ಪರೀಕ್ಷೆ ಮುಗಿದ ಅರ್ಧಗಂಟೆಯಲ್ಲಿ ಪ್ರಕಟ


Team Udayavani, Aug 6, 2018, 6:35 AM IST

mbbs.jpg

ಬೆಂಗಳೂರು: ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫ‌ಲಿತಾಂಶಕ್ಕಾಗಿ ತಿಂಗಳುಗಳ ಕಾಲ ಕಾಯುತ್ತಿದ್ದ ಪರಿಸ್ಥಿತಿ ಈಗ ಕಡಿಮೆಯಾಗಿದೆ. ಪರೀಕ್ಷೆ ಮುಗಿದ ಅರ್ಧಗಂಟೆಯೊಳಗೆ ಫ‌ಲಿತಾಂಶ ನೀಡುವ ವ್ಯವಸ್ಥೆ ಬಂದಿದೆ.

ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ(ಆರ್‌ಜಿಯುಎಚ್‌ಎಸ್‌)ಈ ಹಿಂದೆ ಕೆಲವು ಕೋರ್ಸ್‌ನ ವಿದ್ಯಾರ್ಥಿಗಳ ಪರೀಕ್ಷೆ ಮುಗಿದ 15 ನಿಮಿಷದಲ್ಲೇ ಫ‌ಲಿತಾಂಶ ನೀಡಿ ದಾಖಲೆ ಮಾಡಿತ್ತು. ಆದರೆ, ಆಗ ವಿದ್ಯಾರ್ಥಿಗಳ ಸಂಖ್ಯೆ ಬಹಳ ಕಡಿಮೆ ಇತ್ತು. ಈಗ ಸುಮಾರು 8 ಸಾವಿರ ವಿದ್ಯಾರ್ಥಿಗಳ ಫ‌ಲಿತಾಂಶ ಪರೀಕ್ಷೆ ಮುಗಿದ ಅರ್ಧಗಂಟೆಯಲ್ಲಿ ನೀಡುವ ಮೂಲಕ  ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಎಂಬಿಬಿಎಸ್‌ ಪದವಿಯ ಪ್ರಮುಖ ಕೋರ್ಸ್‌ನ 8,174 ವಿದ್ಯಾರ್ಥಿಗಳಿಗೆ ಜುಲೈ 3ರಂದು ಥಿಯರಿ ಪರೀಕ್ಷೆ ನಡೆಸಲಾಗಿತ್ತು. ಒಬ್ಬ ವಿದ್ಯಾರ್ಥಿಯ ಸರಾಸರಿ 6 ಉತ್ತರ ಪತ್ರಿಕೆಯಂತೆ ಸುಮಾರು 61 ಸಾವಿರ ಉತ್ತರ ಪ್ರತಿಗಳ ಮೌಲ್ಯಮಾಪನ ನಿರ್ದಿಷ್ಟ ಸಮಯದೊಳಗೆ ಮುಗಿಸಿದ್ದರು. 

ಜುಲೈ 25ರಿಂದ ಆ.5ರ ವರೆಗೆ ಬಹುತೇಕ ಎಲ್ಲ ವೈದ್ಯಕೀಯ ಕಾಲೇಜಿನಲ್ಲೂ 8174 ವಿದ್ಯಾರ್ಥಿಗಳಿಗೆ ವೈವಾ ಮತ್ತು ಪ್ರಾಯೋಗಿಕ ಪರೀಕ್ಷೆ ನಡೆಸಿದ್ದರು. ಭಾನುವಾರ(ಆ.5) ಪ್ರಾಯೋಗಿಕ ಪರೀಕ್ಷೆ ಮತ್ತು ವೈವಾ ಮುಗಿಯುತ್ತಿದ್ದಂತೆ ಎಲ್ಲ ಕಾಲೇಜುಗಳಿಂದ ವಿದ್ಯಾರ್ಥಿಗಳ ಅಂಕದ ಮಾಹಿತಿ ಆಲ್‌ಲೈನ್‌ ಮೂಲಕ ಅಪ್‌ಲೋಡ್‌ ಮಾಡಲಾಗಿತ್ತು.  ವಿಶ್ವವಿದ್ಯಾಲಯದ ಕೇಂದ್ರ ಕಚೇರಿಯಲ್ಲಿ ಥಿಯರಿ ಅಂಕಗಳ ಜತೆಗೆ ಪ್ರಾಯೋಗಿಕ ಅಂಕಗಳನ್ನು ಕ್ರೋಢೀಕರಿಸಿ ಅಂತಿಮ ಫ‌ಲಿತಾಂಶವನ್ನು ಪರೀಕ್ಷೆ ಮುಗಿದ 30 ನಿಮಿಷದಲ್ಲಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಕಾಲೇಜುಗಳ ನಿಗದಿತ ಸಮಯದಲ್ಲಿ ಪ್ರಾಯೋಗಿಕ ಪರೀಕ್ಷೆ ಮತ್ತು ವೈವಾ ಮಾಹಿತಿ ಅಪ್‌ಲೋಡ್‌ ಮಾಡಿದ್ದರಿಂದ 8 ಸಾವಿರ ವಿದ್ಯಾರ್ಥಿಗಳ ಫ‌ಲಿತಾಂಶ ಪರೀಕ್ಷೆ ಮುಗಿದ ಅರ್ಧಗಂಟೆಯಲ್ಲಿ ನೀಡಲು ಸಾಧ್ಯವಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮತ್ತು ಕಾಲೇಜುಗಳಿಗೂ ಅನುಕೂಲ ಹೆಚ್ಚಿದೆ ಎಂದು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಮೌಲ್ಯಮಾಪನ ಕುಲಸಚಿವ ಡಾ.ಎಂ.ಕೆ.ರಮೇಶ್‌ ಮಾಹಿತಿ ನೀಡಿದರು.

ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲೂ ಪಡೆದ ಅಂಕ, ಉತ್ತೀರ್ಣವಾದ ಶ್ರೇಣಿ, ಒಟ್ಟು ಫ‌ಲಿತಾಂಶ, ಕಾಲೇಜಿನ ವಿವರ ಇತ್ಯಾದಿ ಎಲ್ಲವೂ ವಿಶ್ವವಿದ್ಯಾಲಯದ ವೆಬ್‌ಸೈಟ್‌ www.rguhs.ac.inನಲ್ಲಿ ಲಭ್ಯವಿದೆ. ಸಂಬಂಧಪಟ್ಟ ವಿದ್ಯಾರ್ಥಿಗಳು ವೆಬ್‌ಸೈಟ್‌ನಿಂದ ಅಗತ್ಯ ಮಾಹಿತಿ ಪಡೆಯಬಹುದು ಎಂದರು.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.