ಜನರ ಸಮಸ್ಯೆ ಪರಿಶೀಲನೆ
Team Udayavani, Aug 8, 2018, 12:52 PM IST
ಮಹಾನಗರ : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಶನಿವಾರ ನಡೆದ ಮುಡಾ ಅದಾಲತ್ ಸಂದರ್ಭ ಅಹವಾಲು ನೀಡಿದ ಜನರ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಲು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ. ಖಾದರ್ ಮಂಗಳವಾರ ನಗರದ ವಿವಿಧ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. ಶಕ್ತಿನಗರ, ಸುಲ್ತಾನ್ ಬತ್ತೇರಿ, ಪ್ರಶಾಂತ್ ನಗರಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಪರಿಶೀಲಿಸಿದ ಸಚಿವರು, ಸಮಸ್ಯೆ ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಶಕ್ತಿನಗರ ವ್ಯಾಪ್ತಿಯ ಗುರು ನಗರದಲ್ಲಿ ರೀಟೈನಿಂಗ್ ವಾಲ್ ಎತ್ತರಿಸಬೇಕು. ಅಲ್ಲದೆ ಸುತ್ತ ಮುತ್ತಲ ಮನೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕಟ್ಟಡ ನಿರ್ಮಿಸಬೇಕು ಎಂದು ಸಂಬಂಧ ಪಟ್ಟವರಿಗೆ ನಿರ್ದೇಶಿಸಿದರು. ಕೊಂಚಾಡಿ ದೇರೆಬೈಲ್‌ನ ಪ್ರಶಾಂತಿ ನಗರ ಬಡಾವಣೆಯಲ್ಲಿ ಉದ್ಯಾನ ಅಭಿವೃದ್ಧಿ ಮತ್ತು ಕೆಳಸೇತುವೆ ಕಾಮಗಾರಿಯನ್ನು ಶೀಘ್ರ ಸಂಪೂರ್ಣಗೊಳಿಸುವಂತೆ ನಿರ್ದೇಶನ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಐವನ್‌ಡಿ’ಸೋಜಾ, ಮುಡಾ ಆಯುಕ್ತ ಶ್ರೀಕಾಂತ್ ರಾವ್, ಮನಾಪ ಆಯುಕ್ತ ಮೊಹಮ್ಮದ್ ನಝೀರ್, ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಪರಿಶೀಲನೆಗೆ ನಿರ್ದೇಶನ
ಸುಲ್ತಾನ್ ಬತ್ತೇರಿಯಲ್ಲಿ ನಿರ್ಮಾಣವಾಗಿರುವ ರಸ್ತೆಯೊಂದರಿಂದ ಆ ಪ್ರದೇಶ ವ್ಯಾಪ್ತಿಯಲ್ಲಿ ಮೂರು ಸೆಂಟ್ಸ್‌ನ ಮನೆಗಳಿಗೆ ತೊಂದರೆಯಾಗಲಿದೆ ಎಂದು ಅದಾಲತ್‌ನಲ್ಲಿ ಸ್ಥಳೀಯ ನಿವಾಸಿಗಳು ಅಳಲು ತೋಡಿಕೊಂಡಿದ್ದರು. ಈ ನಿಟ್ಟಿನಲ್ಲಿ ರಸ್ತೆ ಪರಿಶೀಲನೆ ನಡೆಸಿದ ಸಚಿವರು, ರಸ್ತೆ ವಿಸ್ತರಣೆ ಸಂಬಂಧ ಮರುಪರಿಶೀಲನೆ ನಡೆಸುವ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರಿಗೆ ನಿರ್ದೇಶ ನೀಡಿದರು. ಲೋಬೋ ಟೈಲ್ಸ್ ಫ್ಯಾಕ್ಟರಿಗೆ ಭೇಟಿ ನೀಡಿ ಅಲ್ಲಿನವರ ಬೇಡಿಕೆಯನ್ನು ಆಲಿಸಿ ಪರಿಶೀಲನೆ ನಡೆಸುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.