ಗಾಂಜಾ ಬೆಳೆ ಪತ್ತೆಗೆ ಇನ್ಮುಂದೆ ಡ್ರೋಣ್‌ ಕಣ್ಣು! 


Team Udayavani, Aug 1, 2018, 6:00 AM IST

25.jpg

ಶಿವಮೊಗ್ಗ: ಮಳೆಗಾಲದಲ್ಲಿ ಕದ್ದುಮುಚ್ಚಿ ಬಿತ್ತಲಾಗುವ ಗಾಂಜಾವನ್ನು ನಿರ್ನಾಮ ಮಾಡುವ ಉದ್ದೇಶದಿಂದ ಜಿಲ್ಲಾ ಅಬಕಾರಿ ಇಲಾಖೆ ಆಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದು, ಮೊದಲ ಬಾರಿ ಡ್ರೋಣ್‌ ಮೂಲಕ ಕಾರ್ಯಾಚರಣೆ ನಡೆಸಲು ಸಜ್ಜಾಗಿದೆ. ಜಿಲ್ಲೆಯಲ್ಲಿ ಪ್ರತಿ ವರ್ಷ ಗಾಂಜಾ ಬೆಳೆಯುವುದು ಹೆಚ್ಚುತ್ತಲೇ ಇದ್ದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿತ್ತು. ದಟ್ಟ ಅರಣ್ಯ, ನಿರ್ಜನ ಜಮೀನು ಹಾಗೂ ಇತರ ಬೆಳೆಯೊಂದಿಗೆ ಗಾಂಜಾ ಹೆಚ್ಚಾಗಿ ಬೆಳೆಯುವುದರಿಂದ ಪತ್ತೆ ಕಾರ್ಯಕ್ಕೆ ತೊಡಕಾಗುತಿತ್ತು. ಅಲ್ಲದೆ ಗಾಂಜಾ ಬೆಳೆದ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆ ಕಾರ್ಯಾಚರಣೆ ಕೈಗೊಂಡು ಗಿಡ ಕಟಾವು ಮಾಡಲಾಗುತ್ತಿತ್ತು. ಇದೂ ಕೂಡ ದೊಡ್ಡ ಸವಾಲಾಗಿತ್ತು. ಹಳ್ಳಿಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದರೂ ಕೂಡ ಪೂರ್ಣ
ಪ್ರಮಾಣದಲ್ಲಿ ಯಶಸ್ಸು ಸಿಕ್ಕಿರಲಿಲ್ಲ. ಹೀಗಾಗಿ ತಂತ್ರಜ್ಞಾನ ಬಳಸಿಕೊಂಡು ಗಾಂಜಾವನ್ನು ಚಿಗುರಿನಲ್ಲೇ ಚಿವುಟಿ ಹಾಕಲು ಅಬಕಾರಿ ಇಲಾಖೆ ಈ ಹೊಸ ಯೋಜನೆ ರೂಪಿಸಿದೆ.

2017ರಲ್ಲಿ ಗಾಂಜಾ ಬೆಳೆಯ 16 ಪ್ರಕರಣಗಳು ಪತ್ತೆಯಾಗಿದ್ದವು. ಅಲ್ಲದೇ ಪ್ರತಿ ವರ್ಷ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಶಿವಮೊಗ್ಗವನ್ನು ಗಾಂಜಾ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪಣತೊಟ್ಟ ಇಲಾಖೆ ಆ.1ರ ಬೆಳಗ್ಗೆ ಮೊದಲ ಹಂತದಲ್ಲಿ ಡ್ರೋಣ್‌ ಕ್ಯಾಮರಾ ಮೂಲಕ ಕಾರ್ಯಾಚರಣೆ ನಡೆಸಲಿದೆ. 

ಶಂಕಿತ ಪ್ರದೇಶಗಳಲ್ಲಿ ಸರ್ಚ್‌: ಆಗಸ್ಟ್‌ 1ರಿಂದ ಜಿಲ್ಲೆಯ ಹಲವೆಡೆ ಏಕಕಾಲಕ್ಕೆ ಕಾರ್ಯಾಚರಣೆಗೆ ಈಗಾಗಲೆ ಸಕಲ  ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಒಂದು ಡ್ರೋಣ್‌ ಬಳಸಿ, ಇದರ ಯಶಸ್ಸಿನ ಆಧಾರದ ಮೇಲೆ ಮತ್ತಷ್ಟು ಡ್ರೋಣ್‌ ಬಳಸಲು ಯೋಜನೆ ರೂಪಿಸಲಾಗಿದೆ.
ಇದಕ್ಕಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದ್ದು ಶಂಕಿತ ಪ್ರದೇಶಗಳಲ್ಲಿ ಡ್ರೋಣ್‌ ಹಾರಲಿದೆ. ಇದಕ್ಕೆ ಬೇಕಾದ ಕ್ಯಾಮರಾಗಳು, ಕಂಪ್ಯೂಟರ್‌, ತಂತ್ರಜ್ಞರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನೊಳಗೊಂಡ ನಾಲ್ಕು ತಂಡಗಳನ್ನು ರಚಿಸಲಾಗಿದೆ. 

ಜಿಲ್ಲೆಯಲ್ಲಿ ಕಳೆದ ಐದು ವರ್ಷದಲ್ಲಿ ಅಬಕಾರಿ ಮತ್ತು ಪೊಲೀಸ್‌ ಇಲಾಖೆಯಲ್ಲಿ ದಾಖಲಾದ ಗಾಂಜಾ ಪ್ರಕರಣಗಳ ಮಾಹಿತಿ ಕಲೆ ಹಾಕಿದ ಇಲಾಖೆ ಅಧಿಕಾರಿಗಳು ಆ ಎಲ್ಲ ಗ್ರಾಮಗಳಲ್ಲಿ ಮಳೆ ಗಾಲಕ್ಕೂ ಮುನ್ನವೇ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದ್ದರು. ಗಾಂಜಾದಿಂದ ಸಮಾಜದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ತಿಳಿವಳಿಕೆ ಮೂಡಿಸಿತ್ತು. ಅದರ ಮುಂದಿನ ಭಾಗವಾಗಿ ನೇರವಾಗಿ ಹೊಲಗಳಲ್ಲಿ ಗಾಂಜಾ ಬೆಳೆ ಪತ್ತೆ ಮಾಡಲು ನಿರ್ಧರಿಸಿದೆ. 

ನಾಲ್ಕು ತಾಲೂಕುಗಳಲ್ಲಿ ಹೆಚ್ಚು: ಜಿಲ್ಲೆಯ ಬಹುತೇಕ ಎಲ್ಲ ತಾಲೂಕುಗಳಲ್ಲಿ ಮೆಕ್ಕೆಜೋಳ ಮತ್ತು ಹತ್ತಿ ಹೊಲದಲ್ಲಿ ಭಾರೀ ಪ್ರಮಾಣದಲ್ಲಿ ಗಾಂಜಾ ಬೆಳೆಯ ಲಾಗುತ್ತದೆ. ಕಳೆದ ವರ್ಷ ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಗಾಂಜಾ ಬೆಳೆಯಲಾಗಿತ್ತು. ಹೀಗಾಗಿ ಈ ತಾಲೂಕುಗಳಲ್ಲೇ ಮೊದಲು ಕಾರ್ಯಾಚರಣೆ ನಡೆಯಲಿದೆ. ಆ.1ರಿಂದ ಶಂಕಿತ ಪ್ರದೇಶಗಳಲ್ಲಿ ಸರ್ವೇ ನಡೆಸಲಾಗುವುದು. ಪ್ರಥಮ ಬಾರಿಗೆ ಟೆಕ್ನಾಲಜಿ ಬಳಸಿಕೊಳ್ಳುತ್ತಿದ್ದೇವೆ. ಇದರಲ್ಲಿ ಯಶಸ್ಸು ಸಿಕ್ಕರೆ ದೊಡ್ಡ ಪ್ರಮಾಣದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗುವುದು. 
● ವೈ.ಆರ್‌. ಮೋಹನ್‌  ಉಪ ಆಯುಕ್ತ, ಅಬಕಾರಿ ಇಲಾಖೆ, ಶಿವಮೊಗ್ಗ

● ಶರತ್‌ ಭದ್ರಾವತಿ

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.