ವಿಜಯಪುರ ಉಪ ಚುನಾವಣೆ: ಸೆಪ್ಟೆಂಬರ್ 6ರಂದು ಮತದಾನ
Team Udayavani, Aug 7, 2018, 6:45 AM IST
ಬೆಂಗಳೂರು: ವಿಧಾನಪರಿಷತ್ತಿನ ವಿಜಯಪುರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರ ಚುನಾ
ವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಸೆ.6ರಂದು ಮತದಾನ ನಡೆಯಲಿದೆ.
ಪಕ್ಷೇತರ ಸದಸ್ಯರಾಗಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಬಸನಗೌಡ ಪಾಟೀಲ್ ಯತ್ನಾಳ ಅವರು 2018ರ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗದ್ದರಿಂದ ಈ ಕ್ಷೇತ್ರ ತೆರವುಗೊಂಡಿತ್ತು. ಅದಕ್ಕೆ ಈಗ ಉಪ ಚುನಾವಣೆ ನಿಗದಿಯಾಗಿದೆ. ಕೇಂದ್ರ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಆ.13ಕ್ಕೆ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಆ.20 ಕೊನೆ ದಿನವಾಗಿದೆ.
ಆ.21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು ಆ.23 ಕೊನೆ ದಿನ. ಸೆ.6ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಸೆ.11ರಂದು ಮತ ಎಣಿಕೆ ನಡೆಯಲಿದೆ. ಸೆ.14ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜಿನಾಮೆ ಕೊಟ್ಟಿದ್ದರಿಂದ 2018ರ ಎ.18ರಿಂದ ಈ ಅವರ ಸ್ಥಾನ ಖಾಲಿ ಉಳಿದಿತ್ತು. 2022ರ ಜನವರಿ 5ರವರೆಗೆ ಇವರ ಅವಧಿ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.