ಡಿಪ್ಲೊಮಾ ಪರೀಕ್ಷಾ ಅಕ್ರಮ: 592 ವಿದ್ಯಾರ್ಥಿಗಳ ಶಿಕ್ಷೆ ಪ್ರಕಟ


Team Udayavani, Aug 4, 2018, 6:25 AM IST

student-examination.jpg

ಬೆಂಗಳೂರು : ಡಿಪ್ಲೊಮಾ ಸೆಮಿಸ್ಟರ್‌ ಪರೀಕ್ಷೆಯೊಂದರಲ್ಲೇ  ಅಕ್ರಮ ಎಸಗಿದ 592 ವಿದ್ಯಾರ್ಥಿಗಳ ಫ‌ಲಿತಾಂಶ ರದ್ದು ಮತ್ತು ಡಿಬಾರ್‌ ಶಿಕ್ಷೆ ವಿಧಿಸಲಾಗಿದೆ. ಸಾಮೂಹಿಕ ನಕಲು ಮತ್ತಿತರ ಗಂಭೀರ ಪರೀಕ್ಷಾ ಅವ್ಯವಹಾರ ನಡೆಸಿದ ವಿದ್ಯಾರ್ಥಿಗಳು 2021ರ ಅಂತ್ಯದವರೆಗೆ ಯಾವುದೇ ಪರೀಕ್ಷೆ ಬರೆಯುವಂತಿಲ್ಲ!

ತಾಂತ್ರಿಕ ಶಿಕ್ಷಣ ಇಲಾಖೆ ರಾಜ್ಯದ ಪಾಲಿಟೆಕ್ನಿಕ್‌ ಕಾಲೇಜುಗಳ ವಿವಿಧ ಡಿಪ್ಲೊಮಾ ಕೋರ್ಸ್‌ಗೆ 2018ರ ಮೇ, ಜೂನ್‌ನಲ್ಲಿ ನಡೆದ ಸೆಮಿಸ್ಟರ್‌ ಪರೀಕ್ಷೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಹಾಜರಾಗಿದ್ದರು. ಇಲಾಖೆಯ ಪರೀಕ್ಷಾ ನಿಯಮಕ್ಕೆ ವಿರುದ್ಧವಾಗಿ ಪರೀಕ್ಷಾ ಕೇಂದ್ರದ ಒಳಗೆ ನಕಲು, ಅಕ್ರಮ ಚಟುವಟಿಕೆ  ಸೇರಿ ನಾನಾ ರೀತಿಯ ಪರೀಕ್ಷಾÒ ಅವ್ಯವಹಾರ ನಡೆಸಿದ 592 ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಲಾಗಿತ್ತು.

ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹೀಗೆ ಎಲ್ಲ ಪರೀಕ್ಷೆಗಳಲ್ಲೂ ಕೆಲವು ವಿದ್ಯಾರ್ಥಿಗಳು ನಕಲು ಇತ್ಯಾದಿ ಮಾಡುತ್ತಾರೆ, ಪರೀಕ್ಷಾ ಮೇಲ್ವಿಚಾರಕರ ಬಳಿ ಸಿಕ್ಕಿಹಾಕಿಕೊಳ್ಳುತ್ತಾರೆ. ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ತಕ್ಷಣವೇ ಡಿಬಾರ್‌ ಮಾಡಲಾಗುತ್ತದೆ. ಆದರೆ, ತಾಂತ್ರಿಕ ಶಿಕ್ಷಣ ಇಲಾಖೆ, ವಿದ್ಯಾರ್ಥಿಗಳು ಮಾಡಿರುವ ಕೃತ್ಯದ ಆಧಾರದಲ್ಲಿ ವಿವಿಧ ಕ್ರಮ ತೆಗೆದುಕೊಳ್ಳುತ್ತದೆ.

ವಿಚಾರಣಾ ಸಮಿತಿ :ತಾಂತ್ರಿಕ ಶಿಕ್ಷಣ ಇಲಾಖೆಯು ಡಿಪ್ಲೊಮಾ ಕೋರ್ಸ್‌ಗಳ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ವಿದ್ಯಾರ್ಥಿಗಳ ವಿಚಾರಣೆಗಾಗಿ ತಜ್ಞರ ನೇತೃತ್ವದಲ್ಲಿ ಮಾಲ್‌ಪ್ರಾಕ್ಟೀಸ್‌ ವಿಚಾರ ಸಮಿತಿ ರಚನೆ ಮಾಡಿದೆ. ಆ ಸಮಿತಿಯು ಜುಲೈ 11ರಿಂದ 17ರ ತನಕ ಎಲ್ಲ ವಿದ್ಯಾರ್ಥಿಗಳನ್ನು ಕೂಲಂಕಷವಾಗಿ ವಿಚಾರಣೆ ನಡೆಸಿದೆ.
ವಿದ್ಯಾರ್ಥಿಗಳ ಹೇಳಿಕೆ ಮತ್ತು ಅವರು ಒದಗಿಸಿದ್ದ ದಾಖಲೆ ಆಧಾರದಲ್ಲಿ ಸಮಿತಿ 5 ವಿಧದ ತೀರ್ಪು ನೀಡಿದೆ. ಸಮಿತಿ ನೀಡಿರುವ ತೀರ್ಪನ್ನು ಕಡ್ಡಾಯವಾಗಿ ಜಾರಿಗೆ ತರುವಂತೆ ಎಲ್ಲ ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರಿಗೂ ಇಲಾಖೆ ನಿರ್ದೇಶಿಸಿದೆ.

592 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ವಿಚಾರಣೆ ವೇಳೆ ನೀಡಿದ ಹೇಳಿಕೆ ಮತ್ತು ದಾಖಲೆ ಆಧಾರದಲ್ಲಿ ದೋಷಮುಕ್ತಗೊಳಿಸಲಾಗಿದೆ. 35 ವಿದ್ಯಾರ್ಥಿಗಳ ಪರೀಕ್ಷೆಯ ಫ‌ಲಿತಾಂಶ ಪ್ರಕಟಿಸಲಾಗುತ್ತದೆ.

276 ವಿದ್ಯಾರ್ಥಿಗಳ ವಿರುದ್ಧ ಪರ್‌ಫಾರ್ಮೆನ್ಸ್‌ ಆಫ್ ಸಬೆjಕ್ಟ್ ಕ್ಯಾನ್ಸಲ್ಡ್‌(ಪಿಎಸ್‌ಸಿ) ತೀರ್ಪು ನೀಡಲಾಗಿದ್ದು, ಈ ವಿದ್ಯಾರ್ಥಿಗಳ ಪರೀಕ್ಷಾ ಅಕ್ರಮದ ಪಠ್ಯ ವಿಷಯ ಫ‌ಲಿತಾಂಶ ರದ್ದುಗೊಳಿಸಿದೆ.  ಉಳಿದ ವಿಷಯದ ಫ‌ಲಿತಾಂಶ ನೀಡಲಾಗುತ್ತದೆ. 243 ವಿದ್ಯಾರ್ಥಿಗಳ ವಿರುದ್ಧ ಪರ್‌ಫಾರ್ಮೆನ್ಸ್‌ ಆಫ್ ಎಕ್ಸಾಮಿನೇಷನ್‌ ಕ್ಯಾನ್ಸಲ್ಡ್‌(ಪಿಇಸಿ) ಆದೇಶ ನೀಡಲಾಗಿದ್ದು, ಈ ವಿದ್ಯಾರ್ಥಿಗಳ ಎಲ್ಲ ವಿಷಯದ ಫ‌ಲಿತಾಂಶ ರದ್ದುಗೊಳಿಸಿದೆ ಮತ್ತು 2018ರ ನವೆಂಬರ್‌ನಲ್ಲಿ ಪರೀಕ್ಷೆಗೆ ಹಾಜರಾಗಬಹುದು (ಬೇರೆ ಸೆಮಿಸ್ಟರ್‌ ಪರೀಕ್ಷೆಗೆ ಹಾಜರಾಗಿದ್ದರೆ ಅದರ ಫ‌ಲಿತಾಂಶ ಪ್ರಕಟಿಸಲಾಗುತ್ತದೆ) ಎಂದು ಸಮಿತಿ ತೀರ್ಪು ನೀಡಿದೆ.

ಪರ್‌ಫಾರ್ಮೆನ್ಸ್‌ ಆಫ್ ಎಕ್ಸಾಮಿನೇಷನ್‌ ಕ್ಯಾನ್ಸಲ್ಡ್‌+1 (ಪಿಇಸಿ+1) ಎಂದು 4 ವಿದ್ಯಾರ್ಥಿಗಳ ವಿರುದ್ದ ಆದೇಶ ಬಂದಿದ್ದು, ಇವ ರು 2019ರವರೆಗೂ ಪರೀಕ್ಷೆಗೆ ಕುಳಿತುಕೊಳ್ಳುವಂತಿಲ್ಲ. ಪಿಇಸಿ+2 ಎಂದು ಇಬ್ಬರು ವಿದ್ಯಾರ್ಥಿಗಳನ್ನು ಶಿಕ್ಷಿಸಲಾಗಿದ್ದು, ಇವರು 2019ರ ನವೆಂಬರ್‌ವರೆಗೂ ಪರೀಕ್ಷೆ ಬರೆಯುವಂತಿಲ್ಲ. ಪರ್‌ಫಾರ್ಮೆನ್ಸ್‌ ಆಫ್ ಎಕ್ಸಾಮಿನೇಷನ್‌ ಕ್ಯಾನ್ಸಲ್‌+7(ಪಿಇಸಿ+7) ಶಿಕ್ಷೆಗೆ ಗುರಿಯಾಗಿರುವ 19 ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಈ ವಿದ್ಯಾರ್ಥಿಗಳು 2021ರ ನವೆಂಬರ್‌ವರೆಗೂ ಡಿಬಾರ್‌ ಆಗಿದ್ದಾರೆ ಮತ್ತು ಅಲ್ಲಿಯವರೆಗೂ ಪರೀಕ್ಷೆ ಬರೆಯುವಂತಿಲ್ಲ ಎಂದು ಖಡಕ್‌ ಆದೇಶ ನೀಡಿದೆ.

ದೋಷಮುಕ್ತ-35
ವಿಷಯದ ರದ್ದು-276
ಪರೀಕ್ಷೆ ರದ್ದು-243
2019ರ ಮೇ ಅಥವಾ ನವೆಂಬರ್‌ ವರೆಗೂ ಡಿಬಾರ್‌-6
2021ರ ನವೆಂಬರ್‌ ವರೆಗೂ ಡಿಬಾರ್‌ -19

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.