ಕಸ್ತೂರಿ ರಂಗನ್ ವರದಿ ವಿನಾಯಿತಿ;ಕಾರ್ಕಳ ಯುವಕನ ಮನವಿ:ಪಿಎಂ ಸ್ಪಂದನೆ!
Team Udayavani, Aug 3, 2018, 10:44 AM IST
ಕಾರ್ಕಳ : ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿರುವ ಕಾರ್ಕಳ ತಾಲೂಕಿನ 10 ಗ್ರಾಮಗಳನ್ನು ಕಸ್ತೂರಿ ರಂಗನ್ ವರದಿಯ ಸೂಕ್ಷ್ಮವಲಯ ಪಟ್ಟಿಯಿಂದ ಕೈ ಬಿಡುವಂತೆ ಕಾರ್ಕಳದ ಯುವಕ ಬರೆದ ಪತ್ರಕ್ಕೆ ಪ್ರಧಾನಿ ಕಚೇರಿಯಿಂದ ತುರ್ತು ಸ್ಪಂದನೆ ದೊರಕಿದೆ.
ಮಾಳದ ಅಕ್ಷತ್ ಕುಮಾರ್ ಅವರು ಮಾಳ,ಹೆಬ್ರಿ,ನಾಡ್ಪಾಲು,ಶಿರ್ಲಾಲು, ಕೆರ್ವಾಶೆ ಸೇರಿದಂತೆ ಮತ್ತು ಸುತ್ತಮುತ್ತಲಿನ 10 ಗ್ರಾಮಗಳನ್ನು ವರದಿಯಿಂದ ಕೈ ಬಿಡುವಂತೆ ಒತ್ತಾಯಿಸಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು. ಪತ್ರಕ್ಕೆ ಸ್ಪಂದಿಸಿರುವ ಪ್ರಧಾನಿ ಕಚೇರಿ ಜಿಲ್ಲಾಡಳಿತಕ್ಕೆ ಗ್ರಾಮಗಳ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಿದೆ.
ಜಿಲ್ಲಧಿಕಾರಿಗಳು ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ತಹಶೀಲ್ದಾರ್ ಅವರ ಸೂಚನೆ ಮೇರೆಗೆ ಗ್ರಾಮ ಲೆಕ್ಕಾಧಿಕಾರಿ ಪರಿಶೀಲನೆ ನಡೆಸಿ ವರದಿ ಸಿದ್ದಪಡಿಸುತ್ತಿದ್ದಾರೆ. 10 ಗ್ರಾಮಗಳನ್ನು ಕಸ್ತೂರಿ ರಂಗನ್ ವರದಿಯಿಂದ ಕೈಬಿಡುವ ವಿಶ್ವಾಸವಿದೆ ಎಂದು ಅಕ್ಷತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಸ್ತೂರಿ ರಂಗನ್ ವರದಿಯಲ್ಲಿ ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟಗಳ ತಪ್ಪಲಿನ 40 ಗ್ರಾಮಗಳು, ದಕ್ಷಿಣ ಕನ್ನಡ ಜಿಲ್ಲೆಯ 48 ಗ್ರಾಮಗಳನ್ನು ಸೇರ್ಪಡೆ ಮಾಡಲಾಗಿದ್ದು, ವರದಿ ಅನ್ವಯವಾದರೆ ಈ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿ , ಮೂಲಭೂತ ಸೌಕರ್ಯ ಮತ್ತು ಸಣ್ಣ ಕೈಗಾರಿಕೆಗಳು ಮುಂದುವರಿಯಲು ಅಡ್ಡಿಯಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.