ಫ್ಲೆಕ್ಸ್‌ ಮುದ್ರಣ ಮಳಿಗೆಗಳಿಗೆ ಬೀಗ


Team Udayavani, Aug 4, 2018, 12:06 PM IST

flex.jpg

ಬೆಂಗಳೂರು: ಹೈಕೋರ್ಟ್‌ ಸೂಚನೆ ಮೇರೆಗೆ ನಗರದಲ್ಲಿ ಫ್ಲೆಕ್ಸ್‌, ಬ್ಯಾನರ್‌ ತೆರವು ಕಾರ್ಯಾಚರಣೆ ನಡೆಯುತ್ತಿರುವ ಬಿಬಿಎಂಪಿ, ಫ್ಲೆಕ್ಸ್‌ಗಳ ತೆರವು ಕಾರ್ಯದ ಜತೆಗೆ ಶುಕ್ರವಾರ ನಗರದ ಹಲವು ಫ್ಲೆಕ್ಸ್‌, ಬ್ಯಾನರ್‌ ಮುದ್ರಣ ಮಳಿಗೆಗಳ ಮೇಲೆ ದಾಳಿ ನಡೆಸಿ ಮಳಿಗೆಗಳಿಗೆ ಬೀಗ ಜಡಿದಿದೆ. 

ಮೂರು ದಿನಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಫ್ಲೆಕ್ಸ್‌, ಬ್ಯಾನರ್‌ ತೆರವು ಕಾರ್ಯಾಚರಣೆ ನಡೆಸುತ್ತಿರುವ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ, ಸುಮಾರು 20 ಸಾವಿರಕ್ಕೂ ಹೆಚ್ಚು ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಿದ್ದಾರೆ. ಈ ನಡುವೆಯೇ ಫ್ಲೆಕ್ಸ್‌, ಬ್ಯಾನರ್‌ ಮುದ್ರಿಸುವ ಮಳಿಗೆಗಳ ಮೇಲೂ ಶುಕ್ರವಾರ ದಾಳಿ ನಡೆಸಿದ ಅಧಿಕಾರಿಗಳು, ಮಳಿಗೆಗಳಿಗೆ ಬೀಗಮುದ್ರೆ ಹಾಕಿ ನೋಟಿಸ್‌ ಜಾರಿಗೊಳಿಸಿದ್ದಾರೆ.

ಪಾಲಿಕೆ ಆರೋಗ್ಯಾಧಿಕಾರಿ ಡಾ.ಸುರೇಶ್‌ ನೇತೃತ್ವದಲ್ಲಿ ಗಾಂಧಿನಗರ ಹಾಗೂ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, 8ಕ್ಕೂ ಹೆಚ್ಚು ಫ್ಲೆಕ್ಸ್‌ ಮುದ್ರಣ ಮಳಿಗೆಗಳ ಮೇಲೆ ದಾಳಿ ನಡೆಸಿ ಮಾಲೀಕರಿಗೆ ದಂಡ ವಿಧಿಸಿದ್ದು, ಮಳಿಗೆಗಳಲ್ಲಿ ಶೇಖರಿಸಲಾಗಿದ್ದ ಫ್ಲೆಕ್ಸ್‌ ಮುದ್ರಣ ಉತ್ಪನ್ನಗಳನ್ನು ವಶಕ್ಕೆ ಪಡೆದಿದ್ದಾರೆ. ಎಂಟು ವಲಯಗಳಿಂದ 36 ಮಳಿಗೆಗಳಿಗೆ ಬೀಗ ಹಾಕಲಾಗಿದೆ.

ಚಾಮರಾಜಪೇಟೆಯಲ್ಲಿನ ಆರ್‌.ಕೆ.ಪ್ರಿಂಟರ್ ಹಾಗೂ ಲಾರ್ಡ್‌ ಡಿಜಿಟಲ್ಸ್‌ ಮಳಿಗೆಗಳಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ. ಜತೆಗೆ ಬಿನ್ನಿಪೇಟೆ ವಾರ್ಡ್‌ನ ಓಂಕಾರ್‌ ಎಂಟರ್‌ ಪ್ರೈಸಸ್‌ ಮೇಲೆ ದಾಳಿ ನಡೆಸಿ 600 ಕೆ.ಜಿ. ಫ್ಲೆಕ್ಸ್‌ಗಳನ್ನು ಜಪ್ತಿ ಮಾಡಿದ್ದು, ಮಾಲೀಕರಿಗೆ 30 ಸಾವಿರ ರೂ. ದಂಡ ವಿಧಿಸಿದ್ದಾರೆ. ಜತೆಗೆ ಮುಂದಿನ ದಿನಗಳಲ್ಲಿ ಫ್ಲೆಕ್ಸ್‌ ಮುದ್ರಣ ಮಾಡದಂತೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಹಲ್ಲೆ ನಡೆಸಿದ ನಾಲ್ವರ ಬಂಧನ: ಮಹದೇವಪುರ ವಲಯದಲ್ಲಿ ಗುರುವಾರ ಫ್ಲೆಕ್ಸ್‌, ಬ್ಯಾನರ್‌ ತೆರವು ಕಾರ್ಯಾಚರಣೆ ವೇಳೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ನಾಲ್ವರನ್ನು ಬಂಧಿಸಿ, ಅವರ ವಿರುದ್ಧ ಎಫ್ಐಆರ್‌ ದಾಖಲಿಸಿದ್ದಾರೆ.

ಗುರುವಾರ ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ಹಾಕಲಾಗಿದ್ದ ಅನಧಿಕೃತ ಬ್ಯಾನರ್‌ಗಳನ್ನು ತೆರವುಗೊಳಿಸುವ ವೇಳೆ ಪಾಲಿಕೆಯ ಎಚ್‌ಎಎಲ್‌ ವಿಭಾಗದ ಸಹಾಯಕ ಕಂದಾಯ ಅಧಿಕಾರಿ ಭಟ್ಟಚಾರ್‌ ಮೇಲೆ ಹಲ್ಲೆ ನಡೆಸಿದ ರಾಜೇಂದ್ರನ್‌, ಸೈಮರ್, ಕಮಲನಾಥ್‌ ಹಾಗೂ ಸೂರ್ಯ ಎಂಬ ಆರೋಪಿಗಳನ್ನು ಬಂಧಿಸಲಾಗಿದ್ದು, ಸಂತೋಷ್‌ ಹಾಗೂ ಸರವಣ ತಲೆಮರೆಸಿಕೊಂಡಿದ್ದಾರೆ. 

ಅಧಿಕಾರಿಗಳಿಗೆ ಧೈರ್ಯ ತುಂಬಿದ ಮೇಯರ್‌: ಗುರುವಾರ ಪೈ ಬಡಾವಣೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಫ್ಲೆಕ್ಸ್‌ ತೆರವುಗೊಳಿಸುವ ವೇಳೆ ರಾಜಕೀಯ ಮುಖಂಡರ ಬೆಂಬಲಿಗರಿಂದ ಹಲ್ಲೆಗೆ ಒಳಗಾದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಭೇಟಿ ಮಾಡಿದ ಮೇಯರ್‌ ಆರ್‌.ಸಂಪತ್‌ರಾಜ್‌, ಅವರಲ್ಲಿ ಧೈರ್ಯ ತುಂಬಿ ನಿಮ್ಮ ಜತೆ ನಾವಿದ್ದೇವೆ.

ಯಾವುದಕ್ಕೂ ಹೆದರವ ಅಗತ್ಯವಿಲ್ಲ. ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹೈಕೋರ್ಟ್‌ ಸೂಚನೆ ನಂತರವೂ ವಾರ್ತೂರು ವಾರ್ಡ್‌ನಲ್ಲಿ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿಲ್ಲ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ವರ್ತೂರು ವಾರ್ಡ್‌ಗೆ ಭೇಟಿ ನೀಡಿದ ಮೇಯರ್‌, ಫ್ಲೆಕ್ಸ್‌ ತೆರವುಗೊಳಿಸಲು ಮುಂದಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ವಾರ್ಡ್‌ನಲ್ಲಿ ಹಾಕಲವಾಗಿರುವ ಎಲ್ಲ ಫ್ಲೆಕ್ಸ್‌, ಬ್ಯಾನರ್‌ ಹಾಗೂ ಬಂಟಿಂಗ್ಸ್‌ ಕೂಡಲೇ ತೆರವುಗೊಳಿಸಬೇಕು. ನಂತರವೂ ಫ್ಲೆಕ್ಸ್‌ ಅಳವಡಿಸುವವರ ವಿರುದ್ಧ ದೂರು ದಾಖಲಿಸಿ ವಾಟ್ಸ್‌ಆ್ಯಪ್‌ ಮೂಲಕ ದೂರು ಪ್ರತಿಯನ್ನು ತಮಗೆ ಕಳುಹಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಫ್ಲೆಕ್ಸ್‌ ಮುದ್ರಣ ಮಳಿಗೆಗಳ ವಿರುದ್ಧ ಕೈಗೊಂಡ ಕ್ರಮಗಳ ವಿವರ
ವಲಯ  ವಶಕ್ಕೆ ಪಡೆದ ಫ್ಲೆಕ್ಸ್‌(ಕೆ.ಜಿ)  ಮಳಿಗೆಗೆ ಬೀಗ  ನೋಟಿಸ್‌ ಪಡೆದ ಮಳಿಗೆಗಳು    ದಂಡ
-ಪಶ್ಚಿಮ    780    6        6    35,000
-ಪೂರ್ವ    8,500        11    0    50,000
-ದಕ್ಷಿಣ    80    2    2    0
-ಬೊಮ್ಮನಹಳ್ಳಿ    5,000        6    2    0
-ದಾಸರಹಳ್ಳಿ    2,200        0    0    0
-ಆರ್‌ಆರ್‌ನಗರ    0        5    0    0
-ಯಲಹಂಕ    2,000        0    0    0
-ಮಹದೇವಪುರ    260        6    0    7,000
-ಒಟ್ಟು    18,820        36    10    92,000

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.