ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ
Team Udayavani, Aug 1, 2018, 12:08 PM IST
ಮಹಾನಗರ: ಪಾಲಿಕೆ ಕಂದಾಯ ಇಲಾಖೆ ವತಿಯಿಂದ ಸ್ಟೇಟ್ ಬ್ಯಾಂಕ್, ಲೇಡಿಗೋಷನ್, ಸರ್ವೀಸ್ ಬಸ್ ನಿಲ್ದಾಣ ಹಾಗೂ ಸೆಂಟ್ರಲ್ ಮಾರ್ಕೆಟ್ ಸಮೀಪದಲ್ಲಿ ಅನಧೀಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ಮಂಗಳವಾರ ನಡೆಯಿತು.
ಬೀದಿಬದಿ ವ್ಯಾಪಾರ ನಡೆಸುವವರನ್ನು ತೆರವು ಮಾಡುವಂತೆ ಮಂಗಳೂರು ಮಹಾನಗರ ಪಾಲಿಕೆ ಸಭೆಯಲ್ಲಿ ವ್ಯಾಪಕ ಆಗ್ರಹ ವ್ಯಕ್ತವಾಗಿತ್ತು. ಈ ಸಂಬಂಧ ಸ್ಟೇಟ್ಬ್ಯಾಂಕ್ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಲಾಯಿತು. ಪೊಲೀಸ್ ಭದ್ರತೆಯ ಜತೆಗೆ ಹಾಗೂ ಪಾಲಿಕೆ ಅಧಿಕಾರಿಗಳು ಮನಪಾ ಸಿಬಂದಿಗಳ ಜತೆಗೆ ತೆರವು ಮಾಡಿದರು.
ಕಂದಾಯ ಇಲಾಖೆ ಅಧಿಕಾರಿ ಪ್ರವೀಣ್ ಮಾತನಾಡಿ, ಈ ಹಿಂದೆಯೂ ವ್ಯಾಪಾರಸ್ಥರಿಗೆ ಮಾಹಿತಿ ನೀಡಲಾಗಿತ್ತು. ಮಹಾನಗರ ಪಾಲಿಕೆ ಆಯುಕ್ತರ ಸೂಚನೆಯಂತೆ ಮುಂದಿನ ಒಂದು ತಿಂಗಳ ಕಾಲ ಪಾಲಿಕೆ ವ್ಯಾಪ್ತಿಯಲ್ಲಿ ಅನಧೀಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಯಲಿದೆ ಎಂದರು. ಕಂದಾಯ ಇಲಾಖೆ ಅಧಿಕಾರಿಗಳಾದ ವಿಜಯ್ ಕುಮಾರ್ ಹಾಗೂ ಸಿಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.