ಕವಿ ಕಣವಿಗೆ ಕನ್ನಡ ರತ್ನ ಪ್ರಶಸ್ತಿ ಪ್ರದಾನ
Team Udayavani, Aug 4, 2018, 4:27 PM IST
ಧಾರವಾಡ: ಕನ್ನಡಿಗರು ದುಬೈ ಯುಎಇ ಸಂಘಟನೆ ವತಿಯಿಂದ ನಾಡೋಜ ಚನ್ನವೀರ ಕಣವಿ ಅವರಿಗೆ ‘ಕನ್ನಡ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ದೇವರ ಹುಬ್ಬಳ್ಳಿಯ ರಂಗಗಂಗಾ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಗ್ರಾಮಾಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಶುಕ್ರವಾರ ಆಲೂರು ವೆಂಕಟರಾವ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಣವಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮಾತನಾಡಿ, ಹೊರನಾಡ ಕನ್ನಡಿಗರಿಂದ ನಾವು ಕಲಿತುಕೊಳ್ಳುವುದು ಬಹಳಷ್ಟಿದೆ. ಕನ್ನಡಕ್ಕೆ ಧಕ್ಕೆಯಾಗಬಾರದೆನ್ನುವ ಅವರ ಕಳಕಳಿ ನಮಗೆ ಮಾರ್ಗದರ್ಶಿ. ಕನ್ನಡಿಗರು ದುಡಿಯಲು ಅನ್ಯ ದೇಶಗಳಿಗೆ ಹೋದರೂ ಕನ್ನಡವನ್ನು ಮರೆತಿಲ್ಲ. ಅಲ್ಲಿ ಕನ್ನಡ ಉಳಿಸುವ ಹಾಗೂ ಬೆಳೆಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಕನ್ನಡಿಗರು ದುಬೈ ವತಿಯಿಂದ ಹಿರಿಯ ಕವಿ ಚನ್ನವೀರ ಕಣವಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಶ್ಲಾಘನೀಯ. 91ರ ಇಳಿ ವಯಸ್ಸಿನಲ್ಲಿಯೂ ಅವರು ಕನ್ನಡವನ್ನು ಬೆಳೆಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕಣವಿ ಅವರದು ದೊಡ್ಡ ವ್ಯಕ್ತಿತ್ವ. ಅವರ ಸನ್ಮಾನದಲ್ಲಿ ಭಾಗಿಯಾಗಿರುವುದು ನನ್ನ ಸುದೈವ ಎಂದು ಹೇಳಿದರು.
ಪ್ರಶಸ್ತಿ ಸ್ವೀಕರಿಸಿದ ಚನ್ನವೀರ ಕಣವಿ ಮಾತನಾಡಿ, ದುಬೈ ಕನ್ನಡಿಗರು ಗಲ್ಫ್ ಸಂಸ್ಕೃತಿಯೊಂದಿಗೆ ಕನ್ನಡ ಸಂಸ್ಕೃತಿಯನ್ನೂ ಉಳಿಸುವ ಕಾರ್ಯ ಸ್ತುತ್ಯಾರ್ಹ. ಹೊರನಾಡ ಕನ್ನಡಿಗರು ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುತ್ತಿದ್ದಾರೆ. ದುಬೈ ಕನ್ನಡಿಗರು ಅಲ್ಲಿಗೆ ಹೋದ ಕಲಾವಿದರನ್ನು, ಸಾಹಿತಿಗಳನ್ನು ಅತ್ಯಾದರದಿಂದ ಸತ್ಕಾರ ಮಾಡಿ ಗೌರವಿಸುತ್ತಾರೆ ಎಂದರು.
ಅಕ್ಕ ಸಮ್ಮೇಳನವನ್ನು ಮೀರಿಸುವಂತೆ ದುಬೈ ಕನ್ನಡಿಗರು ಕನ್ನಡ ಸಮ್ಮೇಳನ ಆಯೋಜಿಸಿದ್ದನ್ನು ನಾನು ನೋಡಿದ್ದೇನೆ. ತುಳು, ಕೊಡವ, ಕೊಂಕಣಿ, ಬ್ಯಾರಿ ಭಾಷಿಕರೆಲ್ಲರೂ ಕನ್ನಡದ ಸೇವೆ ಮಾಡುತ್ತಿದ್ದಾರೆ ಎಂದು ಹೇಳಿದರು. ಸರಕಾರಿ ಶಾಲೆ ಉಳಿಸಲು ಬದ್ಧ: ಅಧ್ಯಕ್ಷತೆ ವಹಿಸಿದ್ದ ಕನ್ನಡಿಗರು ದುಬೈ ಅಧ್ಯಕ್ಷ ಸದನ್ ದಾಸ್ ಮಾತನಾಡಿ, ರಾಜ್ಯ ಸರಕಾರ ಸರಕಾರಿ ಕನ್ನಡ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಖಂಡನೀಯ. ಕನ್ನಡ ಶಾಲೆಗಳನ್ನು ಉಳಿಸಲು ದುಬೈ ಕನ್ನಡಿಗರು ನಮ್ಮ ಕೈಲಾದ ಆರ್ಥಿಕ ನೆರವು ನೀಡುತ್ತೇವೆ. ಶಾಲೆಗಳಿಗೆ ಮೂಲಸೌಲಭ್ಯಗಳನ್ನು ಕಲ್ಪಿಸಿ ಸರಕಾರಿ ಶಾಲೆಗಳನ್ನು ಉಳಿಸಲು ಬದ್ಧರಾಗಿದ್ದೇವೆ ಎಂದರು.
ದುಬೈ ಕನ್ನಡಿಗರ ಮಾಜಿ ಅಧ್ಯಕ್ಷರಾದ ವೀರೇಂದ್ರ ಬಾಬು, ಉಮಾ ವಿದ್ಯಾಧರ, ಮಲ್ಲಿಕಾರ್ಜುನಗೌಡ, ಕರ್ನಾಟಕ ಸಂಘ ಕತಾರ್ ಮಾಜಿ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಟಾಗಿಲು, ಅರವಿಂದ ಪಾಟೀಲ, ಬಸವರಾಜ ಸಾಲಿಮಠ ಅವರನ್ನು ಸನ್ಮಾನಿಸಲಾಯಿತು. ವೀರಭದ್ರ ರೇಶ್ಮಿ, ಸಹದೇವ ಪಾಗೋಜಿ, ಧನರಾಜ ಬಡಿಗೇರ, ದೀಪಕ ದುರ್ಗಾಯಿ, ಸುಭಾಸ ಚಿಕ್ಕಪ್ಪನವರ, ವೀರೇಶ ಚಿಕಣಿ ಮೊದಲಾದವರಿದ್ದರು.
ಮಲ್ಲಿಕಾರ್ಜುನಗೌಡ ಪ್ರಾಸ್ತಾವಿಕ ಮಾತನಾಡಿದರು. ವೇದಿಕೆ ಮೇಲೆ ಶಂಕರ ಪಾಗೋಜಿ ಇದ್ದರು. ಮಲ್ಲಪ್ಪ ಹೊಂಗಲ್ ಪ್ರಾರ್ಥಿಸಿದರು. ಬಸವರಾಜ ಹೊಂಗಲ್ ನಿರೂಪಿಸಿದರು. ಜೋಸೆಫ್ ಮಲ್ಲಾಡಿ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಮಲ್ಲಪ್ಪ ಹೊಂಗಲ ನಿರ್ದೇಶನದಲ್ಲಿ ದೇವರ ಹುಬ್ಬಳ್ಳಿಯ ರಂಗಗಂಗಾ ಕಲಾತಂಡದ ವತಿಯಿಂದ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ-1990’ ನಾಟಕದ ಪ್ರದರ್ಶನ ನಡೆಯಿತು.
ಮೂಲಸೌಲಭ್ಯ ಕಲಿಸಿ
ಸರಕಾರ 28,000 ಸರಕಾರಿ ಕನ್ನಡ ಶಾಲೆಗಳನ್ನು ಮುಚ್ಚಿ ಅವುಗಳನ್ನು ಬೇರೆ ಶಾಲೆಗಳೊಂದಿಗೆ ವಿಲೀನಗೊಳಿಸಲು ಮುಂದಾಗಿರುವುದನ್ನು ಎಲ್ಲ ಕನ್ನಡಿಗರು ಒಕ್ಕೊರಲಿನಿಂದ ಖಂಡಿಸಬೇಕು. ಸರಕಾರಿ ಕನ್ನಡ ಶಾಲೆಗಳಲ್ಲಿ ಬಡ ಮಕ್ಕಳು ಕಲಿಯುತ್ತಾರೆ. ಎಲ್ಲರಿಗೂ ಖಾಸಗಿ ಶಾಲೆಗಳಿಗೆ ಹೋಗಲು ಸಾಧ್ಯವಾಗುವುದಿಲ್ಲ ಎಂಬುದನ್ನು ಸರಕಾರ ಮನಗಾಣಬೇಕಿದೆ. ಸರಕಾರಿ ಶಾಲೆ- ಕಾಲೇಜುಗಳಿಗೆ ಮೂಸೌಲಭ್ಯ ಕಲ್ಪಿಸಬೇಕು ಎಂದು ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ರಾಜ್ಯ ಸರಕಾರ ಅಮೆರಿಕದ ಅಕ್ಕ ಸಂಘಟನೆಗೆ ಸಹಕಾರ ನೀಡಿದಂತೆ ನಮಗೆ ಸಹಕಾರ ನೀಡುತ್ತಿಲ್ಲ. ಇಲ್ಲಿಂದ ಕಲಾವಿದರನ್ನು ದುಬೈಗೆ ಕಳಿಸಲು ವ್ಯವಸ್ಥೆ ಮಾಡಿದರೆ ನಮ್ಮ ನಾಡಿನಲ್ಲಿ ಕನ್ನಡ ಚಟುವಟಿಕೆಗಳು ನಡೆಯಲು ಅನುಕೂಲವಾಗುತ್ತದೆ. ಈ ದಿಸೆಯಲ್ಲಿ ರಾಜ್ಯ ಸರಕಾರ ಕ್ರಮಕ್ಕೆ ಮುಂದಾಗಬೇಕು.
ಸದನ್ ದಾಸ್, ಅಧ್ಯಕ್ಷ, ಕನ್ನಡಿಗರು ದುಬೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.