ಸ್ವಚ್ಛ ಭಾರತ ಅಭಿಯಾನದಿಂದ ವರ್ಷಕ್ಕೆ 3 ಲಕ್ಷ ಜೀವ ರಕ್ಷಣೆ: WHO ವರದಿ
Team Udayavani, Aug 4, 2018, 11:39 AM IST
ವಾಷಿಂಗ್ಟನ್ : ಸ್ವಚ್ಛ ಭಾರತ ಅಭಿಯಾನದಿಂದ ವರ್ಷಕ್ಕೆ ಮೂರು ಲಕ್ಷ ಅಮೂಲ್ಯ ಜೀವಗಳನ್ನು ಉಳಿಸಲು ಸಾಧ್ಯ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯು ಎಚ್ಓ) ಹೇಳಿದೆಯಲ್ಲದೆ ಆರೋಗ್ಯಕರ ಭಾರತದೆಡೆಗೆ ಸಾಗುವ ಈ ಯೋಜನೆಯನ್ನು ಬಹುವಾಗಿ ಮೆಚ್ಚಿಕೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು 2014ರ ಅಕ್ಟೋಬರ್ 2ರಂದು ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು. 2019ರೊಳಗೆ ಇಡಿಯ ದೇಶವನ್ನು ಬಯಲು ಶೌಚ ಮುಕ್ತವಾಗಿರಿಸುವ ಗುರಿಯನ್ನು ಈ ಮಹತ್ವಾಕಾಂಕ್ಷಿ ಯೋಜನೆಯು ಹೊಂದಿದೆ.
2019ರ ಗುರಿಯ ಪ್ರಕಾರ ಭಾರತವು ಬಯಲು ಶೌಚ ಮುಕ್ತವಾದರೆ ಜನರು ಡಯೋರಿಯಾ ಮುಂತಾದ ಕಾಯಿಲೆಗಳಿಗೆ ಗುರಿಯಾಗುವುದನ್ನು ತಪ್ಪಿಸಬಹುದಾಗಿದೆ. ಮಾತ್ರವಲ್ಲದೆ ವರ್ಷಕ್ಕೆ ಮೂರು ಲಕ್ಷ ಜನರು ಸಾಯುವುದನ್ನು ತಪ್ಪಿಸಬಹುದಾಗಿದೆ.ಜತೆಗೆ 1.40 ಕೋಟಿ ಜನರು ಆರೋಗ್ಯಕರ ಜೀವನ ನಡೆಸುವುದು ಸಾಧ್ಯವಾಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ.
ಸ್ವಚ್ಛ ಭಾರತ ಗ್ರಾಮೀಣ ಅಭಿಯಾನದಿಂದ ಹಳ್ಳಿಗರ ಆರೋಗ್ಯ ಸುಧಾರಿಸುವುದಲ್ಲದೆ ಅವರು ದೀರ್ಘಾಯುಗಳಾಗಲು ಸಾಧ್ಯ ಎಂದೂ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.