ
ಅಭ್ಯರ್ಥಿಗಳಿಂದ ದೊಡ್ಡ ಮೊತ್ತದ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಅನಗತ್ಯ ಸಿಬ್ಬಂದಿ ಕೈಬಿಡಬೇಕು ಎಂದು ಒತ್ತಾಯಿಸಿ ರಾಜ್ಯ ಒಕ್ಕಲಿಗರ ಸಂಘದ ಅಧೀನದಲ್ಲಿರುವ 18 ಸಂಸ್ಥೆಗಳ ನೌಕರರು ಎರಡು ಸುತ್ತಿನ ಪ್ರತಿಭಟನೆ ನಡೆಸಿದ್ದರು. ಇದರಿಂದ ಕಿಮ್ಸ್‌ ಸೇರಿ ಇತರೆ ಆಸ್ಪತ್ರೆಗಳಲ್ಲಿ ಹೊರ ರೋಗಿ ಚಿಕಿತ್ಸೆಯಲ್ಲಿ ವ್ಯತ್ಯಯ ಉಂಟಾಗಿತ್ತು.

ಸಂಘದ ಸಂಸ್ಥೆಗಳ ಕಾಯಂ ನೌಕರರಿಗೆ ಸಕಾಲದಲ್ಲಿ ವೇತನ ನೀಡದ ಸ್ಥಿತಿ ಇರುವಾಗ ಅನಗತ್ಯ ಸಿಬ್ಬಂದಿ ನೇಮಕದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಬಗ್ಗೆ ಸಂಘದ ನಿರ್ದೇಶಕರೂ ಆಕ್ಷೇಪ ವ್ಯಕ್ತಪಡಿಸಿದ್ದರು. ಕೆಲ ನಿರ್ದೇಶಕರು ನೌಕರರ ಸಂಘಕ್ಕೆ ಕುಮ್ಮಕ್ಕು ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂಬುದಾಗಿ ಪದಚ್ಯುತ ಅಧ್ಯಕ್ಷ ಬೆಟ್ಟೇಗೌಡ ಕೂಡ ಈ ಹಿಂದೆ ಆರೋಪಿಸಿದ್ದರು.

ಸಭೆ ಕರೆದಿರಲಿಲ್ಲ: ಈ ನಡುವೆ ಸಂಘದ ಅಧ್ಯಕ್ಷರಾಗಿದ್ದ ಬೆಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್‌, ಖಜಾಂಚಿ ಕಾಳೇಗೌಡ ವಿರುದ್ಧ ಸಂಘದ 35 ನಿರ್ದೇಶಕರ ಪೈಕಿ 19 ನಿರ್ದೇಶಕರು ಅವಿಶ್ವಾಸ ನಿರ್ಣಯ ಮಂಡಿಸಿ ನೋಟಿಸ್‌ ನೀಡಿದ್ದರು. ಅವಿಶ್ವಾಸ ನಿರ್ಣಯ ಮಂಡಿಸಿದ ಏಳು ದಿನದೊಳಗೆ ಅಧ್ಯಕ್ಷರು ವಿಶ್ವಾಸ ಮತ ಸಾಬೀತು
ಪಡಿಸಬೇಕು. ಆದರೆ 12 ದಿನ ಕಳೆದರೂ ಬೆಟ್ಟೇಗೌಡರು ಸಭೆ ಕರೆಯದ ಕಾರಣ ಉಪಾಧ್ಯಕ್ಷರಾಗಿದ್ದ ಶಿವಲಿಂಗಯ್ಯ ಎಲ್ಲ 35 ನಿರ್ದೇಶಕರಿಗೆ ನೋಟಿಸ್‌ ನೀಡಿ ಸೋಮವಾರ ಸಭೆ ಕರೆದಿದ್ದರು.

ಅವಿಶ್ವಾಸದ ಪರ 21 ಮತ: ಶಿವಲಿಂಗಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ 22 ನಿರ್ದೇಶಕರು
ಪಾಲ್ಗೊಂಡಿದ್ದರು. ಬೆಟ್ಟೇಗೌಡ ಸೇರಿ ಹಲವರು ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಅವಿಶ್ವಾಸ ನಿರ್ಣಯದ ಪರ 21 ಮತ
ಚಲಾವಣೆಯಾದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿದ್ದ ಬೆಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್‌, ಖಜಾಂಚಿ ಕಾಳೇಗೌಡ ಪದಚ್ಯುತಿಗೊಂಡರು. ಬಳಿಕ ಉಪಾಧ್ಯಕ್ಷರಾದ ಶಿವಲಿಂಗಯ್ಯ, ಪ್ರಸನ್ನ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜಂಟಿ ಕಾರ್ಯದರ್ಶಿಯಾಗಿದ್ದ ನಾರಾಯಣ ಮೂರ್ತಿ ಅವರನ್ನು ಕಾರ್ಯದರ್ಶಿಯನ್ನಾಗಿ ಸಭೆಯಲ್ಲಿ ನೇಮಕ ಮಾಡಲಾಗಿದೆ.

ಸಂಘದ ಮೇಲೆ ಆರ್ಥಿಕ ಹೊರೆ ಪದಚ್ಯುತ ಅಧ್ಯಕ್ಷ ಸೇರಿ ಮೂವರು ಪದಾಧಿಕಾರಿಗಳ ವಿರುದ್ಧ ಜು.18ರಂದು ಅವಿಶ್ವಾಸ ನಿರ್ಣಯ ಮಂಡಿಸಿದ್ದೆವು. ಆದರೆ ಸಭೆಯನ್ನೇ ಕರೆಯದ ಕಾರಣ ಉಪಾಧ್ಯಕ್ಷರಾಗಿದ್ದ ಶಿವಲಿಂಗಯ್ಯ ನೋಟಿಸ್‌ ನೀಡಿ ನಡೆಸಿದ ಸಭೆಯಲ್ಲಿ ಅವಿಶ್ವಾಸದ ಪರ 21 ಮತ ಚಲಾವಣೆಯಾಗಿವೆ. ಬೆಟ್ಟೇಗೌಡರ ಒಂದೂವರೆ ವರ್ಷದ ಆಡಳಿತಾವಧಿಯಲ್ಲಿ ಅನಗತ್ಯವಾಗಿ 1100 ಸಿಬ್ಬಂದಿ ನೇಮಕವಾಗಿದೆ. ಅನುದಾನ ಕಾಯ್ದಿರಿಸದೆ ಅನಗತ್ಯ ಹುದ್ದೆಗಳನ್ನು ನೇಮಕ ಮಾಡಿ ಸಂಘಕ್ಕೆ ಆರ್ಥಿಕ ಹೊರೆ ತಂದಿದ್ದಾರೆ. ಅತಿಗಣ್ಯರಿಗೆ ನೀಡಿದ್ದ ಸೀಟು ಹಂಚಿಕೆ ಸೇರಿದಂತೆ ಸಂಘದ ನಿರ್ದೇಶಕರ ವಿರುದ್ಧವೂ ಅನಗತ್ಯ ಆರೋಪ ಮಾಡಿ ಸಂಘದ ಘನತೆಗೆ ಚ್ಯುತಿ ತಂದಿದ್ದರು ಎಂದು ಸಂಘದ ಮಾಜಿ ಅಧ್ಯಕ್ಷ ಅಪ್ಪಾಜಿಗೌಡ ಹೇಳಿದರು.

ನಾನು ಕಾನೂನು ಹೋರಾಟಕ್ಕೆ ಮುಂದಾಗುವುದಿಲ್ಲ. ಆದರೆ ಈ ಹಿಂದೆ ಕೆಲವರು ಸಂಘಕ್ಕೆ 61 ಕೋಟಿ ರೂ. ನಷ್ಟ ಮಾಡಿದ್ದನ್ನು ಬಯಲು ಮಾಡಿದ್ದೆ. ಅದಕ್ಕೆ ಕಾರಣರಾದವರು ಅವಿಶ್ವಾಸ ನಿರ್ಣಯದಲ್ಲಿ ಪಾಲ್ಗೊಂಡಿದ್ದು, ಅವರ ಅಕ್ರಮ ಬಯಲು ಮಾಡುವೆ. ಅವರಿಂದಲೇ ನಷ್ಟ ಭರಿಸಲು ಹೋರಾಟ ನಡೆಸುವೆ. 
 ಡಿ.ಎನ್‌.ಬೆಟ್ಟೇಗೌಡ, ಪದಚ್ಯುತ ಅಧ್ಯಕ

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.