ಮಕ್ಕಳಿಗೆ ಎದೆಹಾಲುಣಿಸಿ ಆರೋಗ್ಯ ಕಾಪಾಡಿ
Team Udayavani, Aug 2, 2018, 12:51 PM IST
ಮೈಸೂರು: ಬಾಣಂತಿಯರು ಯಾವುದೇ ಮೌಡ್ಯಗಳ ಆಚರಣೆಯನ್ನು ನಿಲ್ಲಿಸಿ, ಮಕ್ಕಳಿಗೆ ಹಾಲುಣಿಸುವ ಮೂಲಕ ತಮ್ಮ ಹಾಗೂ ಮಗುವಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೆ.ರಾಧಾ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಇಂಡಿಯನ್ ಡಯಾಬಿಟಿಕ್ ಅಸೋಸಿಯೇಷನ್‌ನಿಂದ ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಹುತೇಕ ಬಾಣಂತಿಯರು ವಿವಿಧ ಕಾರಣಗಳಿಂದ ಮಗುವಿಗೆ ಹಾಲುಣಿಸುವುದನ್ನು ನಿಲ್ಲಿಸಲಿದ್ದು, ಇದು ಮಗುವಿನ ಬೆಳವಣಿಗೆ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದರು.
ಜಾಗೃತಿ ವಹಿಸಿ: ಈಗಾಗಲೇ ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲೆಡೆ ತಾಯಿ ಹಾಲುಣಿಸುವ ಕುರಿತು ಜಾಗೃತಿ ಮೂಡಿಸುವುದು ಕಡಿಮೆಯಾಗಿದೆ. ಹೀಗಾಗಿ ಬಾಣಂತಿಯರು ಯಾವುದೇ ಮೌಡ್ಯಕ್ಕೆ ಸಿಲುಕದೆ, ಮಕ್ಕಳಿಗೆ ಹಾಲುಣಿಸಬೇಕು. ಅಲ್ಲದೆ ಗರ್ಭಿಣಿಯರು ಹಾಗೂ ಬಾಣಂತಿಯರು ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ ವಹಿಸಬೇಕು ಎಂದು ತಿಳಿಸಿದರು.
ಪೌಷ್ಟಿಕ ಆಹಾರ ನೀಡಿ: ಗರ್ಭಿಣಿಯರು ಹಾಗೂ ಬಾಣಂತಿಯರಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಮಾತೃ ಪೂರ್ಣ ಹಾಗೂ ಮಾತೃ ವಂದನೆ ಯೋಜನೆಗಳು ಮಹತ್ವದಾಗಿವೆ.
ಮಾತೃ ಪೂರ್ಣ ಯೋಜನೆಯಲ್ಲಿ ಗರ್ಭಿಣಿಯರಿಗೆ ಅನುಕೂಲವಾಗುವ ರೀತಿಯಲ್ಲಿ ಗರ್ಭಾವಸ್ಥೆಯಲ್ಲಿರುವ ಮಕ್ಕಳಿಗೆ ಅಗತ್ಯವಿರುವ ಪೌಷ್ಟಿಕಾಂಶವುಳ್ಳ ಆಹಾರ ನೀಡಲಾಗುತ್ತಿದೆ.
ಇದರಿಂದ ಗರ್ಭದಲ್ಲೇ ಮಗುವಿನ ಉತ್ತಮ ಬೆಳವಣಿಗೆಗೆ ಸಾಧ್ಯವಾಗಲಿದೆ. ಅಲ್ಲದೆ ಆಶಾ ಕಾರ್ಯಕರ್ತೆಯರು ತಿಂಗಳೊಮ್ಮೆ ಗಂರ್ಭಿಣಿಯರ ತೂಕ ಅಳತೆ ಮಾಡಿ, ಅವರೊಂದಿಗೆ ಆಪ್ತ ಸಮಾಲೋಚನೆ ಮಾಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮುಕ್ತ ವಿವಿ ಸಹಾಯಕ ಪ್ರಾಧ್ಯಾಪಕಿ ಡಾ. ಸಿ.ಅನಿತಾ, ಡಾ.ಸುಷ್ಮಾ, ಆರೋಗ್ಯ ಮತ್ತು ಪೌಷ್ಟಿಕಾಂಶ ಸಲಹೆಗಾರ್ತಿ ನಂದಿನಿ ಮೂರ್ತಿ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.