46 ಕ್ವಿಂಟಲ್ ಅಕ್ರಮ ಅಕ್ಕಿ ವಶ
Team Udayavani, Aug 2, 2018, 12:31 PM IST
ಹೊನ್ನಾಳಿ: ತಾಲೂಕಿನ ದಿಡಗೂರು ಮುಖ್ಯರಸ್ತೆಯ ಗೋದಾಮು ಒಂದರಲ್ಲಿ ಅಕ್ರಮವಾಗಿ 92 ಚೀಲಗಳಲ್ಲಿ ಸಂಗ್ರಹಿಸಿದ್ದ 46 ಕ್ವಿಂಟಲ್ ಅಕ್ಕಿಯನ್ನು ತಹಶೀಲ್ದಾರ್ ಡಾ| ನಾಗವೇಣಿ, ಪಿಎಸ್ಐ ನಾಗಯ್ಯ ಕಾಡದೇವರಮಠ ಹಾಗೂ ಆಹಾರ ನಿರೀಕ್ಷಕ ಸಂಜಯ್ ಬಾಗವಾಡಿ ನೇತೃತ್ವದಲ್ಲಿ ಬುಧವಾರ ದಿಢೀರ್ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ನಾಗವೇಣಿ, ಗೋದಾಮು ಒಂದರಲ್ಲಿ ಅಕ್ರಮವಾಗಿ ಅಕ್ಕಿಯನ್ನು ಸಂಗ್ರಹಿಸಿದ್ದಾರೆ ಎಂಬ ಖಚಿತ ಮಾಹಿತಿ ಹಾಗೂ ಜಿಲ್ಲಾ ಧಿಕಾರಿಗಳು ಸಹ ಈ ಬಗ್ಗೆ ಮಾಹಿತಿ ನೀಡಿದ್ದರಿಂದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.
ಗೋದಾಮು ಮಾಲೀಕ ಜಗದೀಶ್ ಅವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ವಶಪಡಿಸಿಕೊಂಡ ಅಕ್ಕಿಯನ್ನು ಎಪಿಎಂಸಿ ಆವರಣದಲ್ಲಿರುವ ಕರ್ನಾಟಕ ಆಹಾರ ನಿಗಮಕ್ಕೆ ಸೇರಿದ ಗೋದಾಮಿನಲ್ಲಿ ಇರಿಸಲಾಗಿದೆ ಎಂದು ಹೇಳಿದರು.
ಕಾರ್ಯಾಚಾರಣೆಯಲ್ಲಿ ಅಧಿಕಾರಿಗಳಾದ ಶಿವಾಜಿ, ಮಂಜುನಾಥ್ ಇಂಗಳಗುಂದಿ, ಜಯರಾಂ ನಾಯ್ಕ, ಭರ್ಮಪ್ಪ ಹಾಗೂ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.