ಗಡ್ಡ ಬೋಳಿಸಿದ ಪ್ರಕರಣ: ಕತ್ತು ಸೀಳಿದರೂ ನಾವು ಮುಸ್ಲಿಮರೇ: ಓವೈಸಿ

Team Udayavani, Aug 6, 2018, 11:13 AM IST

owaisi-700.jpg

ಹೊಸದಿಲ್ಲಿ : ‘ನೀವು ನಮ್ಮ ಕತ್ತನ್ನು ಸೀಳಿದರೂ ನಾವು ಮುಸ್ಲಿಮರಾಗಿಯೇ ಇರುತ್ತೇವೆ’ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥರಾಗಿರುವ ಸಂಸದ ಅಸಾದುದ್ದೀನ್‌ ಓವೈಸಿ ಗುಡುಗಿದ್ದಾರೆ.

ಹರಿಯಾಣದಲ್ಲಿ ಮುಸ್ಲಿಮ್‌ ವ್ಯಕ್ತಿಯೊಬ್ಬನ ಗಡ್ಡವನ್ನು ಬಲವಂತದಿಂದ ಬೋಳಿಸಲಾಯಯಿತೆಂಬ ವರದಿಗಳ ಹಿನ್ನೆಲೆಯಲ್ಲಿ ಓವೈಸಿ ಈ ಆಕ್ರೋಶದ ಪ್ರತಿಕ್ರಿಯೆ ನೀಡಿದ್ದಾರೆ. 

“ಮುಸ್ಲಿಂ ವ್ಯಕ್ತಿಯೊಬ್ಬನ ಗಡ್ಡವನ್ನು ಬಲವಂತದಿಂದ ಬೋಳಿಸಲಾಯಿತೆಂದು ನಾವು ಕೇಳಿದ್ದೇವೆ. ಈ ಕೃತ್ಯ ಎಸಗಿರುವವರಿಗೆ ಮತ್ತು ಅವರ ಅಪ್ಪಂದಿರಿಗೆ ನಾನು ಎಚ್ಚರಿಸುವುದೇನೆಂದರೆ ನೀವು ನಮ್ಮ ಕತ್ತನ್ನು ಕೊಯ್ದರು ಕೂಡ ನಾವು ಮುಸ್ಲಿಮರಾಗಿಯೇ ಇರುತ್ತೇವೆ. ನಾವು ನಿಮ್ಮನ್ನು ಇಸ್ಲಾಮ್‌ ಗೆ ಮತಾಂತರಿಸುತ್ತೇವೆ ಮತ್ತು ನೀವು ಗಡ್ಡ ಬಿಡುವಂತೆ ಮಾಡುತ್ತೇವೆ” ಎಂದು ಓವೈಸಿ ಕಿಡಿ ಕಾರಿದರು. 

ಕಳೆದ ಗುರುವಾರ ಗುರುಗ್ರಾಮದ ಸೆಕ್ಟರ್‌ 29ರಲ್ಲಿ ಮುಸ್ಲಿಮ್‌ ಯುವಕನೊಬ್ಬನ ಗಡ್ಡವನ್ನು ಬಲವಂತದಿಂದ ಬೋಳಿಸಲಾಯಿತೆಂಬ ಘಟನೆ ವರದಿಯಾಗಿತ್ತು.

ಯೂನುಸ್‌ ಎಂಬ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಇಬ್ಬರು ಅಪರಿಚಿತರೊಂದಿಗೆ ಮಾತಿನ ಜಗಳ ಉಂಟಾಗಿತ್ತು. ಈ ಜಗಳದ ಪರಾಕಾಷ್ಠೆಯಲ್ಲಿ ಅವರು ಯೂನುಸ್‌ನ  ಗಡ್ಡವನ್ನು ಬಲಂತವಾಗಿ ಬೋಳಿಸಿದ್ದರು ಎನ್ನಲಾಗಿತ್ತು. 

ಮಾಧ್ಯಮ ವರದಿಗಳ ಪ್ರಕಾರ ಈ ಘಟನೆಯು ಒಂದು ಹೇರ್‌ ಕಟ್ಟಿಂಗ್‌ ಸೆಲೂನ್‌ನ ಒಳಗೆ ನಡೆದಿತ್ತು. ಅಪರಿಚಿತ ದುಷ್ಕರ್ಮಿಗಳು ಮುಸ್ಲಿಂ ಯುವಕನನ್ನು ಸಮೀಪದ ಹೇರ್‌ ಕಟ್ಟಿಂಗ್‌ ಸೆಲೂನ್‌ಗೆ ಎಳೆದೊಯ್ದು ಅಲ್ಲಿ ಆತನ ಗಡ್ಡವನ್ನು ಬಲವಂದಿಂದ ಬೋಳಿಸಿದ್ದರು ಎನ್ನಲಾಗಿತ್ತು. 

ಬಲವಂತದಿಂದ ಗಡ್ಡ ಬೋಳಿಸಿಕೊಂಡಿದ್ದ ಸಂತ್ರಸ್ತ ಮುಸ್ಲಿಂ ವ್ಯಕ್ತಿ ಅನಂತರ ಗುರುಗ್ರಾಮ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಿಸಿದ್ದರು. 

ಟಾಪ್ ನ್ಯೂಸ್

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್‌ ಬಣದ ನಾಯಕ

Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್‌ ಬಣದ ನಾಯಕ

ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

India-Afghanistan: ಆಫ್ಘನ್‌ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?

ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ: ವೈದ್ಯರು

Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್‌ ಕ್ಯಾನ್ಸರ್‌ ಬಗ್ಗೆ ಎಚ್ಚರವಿರಲಿ

ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.