ನಿಶಾಚರಿ ಕಸ ತಡೆಗೆ ಕಾವಲು

Team Udayavani, Aug 5, 2018, 3:20 PM IST

nishachari.jpg

ಬೆಂಗಳೂರು: ಕೇಂದ್ರದ “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018′ ಪ್ರಶಸ್ತಿಗಾಗಿ ಕಸರತ್ತು ನಡೆಸಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಗೆ ರಾತ್ರೋರಾತ್ರಿ ಬೆಂಗಳೂರತಿನಿಂದ ಬಂದು ಬೀಳುತ್ತಿರುವ ಕಸ ದೊಡ್ಡ ತಲೆನೋವಾಗಿ ಪರಿಣಮಿಸಿದೆ!

ಸ್ವಚ್ಛ ಭಾರತ್‌ ಮಿಷನ್‌ ಯೋಜನೆ ಅಡಿ “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ’ ಅಭಿಯಾನ ಹಮ್ಮಿಕೊಂಡಿದ್ದು, ಹಳ್ಳಿಗಳ ನೈರ್ಮಲ್ಯದ ಬಗ್ಗೆ ಖುದ್ದು ಮೌಲ್ಯಮಾಪನ ಮಾಡಲಿರುವ ಕೇಂದ್ರ ಸರ್ಕಾರ, ಅತ್ಯುತ್ತಮ ಜಿಲ್ಲೆಗೆ  ಅಕ್ಟೋಬರ್‌ 2ರಂದು ಪ್ರಶಸ್ತಿ ನೀಡಲಿದೆ. ಈ ನಿಟ್ಟಿನಲ್ಲಿ ಜಿ.ಪಂ. ಪ್ರತಿ ಹಳ್ಳಿಗಳಲ್ಲಿ ಹಗಲು-ರಾತ್ರಿ ಆಂದೋಲನ ಮಾದರಿಯಲ್ಲಿ ಸ್ವಚ್ಛತಾ ಕ್ರಮ ಕೈಗೊಂಡಿದೆ. ಆದರೆ, ಈ ಉತ್ಸಾಹಕ್ಕೆ ನಗರದ ಕಸ ಕಿರಿಕಿರಿ ಉಂಟುಮಾಡುತ್ತಿದೆ.

ಜಿ.ಪಂ ಸರಹದ್ದಿನಲ್ಲಿರುವ ಗ್ರಾಮಗಳ ರಸ್ತೆಯುದ್ದಕ್ಕೂ ರಾತ್ರೋರಾತ್ರಿ ಕಸ ಬಂದು ಬೀಳುತ್ತಿದೆ. ಹಳ್ಳಿಗಳು ಸ್ವಚ್ಛವಾಗಿದ್ದರೂ, ಕಸದ ರಾಶಿಗಳು ಪಂಚಾಯ್ತಿ ಸಿಬ್ಬಂದಿ ನಿದ್ದೆಗೆಡಿಸಿವೆ. ಅಷ್ಟೇ ಅಲ್ಲ, “ಕಸದ ವಾಹನಗಳ ಮೇಲೆ ಕಣ್ಣಿಡಲು ಕಾವಲುಗಾರರನ್ನು ಕೂಡ ನೇಮಿಸಲಾಗಿದೆ. ಅಗತ್ಯಬಿದ್ದರೆ ರಾತ್ರಿ ಕೂಡ ಈ ಕಾವಲು ಪಡೆ ಕಾರ್ಯಾಚರಣೆ ವಿಸ್ತರಿಸಲು ಚಿಂತನೆ ನಡೆದಿದೆ’ ಎಂದು ಜಿ.ಪಂ. ಉಪ ಕಾರ್ಯದರ್ಶಿ ಡಾ.ಸಿದ್ದರಾಮಯ್ಯ “ಉದಯವಾಣಿ’ಗೆ ತಿಳಿಸಿದರು.

8-10 ಪಂಚಾಯ್ತಿಗಳಲ್ಲಿ ಸಮಸ್ಯೆ: ಚಿಕ್ಕಬಾಣಾವರ, ಕಗ್ಗಲಿಪುರ, ಮಾಗಡಿ ರಸ್ತೆಯ ತಾವರೆಕೆರೆ, ಕುಂಬಳಗೋಡು, ಪೂರ್ವ ಭಾಗದ ಸೀಗೇಹಳ್ಳಿ, ಉತ್ತರದ ಹಲವು ಪಂಚಾಯ್ತಿಗಳು ಸೇರಿದಂತೆ 8-10 ಗ್ರಾ.ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಇದು ಕಂಡುಬರುತ್ತಿದೆ.

ಬಿಬಿಎಂಪಿಯ ಕಸಕ್ಕಿಂತ ನಿರ್ಮಾಣ ತ್ಯಾಜ್ಯ ಹೆಚ್ಚು ಸಮಸ್ಯೆಯಾಗಿದೆ. ವಾರದಲ್ಲಿ ಎರಡು-ಮೂರು ಬಾರಿ ಲಾರಿಗಳಲ್ಲಿ ಕಸ ಬಂದು ಬಿದ್ದಿರುತ್ತದೆ. ಈ ಮಧ್ಯೆ “ಸ್ವಚ್ಛ ಸರ್ವೇಕ್ಷಣ ಗ್ರಾಮಿಣ’ ಅಭಿಯಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತಲೆನೋವಾಗಿ ಪರಿಣಮಿಸಿದೆ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದರು. 

ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಶೀಘ್ರದಲ್ಲೇ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದು ಗಮನಸೆಳೆಯಲಿದ್ದಾರೆ. ಅಲ್ಲದೆ, ಈ ಕುರಿತು ಸರ್ಕಾರದ ಮಟ್ಟದಲ್ಲಿ ನಿರ್ಣಯ ಕೈಗೊಳ್ಳಲು ಚಿಂತನೆ ನಡೆದಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಗಳು ತಿಳಿಸಿವೆ. 

ಏನಿದು ಸ್ವಚ್ಛ ಸರ್ವೇಕ್ಷಣ?: “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ’ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ಸ್ವಚ್ಛ ಭಾರತ್‌ ಮಿಷನ್‌ನ ಮುಂದುವರಿದ ಭಾಗ. ಈ ಮೊದಲು ಮನೆಗಳಲ್ಲಿನ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುತ್ತಿತ್ತು. ಈಗ “ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ರಥ’ವು ಹಳ್ಳಿಗಳಲ್ಲಿನ ಸಾಮೂಹಿಕ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸುತ್ತಿದೆ. ಜತೆಗೆ ಜಿ.ಪಂ.ಯು ಆಸ್ಪತ್ರೆಗಳು, ಶಾಲೆಗಳು, ಅಂಗನವಾಡಿ, ಬಸ್‌ ನಿಲ್ದಾಣಗಳಲ್ಲಿನ ಸಮುದಾಯ ಶೌಚಾಲಯಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದು,

ಶೌಚಾಲಯಗಳ ಬಳಕೆ ಸೇರಿದಂತೆ ಸಮಗ್ರ ನೈರ್ಮಲ್ಯ ಕಾಪಾಡುವ ಬಗ್ಗೆ ಮಾಹಿತಿ ನೀಡಲಾಗುವುದು. ಗ್ರಾಮ ಸಭೆಗಳನ್ನು ನಡೆಸುವುದು, ಕರಪತ್ರ ಹಂಚುವುದು, ಕಸ ವಿಂಗಡಣೆ ಮತ್ತು ಸಮರ್ಪಕ ವಿಲೇವಾರಿ ಮತ್ತಿತರ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿದೆ. ಹೀಗೆ ಸಾರ್ವಜನಿಕ ಸ್ಥಳಗಳಲ್ಲಿನ ಕಾಪಾಡಿಕೊಂಡಿದ್ದರೆ, ಇದಕ್ಕೆ 35 ಅಂಕಗಳೂ ಸಿಗಲಿವೆ. 

ನಗರದ ತ್ಯಾಜ್ಯ ಹಳ್ಳಿಗಳಲ್ಲಿ ತಂದು ಸುರಿಯುವುದು ತಪ್ಪು. ಆದರೆ, ಇದಕ್ಕೆ ಏಕಾಏಕಿ ಕಡಿವಾಣ ಹಾಕುವುದೂ ಸುಲಭವಲ್ಲ. ಅದೇನೇ ಇರಲಿ, ಈ ಬಗ್ಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನನ್ನ ಗಮನಕ್ಕೆ ತಂದರೆ, ಪಾಲಿಕೆ ಆಯುಕ್ತರಿಗೆ ಕ್ರಮ ಕೈಗೊಳ್ಳಲು ಪತ್ರ ಬರೆಯಲಾಗುವುದು. 
-ಎಲ್‌.ಕೆ. ಅತೀಕ್‌, ಪ್ರಧಾನ ಕಾರ್ಯದರ್ಶಿ, ಪಂಚಾಯತ್‌ರಾಜ್‌ ಇಲಾಖೆ

ವಿಮಾನ ಹಾರಾಟಕ್ಕೂ ತೊಂದರೆ!: ಜಿ.ಪಂ ಉತ್ತರ ಭಾಗದಲ್ಲಿ ನಗರದ ಕಸ ಮತ್ತೂಂದು ರೀತಿಯ ಸಮಸ್ಯೆ ಹುಟ್ಟುಹಾಕಿದ್ದು, ಆ ಭಾಗದಲ್ಲಿ ಹಾರಾಡುವ ಲೋಹದ ಹಕ್ಕಿಗಳಿಗೂ ಕಿರಿಕಿರಿ ಉಂಟುಮಾಡುತ್ತಿವೆ! ಯಲಹಂಕ ವಾಯುನೆಲೆಯಲ್ಲಿ ನಿರಂತರ ವಿಮಾನಗಳ ಹಾರಾಟ ಮತ್ತು ತಾಲೀಮು ನಡೆಯುತ್ತದೆ. ಆದರೆ, ಅಲ್ಲಿ ಸುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾಂಸದ ಅಂಗಡಿಗಳು ಮತ್ತು ಮಾಂಸಾಹಾರ ಹೋಟೆಲ್‌ಗ‌ಳು ಇವೆ. ಮಾಂಸದ ತ್ಯಾಜ್ಯವನ್ನು ರಾತ್ರೋರಾತ್ರಿ ರಸ್ತೆ ಬದಿ ಸುರಿಯಲಾಗುತ್ತಿದೆ. ಈ ತ್ಯಾಜ್ಯ ತಿನ್ನಲು ಹದ್ದುಗಳು ಬರುವುದರಿಂದ ವಿಮಾನಗಳ ಹಾರಾಟಕ್ಕೆ ಅಡ್ಡಿಯಾಗುತ್ತಿದೆ.

ಸಾಮಾನ್ಯವಾಗಿ ಎರಡು ವರ್ಷಗಳಿಗೊಮ್ಮೆ ನಡೆಯುವ ವೈಮಾನಿಕ ಪ್ರದರ್ಶನದ ವೇಳೆ ಈ ಸಮಸ್ಯೆ ಕಂಡುಬರುತ್ತದೆ. ಆಗ ಹದಿನೈದು ದಿನ ಮುಂಚಿತವಾಗಿ ಮಾಂಸ ಮಾರಾಟ ನಿಷೇಧಿಸಲಾಗುತ್ತದೆ. ಆದರೆ, ಇತ್ತೀಚೆಗೆ ಉಳಿದ ಸಂದರ್ಭದಲ್ಲೂ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ವಾಯುಸೇನೆ ಅಧಿಕಾರಿಗಳಿಂದಲೂ ದೂರು ಬಂದಿದ್ದು, ಕ್ರಮ ಕೈಗೊಳ್ಳಲಾಗುತ್ತಿದೆ. ಅಷ್ಟೇ ಅಲ್ಲ, ಬಿಬಿಎಂಪಿ ಆಯುಕ್ತರ ಗಮನಕ್ಕೂ ತರಲಾಗಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

* ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.