ಪ್ರತ್ಯೇಕ ರಾಜ್ಯವಾದರೆ 371(ಜೆ) ಸೌಲಭ್ಯಕ್ಕೆ ಧಕ್ಕೆಯಾಗದು
Team Udayavani, Aug 4, 2018, 5:09 PM IST
ಹಾವೇರಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಸ್ತಿತ್ವಕ್ಕೆ ಬಂದರೆ 371(ಜೆ) ಸೌಲಭ್ಯಕ್ಕೆ ಯಾವುದೇ ಧಕ್ಕೆಯಾಗದು ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೂತನ ಅಧ್ಯಕ್ಷ ವಿ.ಎಫ್. ಕಟ್ಟೆಗೌಡ್ರ ಹೇಳಿದರು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿರುವ ವಕೀಲರ ಕೊಠಡಿಯಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹೈದ್ರಾಬಾದ್-ಕರ್ನಾಟಕ ಭಾಗದ ಜನರಲ್ಲಿ 371(ಜೆ) ತೊಂದರೆಯಾಗುತ್ತದೆ ಎಂಬ ತಪ್ಪು ಕಲ್ಪನೆ ಇದೆ. ಆದರೆ, 371(ಜೆ) ಪ್ರಕಾರ ಶೇ. 10 ಉದ್ಯೋಗ ಮೀಸಲಾತಿ ದೊರೆಯಲಿದೆ. ಜೊತೆಗೆ ಉಳಿದ ಶೇ. 90ರಷ್ಟು ಭಾಗದಲ್ಲಿ ಮೀಸಲಾತಿ ದೊರೆಯಲಿದೆ. ಅದಕ್ಕೆ ಯಾವ ತೊಂದರೆಯಾಗಲ್ಲ. ಬಗ್ಗೆ ಆ ಭಾಗದ ಜನರೊಂದಿಗೆ ಸಮಾಲೋಚನೆ ನಡೆಸುವೆ ಎಂದರು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ವ್ಯವಸ್ಥಿತವಾಗಿ ಮಾಡಬೇಕು. ಅದಕ್ಕೆ ಮೊದಲು ಹೋರಾಟ ಸಮಿತಿಯನ್ನು ನೋಂದಣಿ ಮಾಡಿಸಬೇಕು. ಈ ಹಿಂದೆ ರಾಜ್ಯಾಧ್ಯಕ್ಷರಾಗಿದ್ದ ಕೊತಂಬರಿ ವಕೀಲರು ಹೋರಾಟ ಸಮಿತಿಯನ್ನು ನೋಂದಣಿ ಮಾಡಿಸದೆ, ಆ. 2ರಂದು ಬಂದ್ ಕರೆ ನೀಡಿದ್ದರು. ಬಂದ್ ಹಿಂದಿನ ದಿನ ಬಂದ್ ವಾಪಸ್ ಪಡೆಯುವ ಮೂಲಕ ಈ ಭಾಗದ ಜನರಿಗೆ ನೋವು ತರುವ ಕೆಲಸ ಮಾಡಿದರು. ಹೋರಾಟ ಸಂದರ್ಭದಲ್ಲಿಯೇ ರೈತರು, ವಿವಿಧ ಸಂಘಟನೆಗಳ ಮುಖಂಡರು ತಮ್ಮನ್ನು ಹೋರಾಟ ಸಮಿತಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರ ನಂಬಿಕೆ ಉಳಿಸಿಕೊಳ್ಳುವ ಪ್ರಯತ್ನ ಮಾಡುವೆ. ಹೋರಾಟ ಸಮಿತಿ ನೋಂದಣಿಯಾದ ಬಳಿಕ ಎಲ್ಲ 13 ಜಿಲ್ಲೆಗಳಿಗೆ ಸಂಚರಿಸಿ ಸಂಘಟನೆ ಹಾಗೂ ಜಾಗೃತಿ ಮೂಡಿಸುವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಮಾಜಿ ಅಧ್ಯಕ್ಷ ಎನ್.ಎಸ್. ಪಾಟೀಲ, ಉತ್ತರ ಕರ್ನಾಟಕ ಪ್ರತ್ಯೇಕ ಹೋರಾಟ ಇಂದು ಅನಿವಾರ್ಯವಾಗಿದೆ. ಈ ಹೋರಾಟಕ್ಕೆ ಕಟ್ಟೇಗೌಡ್ರರಂಥ ಹಿರಿಯ ವಕೀಲರ ಮುಂದಾಳತ್ವ ವಹಿಸಿರುವುದು ಹೆಮ್ಮೆಯ ವಿಷಯವಾಗಿದೆ. ಈ ಹೋರಾಟ ಯಶಸ್ವಿಯಾಗಲು ಸಹಕಾರ ನೀಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಎಂ.ವಿ. ಕುಂಟೆ, ಸಿ.ಟಿ. ಜಾವಗಲ್, ಪಿ.ಆರ್. ಮುಂಜೋಜಿ, ಎನ್.ಬಿ. ಕಾಯಕದ, ಎ.ಎಚ್. ಕುಲಕರ್ಣಿ, ಎನ್.ಎಸ್. ಪ್ರಕಾಶ, ವಿ.ಎಲ್. ಅರ್ಕಾಚಾರಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.