ಎಂಜಿನಿಯರಿಂಗ್ ಸೀಟು ಹಂಚಿಕೆ: ಮುಂದೂಡಲು ಸಚಿವರ ಸೂಚನೆ
Team Udayavani, Aug 8, 2018, 6:00 AM IST
ಬೆಂಗಳೂರು: ವೈದ್ಯಕೀಯ ಸೀಟು ಹಂಚಿಕೆಯ ಎರಡನೇ ಸುತ್ತಿನ ಫಲಿತಾಂಶ ಪ್ರಕಟವಾಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಂಜಿನಿಯರಿಂಗ್ ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಮುಂದೂಡುವಂತೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಿದ್ದಾರೆ. ಮಂಗಳವಾರ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿಗೆ ಭೇಟಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ವೈದ್ಯಕೀಯ ಮತ್ತು ದಂತವೈದ್ಯಕೀಯ, ಎಂಜಿನಿಯರಿಂಗ್, ಕೃಷಿ ವಿಜ್ಞಾನ ಕೋರ್ಸ್ಗಳ ಸೀಟು ಹಂಚಿಕೆಯ ಮಾಹಿತಿ ಪಡೆದರು.
ಇದೇ ವೇಳೆ ಮಾಜಿ ಶಾಸಕ ವೈ.ಎಸ್.ವಿ.ದತ್ತ ಕೂಡ ಪ್ರಾಧಿಕಾರಕ್ಕೆ ಆಗಮಿಸಿ ಎಂಜಿನಿಯರಿಂಗ್ 2ನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆ ಮುಂದೂಡುವಂತೆ ಸಚಿವರಿಗೆ ಮನವಿ ಮಾಡಿದರು. ಪ್ರಾಧಿಕಾರ ಆ.8ರಂದು ಸೀಟು ಹಂಚಿಕೆ ಮಾಡಲು ನಿರ್ಧರಿಸಿತ್ತು. ಸಚಿವರ ಸೂಚನೆಯಂತೆ ಆ.11ರಿಂದ 14ರೊಳಗೆ ಮುಂದುವರಿದ ಸೀಟು ಹಂಚಿಕೆ ಪ್ರಕ್ರಿಯೆ ಮುಗಿಸಲು ನಿರ್ಧರಿಸಿದೆ.
ಅನುದಾನ ಬಿಡುಗಡೆ
ಬೆಂಗಳೂರು: ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಕೊಠಡಿ ದುರಸ್ತಿಗೆ ರಾಜ್ಯ ಸರ್ಕಾರ 25.51 ಕೋಟಿ ರೂ.
ಅನುದಾನ ಬಿಡುಗಡೆ ಮಾಡಿದೆ. 1253 ಸರ್ಕಾರಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1881 ಕೊಠಡಿ ದುರಸ್ತಿಗೆ 16.03 ಕೋಟಿ ರೂ. ಹಾಗೂ 939
ಪ್ರೌಢಶಾಲೆಗಳ 1807 ಕೊಠಡಿಗಳ ದುರಸ್ತಿಗೆ 19.89 ಕೋಟಿ ರೂ., 92 ಪ್ರಾಥಮಿಕ ಶಾಲೆಗಳಲ್ಲಿ 94 ಕೊಠಡಿ ಮರು ನಿರ್ಮಾಣಕ್ಕೆ 9.96 ಕೋಟಿ ರೂ. ಮತ್ತು 330 ಪ್ರೌಢಶಾಲೆಗಳಲ್ಲಿ 408 ಕೊಠಡಿ ಮರು ನಿರ್ಮಾಣಕ್ಕೆ 64.26 ಕೋಟಿ ರೂ.ಗಳ ಕ್ರಿಯಾಯೋಜನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದಟಛಿಪಡಿಸಿ ಅನುಮೊದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿತ್ತು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿ ದುರಸ್ತಿಗೆ ಮೊದಲ ತ್ತೈಮಾಸಿಕದಲ್ಲಿ 12.75 ಕೋಟಿ ರೂ., ಎರಡನೇ ತ್ತೈಮಾಸಿಕದಲ್ಲಿ 12.75 ರೂ. ಸೇರಿ ಈವರೆಗೆ 25.51 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.