ಒಂದೆರಡು ದಿನದಲ್ಲಿ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ ನಿರೀಕ್ಷೆ
Team Udayavani, Aug 3, 2018, 1:06 PM IST
ಮಹಾನಗರ : ಜಿಲ್ಲೆಯ ಬಂಟ್ವಾಳ ಪುರಸಭೆ ಹಾಗೂ ಪುತ್ತೂರು, ಉಳ್ಳಾಲ ನಗರಸಭೆಗೆ ಆ. 29ರಂದು ಚುನಾವಣೆ ನಡೆಯಲಿದ್ದು, ಮಹಾನಗರ ಪಾಲಿಕೆ ಚುನಾವಣೆ ಮುಂದಿನ ವರ್ಷದ ಮಾರ್ಚ್ ವೇಳೆಗೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಪಾಲಿಕೆಯ ವಾರ್ಡ್ ವಾರು ಮೀಸಲಾತಿ ಪ್ರಕಟವಾಗಿದ್ದು,ಇದಕ್ಕೆ ಆಕ್ಷೇಪಗಳು ದಾಖಲಾಗಿದ್ದು, ಒಂದೆರಡು ದಿನದಲ್ಲಿ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆಯಿದೆ.
ಈಗಾಗಲೇ ಬಿಡುಗಡೆಯಾದ ಕರಡು ಮೀಸಲಾತಿಗೆ ಸುಮಾರು 100ಕ್ಕೂ ಅಧಿಕ ಆಕ್ಷೇಪಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಲಾಗಿದೆ. ಇದನ್ನು ಪರಾಮರ್ಶಿಸಿ ನಗರಾಭಿವೃದ್ಧಿ ಇಲಾಖೆಯು ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಿದ್ದು, ಇದರಂತೆ ಈಗಾಗಲೇ ಮೀಸಲಾದ 5ರಿಂದ 6 ಸ್ಥಾನಗಳಲ್ಲಿ ಬದಲಾವಣೆಯಾಗುವ ಸಂಭವವಿದೆ.
ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡ ಬಳಿಕ ಆಕ್ಷೇಪವಿದ್ದಲ್ಲಿ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲು ಅವಕಾಶವಿದೆ. ಆಕ್ಷೇಪವಿಲ್ಲದಿದ್ದರೆ ಅಂತಿಮ ಮೀಸಲಾತಿ ಪಟ್ಟಿಯಂತೆ ಮುಂದಿನ ಪಾಲಿಕೆ ಚುನಾವಣೆ ನಡೆಯಲಿದೆ.
ಕ್ಷೇತ್ರ ಅದಲು ಬದಲು
ಈಗ ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಕಾಂಗ್ರೆಸ್ 35 ಸ್ಥಾನಗಳನ್ನು ಪಡೆದು ಕೊಂಡಿದ್ದು, ಈ ಪೈಕಿ ಶೇ. 60ರಷ್ಟು ಹಾಲಿ ಸದಸ್ಯರಿಗೆ ಹೊಸ ಕರಡು ಮೀಸಲಾತಿಯನ್ವಯ ಸ್ಪರ್ಧೆಯ ಅವಕಾಶ ಸಿಗಲಿದೆ. ಉಳಿದ ಶೇ.30ರಷ್ಟು ಸದಸ್ಯರ ಕ್ಷೇತ್ರವು ಹೊಸ ಮೀಸಲಾತಿಯಡಿ ಅದಲು ಬದಲಾಗಿದೆ. ಆದರೆ, ಬಿಜೆಪಿಯ ಹಾಲಿ 20 ಸದಸ್ಯರ ಪೈಕಿ ಹೊಸ ಮೀಸಲಾತಿಯನ್ವಯ ಕೇವಲ ಆರರಿಂದ ಏಳು ಸದಸ್ಯರಿಗೆ ಮಾತ್ರ ಅದೇ ಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶ ದೊರೆಯಲಿದೆ. ಈ ಮೂಲಕ ಬಿಜೆಪಿಯ ಹಾಲಿ ಸುಮಾರು 14ರಷ್ಟು ಸದಸ್ಯರು (ಉಳಿದ ಕ್ಷೇತ್ರ ಹೊರತುಪಡಿಸಿ)ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನೇ ಕಳೆದುಕೊಂಡಿದ್ದಾರೆ. 2013 ಮಾ. 7ರಂದು ಪಾಲಿಕೆ ಚುನಾವಣೆ ನಡೆದಿದ್ದು, ಮುಂದಿನ ಚುನಾವಣೆ 2019ರ ಮಾರ್ಚ್ ವೇಳೆಗೆ ನಡೆಯುವ ಸಾಧ್ಯತೆ ಇದೆ.
ರಾಜಕೀಯ ಲೆಕ್ಕಾಚಾರ ಆರಂಭ
ಮನಪಾದಲ್ಲಿ ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿದೆ. ಯಾರಿಗೆ ಸ್ಪರ್ಧಿಸುವ ಅವಕಾಶ ಇದೆ ಹಾಗೂ ಇಲ್ಲ ಎಂಬುದರ ಬಗ್ಗೆ ಮೊದಲ ಚರ್ಚೆ ಈಗ ಶುರುವಾಗಿದೆ. ಕೆಲವು ಕಾರ್ಪೊರೇಟರ್ ಗಳಂತು, ದೊಡ್ಡ ಹುದ್ದೆಯ ಮೇಲೆ ಕಣ್ಣಿಟ್ಟು ಪಾಲಿಕೆ ಸ್ಥಾನ ಬೇಡ ಎಂದು ಕೂಡ ಯೋಚನೆ ಮಾಡಲು ಆರಂಭಿಸಿದ್ದಾರೆ. ಜತೆಗೆ, ತಮ್ಮ ವಾರ್ಡ್‌ಗಳಲ್ಲಿ ಈ ಬಾರಿಯ ಮೀಸಲಾತಿಯಂತೆ ಯಾರು ಸ್ಪರ್ಧೆ ನಡೆಸಬಹುದು ಎಂಬ ಬಗ್ಗೆಯೂ ಮಾತುಕತೆ ಆರಂಭವಾಗಿದೆ. ವಿಶೇಷವೆಂದರೆ, ಈ ಬಾರಿ ಶೇ. 50ರಷ್ಟು ಮಹಿಳಾ ಮೀಸಲಾತಿ ಘೋಷಣೆಯಾದ ಕಾರಣದಿಂದ ಎಲ್ಲ ವಾರ್ಡ್‌ಗಳಲ್ಲೂ ಸ್ಪರ್ಧೆಯ ಉತ್ಸಾಹ ಮೂಡುವಂತಾಗಿದೆ.
ಒಟ್ಟು 60 ಸ್ಥಾನ
ಪ್ರಸ್ತುತ ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಕಾಂಗ್ರೆಸ್ 35 ಸ್ಥಾನಗಳನ್ನು ಪಡೆದು ಬಹುಮತ ಪಡೆದುಕೊಂಡಿದೆ. ಉಳಿದಂತೆ ಬಿಜೆಪಿ 20, ಜೆಡಿಎಸ್ 2, ಸಿಪಿಎಂ 1, ಪಕ್ಷೇತರ 1, ಎಸ್‌ಡಿಪಿಐ 1 ಸದಸ್ಯರನ್ನು ಹೊಂದಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 38 ಹಾಗೂ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ 22 ಪಾಲಿಕೆಯ ವಾರ್ಡ್‌ಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.