ಪ್ಲೀಸ್ ಸೇವ್ ಬಂಡೀಪುರ ಟೈಗರ್ ಆನ್‌ಲೈನ್ ಅಭಿಯಾನ
Team Udayavani, Aug 4, 2018, 12:29 PM IST
ಮೈಸೂರು: ಬಂಡೀಪುರ ಅಭಯಾರಣ್ಯದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅವಕಾಶ ನೀಡಬಾರದೆಂದು ವನ್ಯಜೀವಿ ಸಂರಕ್ಷಣಾ ಹೋರಾಟಗಾರರು ಸದ್ದಿಲ್ಲದೆ ಆನ್‌ಲೈನ್ ಅಭಿಯಾನವನ್ನು ಆರಂಭಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಣಾ ಪ್ರದೇಶದಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ಪುನರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರದ ಮೂಲಕ ಕೇರಳ ರಾಜ್ಯ ಲಾಭಿ ಆರಂಭಿಸಿದೆ.
ಈ ವಿಷಯ ತಿಳಿಯುತ್ತಿದ್ದಂತೆ ವನ್ಯಜೀವಿ ಸಂರಕ್ಷಣಾ ಹೋರಾಟಗಾರರು, ಸಾಮಾಜಿಕ ಜಾಲತಾಣಗಳ ಮೂಲಕ ಅಭಿಯಾನ ಆರಂಭಿಸಿ, ಕೇರಳ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಇದಕ್ಕೆ ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಅಭಿಯಾನದ ಮೂಲಕ ಒತ್ತಾಯಿಸಲಾಗುತ್ತಿದೆ. “ಪ್ಲೀಸ್ ಸೇವ್ ಬಂಡೀಪುರ ಟೈಗರ್’ ಶೀರ್ಷಿಕೆಯಲ್ಲಿ ಕೃಷ್ಣ ನವೀನ್ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಅಭಿಯಾನ ಹೇಗೆ: “ಪ್ಲೀಸ್ ಸೇವ್ ಬಂಡೀಪುರ ಟೈಗರ್’ ಹೆಸರಿನಲ್ಲಿ ಆರಂಭಿಸಿರುವ ಅಭಿಯಾನದಲ್ಲಿ ಬಂಡೀಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಹೊತ್ತಿನಲ್ಲಿ ವಾಹನ ಸಂಚಾರ ನಿಷೇಧಿಸಿರುವ ಕುರಿತು ಸಂಪೂರ್ಣ ಮಾಹಿತಿ ನೀಡಲಾಗಿದೆ.
ಈಗಾಗಲೇ ವಾಟ್ಸಪ್, ಫೇಸ್‌ಬುಕ್, ಟ್ವಿಟರ್ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಅಭಿಯಾನದ ಮನವಿಗೆ ಈವರೆಗೆ 24 ಸಾವಿರಕ್ಕೂ ಹೆಚ್ಚು ಮಂದಿ ಸಹಿ ಹಾಕುವ ಮೂಲಕ ಸಾಥ್ ನೀಡಿದ್ದಾರೆ. ಜತೆಗೆ ಈ ಸಂದೇಶವನ್ನು ತಮ್ಮ ಸ್ನೇಹಿತರು, ಕುಟುಂಬ ಸದಸ್ಯರು ಹೀಗೆ ಒಬ್ಬರಿಂದ ಒಬ್ಬರಿಗೆ ರವಾನಿಸಿ ಅಭಿಯಾನಕ್ಕೆ ಕೈಜೋಡಿಸುವಂತೆ ಕೋರಲಾಗಿದೆ.
ಮನವಿಯಲ್ಲಿ ಏನಿದೆ: ಬಂಡೀಪುರ ಅಭಯಾರಣ್ಯ ಹುಲಿ ಸಂರಕ್ಷಣಾ ಪ್ರದೇಶವಾಗಿದ್ದು, ದೇಶದ ಅತಿ ದೊಡ್ಡ ಅರಣ್ಯಪ್ರದೇಶಗಳಲ್ಲಿ ಒಂದಾಗಿದೆ. ಹೀಗಾಗಿ ರಾಷ್ಟ್ರೀಯ ಉದ್ಯಾನವನದ ಮೂಲಕ ಹಾದು ಹೋಗಿರುವ ಎರಡು ರಾಷ್ಟ್ರೀಯ ಹೆದ್ದಾರಿಗಳಾದ (ಎನ್‌ಎಚ್-67 ಮತ್ತು ಎನ್‌ಎಚ್-212)ನಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸುವುದರಿಂದ ಅನೇಕ ಕಾಡು ಪ್ರಾಣಿಗಳ ಉಳಿವಿಗೆ ಕಾರಣವಾಗಿದೆ.
ಅಲ್ಲದೆ ಈ ಹಿಂದೆ ಹೈಕೋರ್ಟ್ ಆದೇಶದಂತೆ ಬಂಡೀಪುರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಹೀಗಿದ್ದರೂ ತುರ್ತು ವಾಹನಗಳು ಹಾಗೂ 16 ಸಾರಿಗೆ ಬಸ್‌ಗಳು ರಾತ್ರಿ ಹೊತ್ತಿನಲ್ಲಿ ಇದೇ ಮಾರ್ಗವಾಗಿ ಸಂಚರಿಸಲು ಅನುಮತಿ ನೀಡಲಾಗಿದೆ.
ಅಲ್ಲದೆ ಇಲ್ಲಿನ ಹೆದ್ದಾರಿಗಳಲ್ಲಿ ರಾತ್ರಿ ವಾಹನ ಸಂಚಾರದಿಂದ ವನ್ಯಜೀವಿಗಳ ಸಾವಿನ ಬಗ್ಗೆ ಸಾಕಷ್ಟು ದಾಖಲೆಗಳು ಮತ್ತು ವೈಜ್ಞಾನಿಕ ಅಧ್ಯಯನಗಳು ಇವೆ. ಜತೆಗೆ ಬಂಡಿಪುರ – ನಾಗರಹೊಳೆ -ಮುದುಮಲೈನಲ್ಲಿ ನಡೆಸಿದ ವೈಜ್ಞಾನಿಕ ಅಧ್ಯಯನದಿಂದ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರದಿಂದ ವ್ಯತಿರಿಕ್ತ ಪರಿಣಾಮ ಉಂಟಾಗಲಿದೆ.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದ ಮೇರೆಗೆ ರೂಪುಗೊಂಡ ವಿಶೇಷ ಸಮಿತಿ, ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಿಷೇಧಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಎಲ್ಲಾ ಕಾರಣಗಳಿಂದ ಕರ್ನಾಟಕದ ಹಿಂದಿನ ನಾಲ್ಕು ಮುಖ್ಯಮಂತ್ರಿಗಳು ಬಂಡೀಪುರ ಹೆದ್ದಾರಿಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಬೇಕೆಂಬ ನಿಲುವು ತೆಗೆದುಕೊಂಡಿದ್ದರು. ಈಗಲೂ ಮುಖ್ಯಮಂತ್ರಿ ಕುಮಾರಸ್ವಾಮಿ ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಬೇಕೆಂದು ಮನವಿ ಮಾಡಲಾಗುತ್ತಿದೆ.
* ಸಿ.ದಿನೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.