ಕಾಡಾನೆ ಸ್ಥಳಾಂತರಕ್ಕೆ ಆಗ್ರಹಿಸಿ ಆಗುಂಬೆ ಬಂದ್
Team Udayavani, Aug 5, 2018, 7:00 AM IST
ತೀರ್ಥಹಳ್ಳಿ: ಕಾಡಾನೆ ಕಾಟದಿಂದ ಬೇಸತ್ತ ತಾಲೂಕಿನ ಆಗುಂಬೆ ಭಾಗದ ಜನ ಆನೆ ಸ್ಥಳಾಂತರಕ್ಕೆ ಒತ್ತಾಯಿಸಿ ಶನಿವಾರ ಬಂದ್ ಆಚರಿಸಿದರು. ಬೆಳಗ್ಗೆಯಿಂದಲೇ ಹೊಟೇಲ್, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಆಗುಂಬೆಯ ಮುಖ್ಯ ರಸ್ತೆಯಲ್ಲಿ ಗ್ರಾಮಸ್ಥರು ಹಾಗೂ ರೈತರು ಸುರಿಯುವ ಮಳೆಯಲ್ಲೂ ರಸ್ತೆ ತಡೆ ನಡೆಸಿದರು. 10 ನಿಮಿಷಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಆಗುಂಬೆ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚುತ್ತಲೇ ಇದೆ. ಆನೆಗಳನ್ನು ಕಾಡಿಗೆ ಅಟ್ಟುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಸೂಕ್ತ ಕ್ರಮ ಕೈಗೊಂಡಿರಲಿಲ್ಲ. ಸಲಗಗಳು ತೋಟ, ಗದ್ದೆಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿದ್ದು, ಬೆಳೆ ನಾಶಪಡಿಸುತ್ತಿವೆ. ಅಲ್ಲದೆ ಗ್ರಾಮಗಳಲ್ಲೆಲ್ಲ ಸಂಚರಿಸುವುದರಿಂದ ಭಯದಲ್ಲೇ ಕಾಲಕಳೆಯುವ ಸ್ಥಿತಿ ನಿರ್ಮಾಣವಾಗಿದೆ.ಹೀಗಾಗಿ ಆನೆಗಳ ಸ್ಥಳಾಂತರಕ್ಕೆ ಒತ್ತಾಯಿಸಿ ಕೆಲ ಸಮಯ ಬಂದ್ ಮಾಡಲಾಗಿದೆ ಎಂದು ಆಗುಂಬೆ ಹಾಗೂ ಬಿದರಗೋಡು ಗ್ರಾಮಸ್ಥರು ಹೇಳಿದರು.
ಪ್ರತಿಭಟನೆ ವೇಳೆ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಹಿಂದಿನ ಸರ್ಕಾರ ಹಾಗೂ ಇಲಾಖೆಯ ಕೆಲವು ಅಧಿಕಾರಿಗಳ ನಿರ್ಲಕ್ಷéದಿಂದಲೇ ಸಮಸ್ಯೆ ಉಲ್ಬಣಿಸಿದೆ. 15 ದಿನಗಳಲ್ಲಿ ಈ ವಿಚಾರವಾಗಿ ಅರಣ್ಯ ಇಲಾಖೆ ಹಾಗೂ ವನ್ಯಜೀವಿ ಇಲಾಖೆಯ ಎರಡೂ ಜಿಲ್ಲೆಗಳ ಅಧಿ ಕಾರಿಗಳನ್ನು ಕರೆಸಿ ಸಭೆ ನಡೆಸಲು ತೀರ್ಮಾನಿಸಿದ್ದೇವೆ. ನಂತರ ಈ ವಿಚಾರವನ್ನು ಸರ್ಕಾರದ ಗಮನಕ್ಕೂ ತರಲಿದ್ದೇನೆ ಎಂದರು.
ಜೆಡಿಎಸ್ ಮುಖಂಡ ಆರ್.ಎಂ. ಮಂಜುನಾಥ ಗೌಡ ಮಾತನಾಡಿ, ರೈತರಿಗೆ ಸಮಸ್ಯೆಯಾಗಿ ಕಾಡುತ್ತಿರುವ ಒಂಟಿ ಸಲಗದ ಆತಂಕ ನಿರಂತರವಾಗಿದೆ. ಶೀಘ್ರದಲ್ಲಿಯೇ ಈ ವಿಚಾರದ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿಯೊಂದಿಗೆ ಚರ್ಚಿಸಲಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.