ಲೋಕಲ್ ಮೈತ್ರಿ: ಕಾಂಗ್ರೆಸ್ ಒಲವು
Team Udayavani, Aug 5, 2018, 6:00 AM IST
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪ್ರಬಲವಾಗಿರುವ ಕಡೆ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದಲ್ಲಿ ಬಿಜೆಪಿ ಬೆಳವಣಿಗೆಯನ್ನು ತಳಮಟ್ಟದಿಂದಲೇ ತಡೆಯಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ಥಳೀಯ ಪರಿಸ್ಥಿತಿ ನೋಡಿಕೊಂಡು ಬಿಜೆಪಿ ಪ್ರಬಲ ಇರುವ ಕಡೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಿ ಎಂದು ರಾಜ್ಯ ನಾಯಕರಿಗೆ ಸಂದೇಶ ರವಾನಿಸಿದೆ. ಈ ಬೆಳವಣಿಗೆಗಳ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ಅವರು ಶನಿವಾರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಆದರೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್ ಜತೆ ಮೈತ್ರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದು, ಸ್ವತಂತ್ರವಾಗಿ ಸ್ಪರ್ಧೆ ಮಾಡುವುದರಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ ಎಂದು ಪ್ರತಿಪಾದಿಸಿದ್ದಾರೆ ಎಂದು ಹೇಳಲಾಗಿದೆ.
ಹೈಕಮಾಂಡ್ ಹೇಳಿದ್ದೇನು?:
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಜಿಲ್ಲಾ ಹಾಗೂ ತಾಲೂಕು ಘಟಕಗಳು ಸೇರಿ ಸ್ಥಳೀಯವಾಗಿ ನಿರ್ಧಾರ ಕೈಗೊಳ್ಳಲಿ. ಬಿಜೆಪಿ ಪ್ರಬಲವಾಗಿ ಇರುವ ಕಡೆ ಪ್ರತಿಷ್ಠೆ ಬದಿಗಿಟ್ಟು ಹೊಂದಾಣಿಕೆ ಮಾಡಿಕೊಳ್ಳಿ. ಹೆಚ್ಚು ಕಡೆ ಅಧಿಕಾರ ಹಿಡಿಯವುದು ನಮ್ಮ ಗುರಿಯಾಗಬೇಕು ಎಂದು ಸೂಚನೆ ನೀಡಿದೆ ಎನ್ನಲಾಗಿದೆ.
ಎಐಸಿಸಿ ಕಾರ್ಯಕಾರಿಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಹೈಕಮಾಂಡ್ ನಾಯಕರು ಈ ಕುರಿತು ಚರ್ಚಿಸಿದ್ದಾರೆ. ಕಾಂಗ್ರೆಸ್ ಶಕ್ತಿಯುತವಾಗಿ ಇರುವ ಕಡೆ ಏಕಾಂಗಿ ಸ್ಪರ್ಧೆ ಮಾಡಿ, ಜೆಡಿಎಸ್ ಪ್ರಬಲ ಇರುವ ಕಡೆ ಅವರು ಸ್ಪರ್ಧೆ ಮಾಡಲಿ. ಬಿಜೆಪಿ ಪ್ರಬಲ ಇರುವ ಕಡೆ ಕಾಂಗ್ರೆಸ್-ಜೆಡಿಎಸ್ ಜತೆಗೂಡಿ ಸ್ಪರ್ಧೆ ಮಾಡಿ. ಆದರೆ, ಈ ಬಗ್ಗೆ ಸ್ಥಳೀಯ ನಾಯಕರದೇ ಅಂತಿಮ ತೀರ್ಮಾನವಾಗಲಿ ಎಂದು ಸೂಚಿಸಿದ್ದಾರೆನ್ನಲಾಗಿದೆ.
ಸಿದ್ದರಾಮಯ್ಯ ಪ್ರತಿಪಾದನೆ:
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದೇ ಸೂಕ್ತ. ಕೆಲವೆಡೆ ಮೈತ್ರಿ, ಮತ್ತೆ ಕೆಲವೆಡೆ ಇಲ್ಲ ಎಂದಾದರೆ ಗೊಂದಲ ಉಂಟಾಗಬಹುದು. ಜತೆಗೆ ಒಳ ಒಪ್ಪಂದಗಳಿಗೂ ಅವಕಾಶ ಕೊಟ್ಟಂತಾಗಬಹುದು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.
ತಳಮಟ್ಟದಲ್ಲಿ ಪಕ್ಷದ ಸಂಘಟನೆ ಹಾಗೂ ಶಕ್ತಿ ಹೆಚ್ಚಾಗಲು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪ್ರತ್ಯೇಕವಾಗಿ ಹೋರಾಟ ನಡೆಸುವುದು ಸೂಕ್ತ. ಇದರಿಂದ ಪಕ್ಷಕ್ಕೆ ಲಾಭವಾಗುತ್ತದೆ ಎಂದು ಹೇಳಿರುವುದಾಗಿ ತಿಳಿದು ಬಂದಿದೆ.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಕ್ಷೇತ್ರಗಳ ಜತೆಗೆ ಸೋಲು ಅನುಭವಿಸಿರುವ ಕ್ಷೇತ್ರಗಳಲ್ಲಿ, ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರ ಹಿಡಿಯುವ ಪ್ರಯತ್ನ ಮಾಡಬೇಕು. ಮಂಡ್ಯ,ಹಾಸನ, ತುಮಕೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಕಾಂಗ್ರೆಸ್ ಶಕ್ತಿ ಹೆಚ್ಚಿಸಿಕೊಳ್ಳಬೇಕಾಗಿದೆ. ಇದರಿಂದ ನಮಗೆ ಲೋಕಸಭೆ ಚುನಾವಣೆಯಲ್ಲಿ ಲಾಭವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪ್ರತ್ಯೇಕವಾಗಿಯೇ ಸ್ಪರ್ಧೆ ಮಾಡಿ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರ ಹಿಡಿಯುವ ಸಂದರ್ಭದಲ್ಲಿ ಬೇಕಾದರೆ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಬಹುದು. ಈ ಹಿಂದೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮಯದಲ್ಲಿ ನಗರ ಸ್ಥಳೀಯ ಸಂಸ್ಥೆ ಹಾಗೂ ಜಿಲ್ಲಾ ಮತ್ತು ತಾಲೂಕುಪಂಚಾಯತ್‌ಗಳಲ್ಲಿ ಆ ರೀತಿ ಅಧಿಕಾರ ಹಿಡಿದ ಉದಾಹರಣೆಯಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ, ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಹೇಗೆ ಕಟ್ಟಿಹಾಕಬಹುದು. ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟು ಹೇಗೆ ಹೋರಾಟ ರೂಪಿಸಬಹುದು ಎಂಬ ಬಗ್ಗೆಯೂ ಸಿದ್ದರಾಮಯ್ಯ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.
ಬಿಜೆಪಿ ಪ್ರಬಲವಾಗಿರುವ ಕಡೆ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಿ ಎಂಬ ಹೈಕಮಾಂಡ್ ಸಂದೇಶದ ಹಿನ್ನೆಲೆಯಲ್ಲೇ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶನಿವಾರ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದರು. ಮೈತ್ರಿ ಮಾಡಿಕೊಳ್ಳುವುದೇ ಆದರೆ ಎಲ್ಲೆಲ್ಲಿ ಸಾಧ್ಯವಿದೆ ಎಂಬುದರ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.
ನಗರ ಸ್ಥಳೀಯ ಸಂಸ್ಥೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ. ದೇವೇಗೌಡರ ಭೇಟಿ ಸಂದರ್ಭದಲ್ಲಿ ಆ ವಿಚಾರ ಪ್ರಸ್ತಾಪಿಸಿಲ್ಲ. ಸಮನ್ವಯ ಸಮಿತಿಗೆ ಕೆಪಿಸಿಸಿ ಅಧ್ಯಕ್ಷನಾಗಿ ಸೇರ್ಪಡೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ.
– ದಿನೇಶ್‌ಗುಂಡೂರಾವ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.