ಜೈಲಿಗೆ ಕಳಿಸಬೇಕಾದೀತು : NRC ಅಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ
Team Udayavani, Aug 8, 2018, 8:20 AM IST
ಹೊಸದಿಲ್ಲಿ: ಸುಪ್ರೀಂಕೋರ್ಟ್ ಗಮನಕ್ಕೆ ತಾರದೆ ಮಾಧ್ಯಮಗಳ ಜತೆ ಮಾತನಾಡಿದ ರಾಷ್ಟ್ರೀಯ ನಾಗರಿಕರ ನೋಂದಣಿಯ (NRC) ಇಬ್ಬರು ಹಿರಿಯ ಅಧಿಕಾರಿಗಳ ಕ್ರಮಕ್ಕೆ ನ್ಯಾ| ರಂಜನ್ ಗೊಗೊಯ್ ಮತ್ತು ನ್ಯಾ.ಆರ್.ಎಫ್.ನಾರಿಮನ್ ನೇತೃತ್ವದ ನ್ಯಾಯಪೀಠ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದೆ. ಪ್ರತೀಕ್ ಹಜೇಲಾ ಮತ್ತು ಶೈಲೇಶ್ ಎಂಬ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ. ‘ಕೋರ್ಟ್ ಆದೇಶ ಪ್ರಕಾರ ನಡೆದುಕೊಳ್ಳಬೇಕಾಗಿರುವ ಅಧಿಕಾರಿಗಳು ನೀವು. ಮಾಧ್ಯಮಗಳ ಜತೆ ಹೇಗೆ ಮಾತನಾಡಿದಿರಿ? ನಿಮ್ಮ ಮೇಲೆ ದೊಡ್ಡ ಕೆಲಸವೊಂದರ ಹೊರೆಯಿದೆ ಎಂಬ ಕಾರಣಕ್ಕೆ ಸುಮ್ಮನೆ ಬಿಟ್ಟಿದ್ದೇವೆ. ಇಲ್ಲದಿದ್ದರೆ ನಿಮ್ಮನ್ನು ಜೈಲಿಗೆ ಅಟ್ಟಿಸುತ್ತಿದ್ದೆವು’ ಎಂದು ನ್ಯಾಯಪೀಠ ಕಟುವಾಗಿಯೇ ಹೇಳಿದೆ. ಜತೆಗೆ, ನಿಮ್ಮ ಕೆಲಸ ಕೇವಲ ಮಾಹಿತಿ ಸಂಗ್ರಹಣೆ ಮಾತ್ರ ಎಂದು ಹೇಳಿದೆ.
‘ದ ಇಂಡಿಯನ್ ಎಕ್ಸ್ಪ್ರೆಸ್’ ಪತ್ರಿಕೆಗೆ ನೀಡಿದ್ದ ಸಂದರ್ಶನದಲ್ಲಿ ಪ್ರತೀಕ್ ಹಜೇಲಾ, NRCಯಿಂದ ಹೊರಗೆ ಉಳಿದಿರುವ 40 ಲಕ್ಷ ಮಂದಿಯೂ ಅತಿಕ್ರಮಣಕಾರರಲ್ಲ ಎಂದು ಹೇಳಿದ್ದರು. ಮುಂದಿನ ದಿನಗಳಲ್ಲಿ ಕೋರ್ಟ್ ಅನುಮತಿ ಇಲ್ಲದೆ ರಾಷ್ಟ್ರೀಯ ನಾಗರಿಕರ ನೋಂದಣಿಯ ಯಾವುದೇ ಅಧಿಕಾರಿಗಳು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲೇಬಾರದು ಎಂದು ನ್ಯಾಯಪೀಠ ತಾಕೀತು ಮಾಡಿದೆ. ಕೋರ್ಟ್ ತರಾಟೆಗೆ ತೆಗೆದುಕೊಂಡ ಬಳಿಕ ಪ್ರತೀಕ್
ಹಜೇಲಾ ಕ್ಷಮೆ ಕೋರಿದ್ದಾರೆ. ರಿಜಿಸ್ಟ್ರಾರ್ ಜನರಲ್ ಅನುಮತಿ ಬಳಿಕವೇ ಪತ್ರಿಕೆಗೆ ಸಂದರ್ಶನ ನೀಡಿದ್ದಾಗಿಯೂ ಅರಿಕೆ ಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.