ನುಡಿದಂತೆ ನಡೆದ ಪ್ರಧಾನಿ ನರೇಂದ್ರ ಮೋದಿ: ಚರಂತಿಮಠ
Team Udayavani, Aug 8, 2018, 5:16 PM IST
ಬಾಗಲಕೋಟೆ: ದೇಶದ ಹಿಂದುಳಿದ ಜನರ ಸಮಗ್ರ ಅಭಿವೃದ್ಧಿ ಹಾಗೂ ಕಾನೂನುಬದ್ಧ ಯೋಜನೆ ಕಲ್ಪಿಸಲು ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಂವಿಧಾನಾತ್ಮಕ ಸ್ಥಾನಮಾನ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ನುಡಿದಂತೆ ನಡೆದಿದ್ದಾರೆ. ಕಾಂಗ್ರೆಸ್ ನ ವಿರೋಧದ ಮಧ್ಯೆಯೂ ಆಯೋಗಕ್ಕೆ ಸಂವಿಧಾನಬದ್ಧ ಮಾನ್ಯತೆ ಕಲ್ಪಿಸಿರುವುದು ದೇಶದ ಇತಿಹಾಸದಲ್ಲೇ ದಾಖಲೆಯಾಗಿದೆ ಎಂದು ಬಾಗಲಕೋಟೆಯ ಬಿಜೆಪಿ ಶಾಸಕ ಡಾ|ವೀರಣ್ಣ ಚರಂತಿಮಠ ಹೇಳಿದರು.
ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ (ಓಬಿಸಿ)ದಿಂದ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು. ದೇಶದ ಹಿಂದುಳಿದ ವರ್ಗಗಳ ಜನರಿಗಾಗಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ರಚನೆ ಮಾಡಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಆದರೆ, ಹಿಂದುಳಿದವರ ವಿರೋಧಿಯಾಗಿರುವ ಕಾಂಗ್ರೆಸ್, ಈ ಆಯೋಗ ರಚನೆ ಹಾಗೂ ಸಂವಿಧಾನಬದ್ಧ ಮಾನ್ಯತೆ ನೀಡಲು ವಿರೋಧ ಮಾಡುತ್ತ ಬಂದಿತ್ತು. ಈಚೆಗೆ ರಾಜ್ಯಸಭೆಯಲ್ಲಿ ಈ ಆಯೋಗಕ್ಕೆ ಸಂವಿಧಾನಬದ್ಧ ಮಾನ್ಯತೆ ನೀಡಲು 156 ಮತಗಳು ಬಂದಿರುವುದು ದಾಖಲೆಯೇ ಸರಿ ಎಂದರು.
ಎಲ್ಲರೊಂದಿಗೆ, ಎಲ್ಲರ ವಿಕಾಸ ಎಂಬ ಗುರಿಯೊಂದಿಗೆ ಮುನ್ನೆಡೆ ಬಿಜೆಪಿ ಹಾಗೂ ಎನ್ ಡಿಎ ಸರ್ಕಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ದೇಶದ ಹಿಂದುಳಿದ ಜನಾಂಗಗಳ ಸಮಗ್ರ ಅಭಿವೃದ್ಧಿಗೆ ಈ ಆಯೋಗ ರಚನೆ ಅವಶ್ಯಕವಾಗಿತ್ತು. ಅದನ್ನು ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಡೇರಿಸಿದೆ ಎಂದು ತಿಳಿಸಿದರು.
ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ನಾಗಪ್ಪ ಅಂಬಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜು ನಾಯ್ಕರ, ಗ್ರಾಮೀಣ ಘಟಕದ ಅಧ್ಯಕ್ಷ ರಾಜಶೇಖರ ಮುದೇನೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ರೇವಣಕರ, ಮುತ್ತು ಕುರುಬರ, ಶಂಕರ ಗಲಗ, ಶಾಂತಪ್ಪ ಬಾಡದ, ಬಸವರಾಜ ನಾಶಿ, ಸುರೇಶ ಕೊಣ್ಣೂರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.