ರಾಜ್ಯದಲ್ಲಿ ತೆಲಂಗಾಣ ಮಾದರಿ ಸಂಚಾರ ನಿಯಮ ಜಾರಿ?


Team Udayavani, Aug 1, 2018, 6:00 AM IST

20.jpg

ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಸಾರಿಗೆ ಇಲಾಖೆ ಮತ್ತು ಪೊಲೀಸ್‌ ಇಲಾಖೆ, ಈ ನಿಟ್ಟಿನಲ್ಲಿ ತೆಲಂಗಾಣ ಮಾದರಿ ಸಂಚಾರ ನಿಯಮಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಿದೆ. ಹಾಗೊಂದು ವೇಳೆ ತೆಲಂಗಾಣ ಮಾದರಿ
ಜಾರಿಯಾದರೆ, ರಾಜ್ಯದಲ್ಲಿ ಸಂಚಾರ ನಿಯಮ ಉಲ್ಲಂಸುವವರ ಮೇಲೆ ಗರಿಷ್ಠ ಮಟ್ಟದ “ದಂಡ ಪ್ರಯೋಗ’ ನಡೆಯಲಿದೆ. ಅದರಲ್ಲೂ ಕೆಲವು ನಿರ್ದಿಷ್ಟ ನಿಯಮಗಳಲ್ಲಿ ದಂಡದ ಮೊತ್ತ ದುಪ್ಪಟ್ಟಿನಿಂದ ಹತ್ತುಪಟ್ಟುವರೆಗೂ ಹೆಚ್ಚಳ ಆಗಲಿದೆ. ಈ ಸಂಬಂಧ ಪೊಲೀಸ್‌ ಇಲಾಖೆ ಸಾರಿಗೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ.

ರಾಜ್ಯದಲ್ಲಿ ಪ್ರಸ್ತುತ ಸಂಚಾರ ನಿಯಮಗಳಿದ್ದರೂ ಉಲ್ಲಂಘನೆ ಪ್ರಮಾಣ ಹೆಚ್ಚುತ್ತಲೇ ಇದೆ. ಅದರಲ್ಲೂ ಬೆಂಗಳೂರಿನಂತಹ ಮಹಾನಗರಗಳಲ್ಲಿ ಸಿಗ್ನಲ್‌ ಜಂಪಿಂಗ್‌, ನಿಷೇಧಿತ ಪ್ರದೇಶದಲ್ಲಿ ವಾಹನಗಳ ನಿಲುಗಡೆ, ಅರ್ಹತಾ ಪ್ರಮಾಣ ಪತ್ರಗಳಿಲ್ಲದೆ ವಾಹನ ಚಾಲನೆ ಸೇರಿದಂತೆ ನಿರ್ದಿಷ್ಟ
ನಿಯಮಗಳ ಉಲ್ಲಂಘನೆ ಪ್ರಮಾಣ ತಲೆನೋವಾಗಿದೆ. ಈ ಹಿನ್ನೆಲೆಯಲ್ಲಿ ಗರಿಷ್ಠ ಮಟ್ಟದ ದಂಡ ಪ್ರಯೋಗ ಮಾಡಿ, ಉಲ್ಲಂಘನೆಗಳಿಗೆ ಕಡಿವಾಣ ಹಾಕುವುದು ಇದರ ಮುಖ್ಯಉದ್ದೇಶ. ಗರಿಷ್ಠ ಪ್ರಮಾಣದ ದಂಡ ವಿಧಿಸಿದರೆ, ಸಾಧ್ಯವಾದಷ್ಟು ನಿಯಮ ಉಲ್ಲಂಘನೆ ಪ್ರಕರಣಗಳು ಕಡಿಮೆ ಆಗಲಿವೆ. ಇದು ತೆಲಂಗಾಣದಲ್ಲಿ ಫ‌ಲ ನೀಡಿದೆ ಎಂಬುದು ಅಧಿಕಾರಿಗಳ ವಾದ. ಈ ಬಗ್ಗೆ ಸ್ವತಃ ಪೊಲೀಸ್‌ ಮಹಾನಿರ್ದೇಶಕರು ಈ ಪ್ರಸ್ತಾವವನ್ನು ಸರ್ಕಾರದ
ಮುಂದಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಪ್ರಸ್ತಾವನೆ ಬಂದಿದೆ -ಸಾರಿಗೆ ಇಲಾಖೆ: ಸಂಚಾರ ನಿಯಮಗಳನ್ನು ಉಲ್ಲಂಘನೆಗೆ ಸಂಬಂಧಿಸಿದಂತೆ ಕೇಂದ್ರವು ಸಾರಿಗೆ ನಿಯಮಗಳನ್ನು ಪರಿಷ್ಕರಣೆ
ಮಾಡುತ್ತಿದೆ. ಆದರೆ ಅದಕ್ಕೂ ಮುನ್ನ ತೆಲಂಗಾಣದಂತೆ ನಮ್ಮಲ್ಲೂ ಗರಿಷ್ಠ ದಂಡದ ನಿಯಮಗಳನ್ನು ತರುವ ಬಗ್ಗೆ ಚಿಂತನೆ ನಡೆದಿದೆ. ಒಟ್ಟಾರೆ ಉದ್ದೇಶ ಕಠಿಣ ನಿಯಮಗಳನ್ನು ಜಾರಿಗೊಳಿಸುವುದಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜು “ಉದಯವಾಣಿ’ಗೆ ಸ್ಪಷ್ಟಪಡಿಸಿದರು.  ಈ ಪ್ರಸ್ತಾವನೆಯ ಪ್ರತಿಯನ್ನು ಸಾರಿಗೆ ಇಲಾಖೆ ಅಧಿಕಾರಿಗಳು, ಪರಿಶೀಲನೆಗಾಗಿ ಸಂಸದೀಯ ವ್ಯವಹಾರಗಳ ಇಲಾಖೆಗೆ ಕಳುಹಿಸಿದೆ. ಅದರ ಒಂದು ಪ್ರತಿಯನ್ನು ಗೃಹ ಇಲಾಖೆಗೆ ರವಾನಿಸಿದೆ ಎಂದೂ ಅವರು ಮಾಹಿತಿ ನೀಡಿದರು.

ಈ ಮಧ್ಯೆ ಬೆಂಗಳೂರು ಮಹಾನಗರದಲ್ಲೇ 5 ವರ್ಷಗಳಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳು ಏರಿಕೆ  ಕ್ರಮದಲ್ಲಿ ಸಾಗಿವೆ. ಪ್ರಸಕ್ತ ಸಾಲಿನಲ್ಲಿ ಜೂನ್‌ ಅಂತ್ಯಕ್ಕೆ 38.29 ಲಕ್ಷ ಪ್ರಕರಣಗಳಿಂದ 42.83 ಕೋಟಿ ರೂ. ಸಂಗ್ರಹಿಸಲಾಗಿದೆ ಎಂದು ನಗರ ಪೊಲೀಸ್‌ ಹೆಚ್ಚುವರಿ ಆಯುಕ್ತ (ಸಂಚಾರ) ಆರ್‌. ಹಿತೇಂದ್ರ ತಿಳಿಸಿದರು. “ಆದರೆ, ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳಿಗೆ ಕಡಿವಾಣ ಹಾಕಲು ತೆಲಂಗಾಣ ಮಾದರಿ ನಿಯಮ ಜಾರಿಗೆ ಕುರಿತ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸದ್ಯಕ್ಕೆ ನನಗೆ ಮಾಹಿತಿ ಇಲ್ಲ’ ಎಂದೂ ಸ್ಪಷ್ಟಪಡಿಸಿದರು.

ತೆಲಂಗಾಣ ಮಾದರಿ ಹೇಳ್ಳೋದೇನು?
ಈಗಿರುವ ಮೋಟಾರು ವಾಹನ ಕಾಯ್ದೆ-1988ರಡಿ ಸಾರಿಗೆ ನಿಯಮಗಳನ್ನು ಉಲ್ಲಂ ಸುವವರಿಗೆ ವಿಧಿಸಲಾಗುತ್ತಿರುವ ದಂಡದ ಪ್ರಮಾಣ ಕಡಿಮೆ ಇದೆ. ಹಾಗಾಗಿ, ಇದರ ಬಿಸಿ ಅಷ್ಟಾಗಿ ತಟ್ಟುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆ, ಸಂಚಾರ ನಿಯಮಗಳ ಪಾಲನೆ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ ಸೆಕ್ಷನ್‌ 200ರಡಿ ದಂಡ ವಿಧಿಸಲು ನಿರ್ಧರಿಸಲಾಗಿದೆ. ಈ ಆದೇಶವು ಅವಿಭಜಿತ ಆಂಧ್ರಪ್ರದೇಶ ಇದ್ದಾಗಲೇ ಅಂದರೆ 2011ರ ಆಗಸ್ಟ್‌ನಲ್ಲೇ ಆಗಿದೆ.

ಒಂದು ವೇಳೆ ಕೇಂದ್ರದ ಪರಿಷ್ಕೃತ ನೀತಿ ಜಾರಿಯಾದರೆ, ರಾಜ್ಯದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ತೆಲಂಗಾಣ ಮಾದರಿಯ ನೀತಿ ಸಹಜವಾಗಿ ರದ್ದಾಗುತ್ತದೆ. ಆದರೆ, ಕಳೆದೆರಡು ವರ್ಷಗಳಿಂದ ಕೇಂದ್ರದ ನೀತಿಯನ್ನು ಎದುರು ನೋಡುತ್ತಿದ್ದೇವೆ. ಅದು ಜಾರಿಗೆ ಬರುವವರೆಗೂ ರಾಜ್ಯದ ಮಟ್ಟಿಗೆ ಹೊಸ ನೀತಿ ತರುವ ಚಿಂತನೆ ನಡೆದಿದೆ.
● ಬಿ. ಬಸವರಾಜು, ಪ್ರಧಾನ ಕಾರ್ಯದರ್ಶಿ, ಸಾರಿಗೆ ಇಲಾಖೆ

ಟಾಪ್ ನ್ಯೂಸ್

1-busss

ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-busss

ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-busss

ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.