ಬಾಲಿಕಾಶ್ರಮ ಹಗರಣ: ಸಚಿವೆ ಮಂಜು ವರ್ಮಾ ರಾಜೀನಾಮೆ
Team Udayavani, Aug 9, 2018, 6:00 AM IST
ಪಾಟ್ನಾ: ಮುಜಫ್ಫರ್‌ಪುರ ಬಾಲಿಕಾಶ್ರಮದಲ್ಲಿ ಬಾಲಕಿಯರ ಮೇಲೆ ಲೈಂಗಿಕ ಹಗರಣಕ್ಕೆ ಬಿಹಾರದ ಸಮಾಜ ಕಲ್ಯಾಣ ಸಚಿವೆ ಮಂಜು ವರ್ಮಾ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಾಲಿಕಾಶ್ರಮದಲ್ಲಿ 34 ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿರುವ ಈ ಪ್ರಕರಣದಲ್ಲಿ ಮಂಜು ವರ್ಮಾ ಪತಿ ಚಂಡೇಶ್ವರ್ ವರ್ಮಾ ಸಹ ಭಾಗಿಯಾಗಿ ರುವ ಆರೋಪಗಳು ಕೇಳಿಬಂದಿದ್ದವು. ತನಿಖೆಯ ವೇಳೆ, ಪ್ರಕರಣದ ಪ್ರಮುಖ ಆರೋಪಿ ಹಾಗೂ ಬಾಲಿಕಾಶ್ರಮ ನಡೆಸು ತ್ತಿದ್ದ ಬ್ರಿಜೇಶ್ ಠಾಕೂರ್ ಅವರ ಮೊಬೈಲ್ ಕರೆಗಳ ವಿವರಗಳಲ್ಲಿ ಚಂಡೇ ಶ್ವರ್ ವರ್ಮಾ ಗೆ ಠಾಕೂರ್ ಜನವರಿಯಿಂದ ಜೂನ್‌ವರೆಗೆ 17 ಬಾರಿ ಕರೆ ಮಾಡಿರುವುದು ತಿಳಿದು ಬಂದಿತ್ತು. ವಿಚಾರಣೆ ವೇಳೆ ಠಾಕೂರ್, ವರ್ಮಾ ಅವರು ಆಗಾಗ್ಗೆ ಬಾಲಿಕಾಶ್ರಮಕ್ಕೆ ಬಂದು ಉಳಿದುಕೊಳ್ಳು ತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ. ಈ ಎಲ್ಲಾ ಬೆಳವಣಿಗೆಗಳ ನಂತರ, ಸಮಾಜ ಕಲ್ಯಾಣ ಸಚಿವರ ರಾಜಿನಾಮೆಗೆ ಪ್ರತಿಪಕ್ಷ ಗಳು ಒತ್ತಾಯಿಸುತ್ತಿದ್ದವು. ಬಿಹಾರ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಸೋಮವಾರ ಸುದ್ದಿಗೋಷ್ಠಿ ನಡೆಸಿ ಪ್ರಕರಣದಲ್ಲಿ ಭಾಗಿ ಆಗಿರುವ ಯಾರೇ ಆಗಲಿಅವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು.
ಪರಿಶೀಲನೆಗೆ ಆದೇಶ: ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿನ ಬಾಲಿಕಾಶ್ರಮಗಳ ಹಗರಣ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 60 ದಿನಗಳ ಒಳಗಾಗಿ ದೇಶಾದ್ಯಂತ ಇರುವ 9 ಸಾವಿರಕ್ಕೂ ಅಧಿಕ ಹೆಣ್ಣು ಮಕ್ಕಳ ಮತ್ತು ಇತರ ಆಶ್ರಮಗಳನ್ನು ಪರಿಶೀಲನೆ ನಡೆಸಿ ಅಲ್ಲಿನ ಸ್ಥಿತಿ ಗತಿ ಬಗ್ಗೆ ವರದಿ ಸಲ್ಲಿಸಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.