ಪದವಿ ಕಾಲೇಜುಗಳಲ್ಲಿ ಯೋಗ ಕೋರ್ಸ್ ಕಡ್ಡಾಯ
Team Udayavani, Aug 3, 2018, 7:00 AM IST
ಬೆಂಗಳೂರು: ರಾಜ್ಯದ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣದಲ್ಲಿ ಪ್ರಸಕ್ತ ವರ್ಷದಿಂದ ಯೋಗ ಕೋರ್ಸ್, ತರಗತಿಗಳನ್ನು ಕಡ್ಡಾಯವಾಗಿ ಆರಂಭಿಸಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದರು.
ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಕುಲಸಚಿವರು ಹಾಗೂ ಹಣಕಾಸು ವಿಭಾಗದ ಅಧಿಕಾರಿಗಳೊಂದಿಗೆ ಬುಧವಾರ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್‌ಸಿಸಿ ಮಾದರಿಯಲ್ಲಿ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಕಾಲೇಜು ಹಾಗೂ ವಿಶ್ವವಿದ್ಯಾಲ¿ಗಳ ವ್ಯಾಪ್ತಿಯ ಪದವಿ, ಸ್ನಾತಕೋತ್ತರ ಕಾಲೇಜುಗಳಲ್ಲಿ ಯೋಗ ತರಗತಿ, ಕೋರ್ಸ್‌ಗಳನ್ನು ಆರಂಭಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಮಂಗಳೂರು ವಿವಿಯಲ್ಲಿ ಸಂಶೋಧನಾ ಅಭ್ಯರ್ಥಿಗಳ ಸಂಖ್ಯೆ 330ರಿಂದ 1,115ಕ್ಕೆ ಏರಿಕೆಯಾಗಿದೆ. ವಿವಿಯ ಸಂಶೋಧನಾ ಕೇಂದ್ರಗಳಲ್ಲಿ ಈವರೆಗಿನ ಸಂಶೋಧನಾ ಪ್ರಬಂಧಗಳ ದೊಡ್ಡ ಸಂಗ್ರಹವಿದೆ. ಅಭ್ಯರ್ಥಿಯೊಬ್ಬರು ಸಂಶೋಧನೆ ಉತ್ತೀರ್ಣರಾಗಲು ಸರ್ಕಾರ ಐದು ವರ್ಷದಲ್ಲಿ 15 ಲಕ್ಷ ರೂ. ವೆಚ್ಚ ಮಾಡುತ್ತದೆ. ಹಾಗೆಯೇ ವಿದ್ಯಾರ್ಥಿಯೊಬ್ಬ ಪದವಿ ಪಡೆಯಲು 4 ಲಕ್ಷ ರೂ. ವೆಚ್ಚ ಮಾಡುತ್ತದೆ. ಉಪನ್ಯಾಸಕರಿಂದ ಪ್ರಾಧ್ಯಾಪಕರಿಗೆ 60,000 ರೂ.ನಿಂದ 2 ಲಕ್ಷ ರೂ.ವರೆಗೆ ವೇತನ ನೀಡಲಾಗುತ್ತಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಸರ್ಕಾರ ಹಣ ವೆಚ್ಚ ಮಾಡುತ್ತಿದ್ದು, ಈ ಸಂಶೋಧನೆಗಳ ಫಲಿತಾಂಶಗಳ ಬಳಕೆ, ಕೌಶಲ್ಯಾಧಾರಿ ಶಿಕ್ಷಣ ಕಲ್ಪಿಸಲು ಅಗತ್ಯ ಮಾಹಿತಿ ಪಡೆಯಲು ಪ್ರಯತ್ನಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.