ವಿಭಿನ್ನ ಮನಸ್ಥಿತಿಯ ಸುತ್ತ ವಿರಾಟ ಪರ್ವ

Team Udayavani, Aug 6, 2018, 11:22 AM IST

virat-abhinaya.jpg

“ಮುದ್ದು ಮನಸೇ’ ಎಂಬ ಸಿನಿಮಾ ಬಂದಿರೋದು ನಿಮಗೆ ಗೊತ್ತಿರಬಹುದು. ಅರುಗೌಡ ನಾಯಕರಾಗಿದ್ದ ಈ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಆ ಚಿತ್ರವನ್ನು ನಿರ್ದೇಶಿಸಿರೋದು ಅನಂತ್‌ ಶೈನ್‌. “ಮುದ್ದು ಮನಸೇ’ ನಂತರ ಅನಂತ್‌ ಶೈನ್‌ ಏನು ಮಾಡುತ್ತಿದ್ದಾರೆ, ಯಾವ ಸಿನಿಮಾ ಆರಂಭಿಸಿದ್ದಾರೆಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಅದು “ವಿರಾಟ ಪರ್ವ’. ಹೌದು, ಅನಂತ್‌ ಶೈನ್‌ “ವಿರಾಟ ಪರ್ವ’ ಎಂಬ ಸಿನಿಮಾವನ್ನು ಸದ್ದಿಲ್ಲದೇ ಆರಂಭಿಸಿದ್ದು, ಈಗಾಗಲೇ ಬಹುತೇಕ ಚಿತ್ರೀಕರಣ ಕೂಡಾ ಮಾಡಿಮುಗಿಸಿದ್ದಾರೆ.

ರೆಗ್ಯುಲರ್‌ ಪ್ಯಾಟರ್ನ್ ಬಿಟ್ಟು ಈ ಬಾರಿ ಹೊಸ ಜಾನರ್‌ನತ್ತ ವಾಲಿರುವ ಅನಂತ್‌ಶೈನ್‌ ಇಂದಿನ ಟ್ರೆಂಡ್‌ಗೆ ಒಗ್ಗುವಂತಹ ಕಥೆ ಮಾಡಿಕೊಂಡಿದ್ದಾರೆ. ವಿಭಿನ್ನ ಮನಸ್ಥಿತಿಯ ಮೂವರು ಹುಡುಗರ ಸುತ್ತ ಇಡೀ ಸಿನಿಮಾ ಸುತ್ತಲಿದ್ದು, ಹೊಸ ಬಗೆಯ ಕಥೆಯಾಗಿ ಪ್ರೇಕ್ಷಕರಿಗೆ ಇಷ್ಟವಾಗುವ ವಿಶ್ವಾಸ ಅನಂತ್‌ ಶೈನ್‌ ಅವರಿಗಿದೆ. ಕಥೆಗೆ ತಕ್ಕಂತೆ ವಿಭಿನ್ನ ಲೊಕೇಶನ್‌ಗಳಲ್ಲೂ ಚಿತ್ರೀಕರಣ ಮಾಡಿರುವ ಅನಂತ್‌, ಸದ್ಯ ಉಳಿದ ಭಾಗದ ಚಿತ್ರೀಕರಣಕ್ಕೆ ಅಣಿಯಾಗುತ್ತಿದ್ದಾರೆ. 

ಚಿತ್ರದಲ್ಲಿ ಅಭಿನಯ ಪ್ರಮುಖ ಪಾತ್ರ ಮಾಡಿದ್ದಾರೆ. ಈಗಾಗಲೇ ಅಭಿನಯ ಕನ್ನಡದಲ್ಲಿ “ಹುಡುಗರು’, “ಕಿಚ್ಚು’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಮಾತು ಬಾರದ ಹಾಗೂ ಶ್ರವಣ ದೋಷವಿರುವ ಅಭಿನಯ “ಕಿಚ್ಚು’ ಸಿನಿಮಾದಲ್ಲಿ ತಮ್ಮ ನಿಜ ಜೀವನದ ಪಾತ್ರವನ್ನೇ ಮಾಡಿದ್ದರು. ಆದರೆ, “ವಿರಾಟ ಪರ್ವ’ ಸಿನಿಮಾದಲ್ಲಿ ತಮ್ಮ ನಿಜ ಜೀವನಕ್ಕೆ ವಿರುದ್ಧವಾದ, ಸವಾಲಿನ ಪಾತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಕಾಣಿಸಿಕೊಳ್ಳುತ್ತಿದ್ದು, ಸಿನಿಮಾದುದ್ದಕ್ಕೂ ಪಟಪಟನೇ ಮಾತನಾಡುವ ಪಾತ್ರ ಸಿಕ್ಕಿದೆ.

ನಿರ್ದೇಶಕರ ಕಲ್ಪನೆಗೆ ತಕ್ಕಂತೆ ಲಿಪ್‌ ಸಿಂಕ್‌ ಮಾಡುವ ಸಾಮರ್ಥ್ಯ ಅಭಿನಯ ಅವರಿಗಿರುವುದರಿಂದ ಅವರಿಂದಲೇ ಈ ಪಾತ್ರವನ್ನು ಮಾಡಿಸುತ್ತಿದ್ದಾರೆ ಅನಂತ್‌ ಶೈನ್‌.  ಚಿತ್ರದ ಬಗ್ಗೆ ಮಾತನಾಡುವ ಅನಂತ್‌, “ಚಿತ್ರ ತುಂಬಾ ನೈಜವಾಗಿ ಮೂಡಿಬರುತ್ತಿದೆ. ಕಥೆಗೆ ಪೂರಕವಾದ ಲೊಕೇಶನ್‌ನಲ್ಲೇ ಚಿತ್ರೀಕರಿಸುತ್ತಿದ್ದು, ಹೊಸ ಅಂಶದೊಂದಿಗೆ ಚಿತ್ರ ಸಾಗುತ್ತದೆ’ ಎನ್ನುವುದು ಅನಂತ್‌ ಮಾತು. ಉಳಿದಂತೆ ಈ ಚಿತ್ರದಲ್ಲಿ ಯಶವಂತ್‌ ಶೆಟ್ಟಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಚಿತ್ರವನ್ನು ಎಸ್‌.ಆರ್‌.ಮೀಡಿಯಾ ಪ್ರೊಡಕ್ಷನ್ಸ್‌ನಡಿ ಸುನೀಲ್‌ ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.