ಬಿಜೆಪಿಗೆ ಹೆಚ್ಚು ಸ್ಥಾನ ಖಚಿತ: ಬಿಎಸ್‌ವೈ
Team Udayavani, Aug 9, 2018, 7:00 AM IST
ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಈ ಚುನಾವಣೆಯಲ್ಲಿ ಒಟ್ಟಿಗಾದರೂ ಹೋಗಲಿ, ಬೇರೆಯಾಗಿ ಆದರೂ ಹೋಗಲಿ. ನಮಗೆ ಸಂಬಂಧವಿಲ್ಲ. ನಮ್ಮ ಪಕ್ಷ ಹೆಚ್ಚು ಸೀಟು ಗೆಲ್ಲುವತ್ತ ನಮ್ಮ ಗಮನ ಇರುತ್ತದೆ ಎಂದು ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಪಕ್ಷ ಗಂಭೀರವಾಗಿಯೇ ಪರಿಗಣಿಸಿದೆ. ಎಲ್ಲ ನಾಯಕರು ಜತೆಗೂಡಿ ಬಿಜೆಪಿಯ ಶಕ್ತಿ ತೋರಿಸಲಿದ್ದೇವೆ ಎಂದರು.
ದೆಹಲಿಯಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಂದಿದ್ದೇನೆ. ರಾಜ್ಯದ ಪ್ರಸಕ್ತ ವಿದ್ಯಮಾನಗಳು ಹಾಗೂ ಮುಂದೆ ಇಡಬೇಕಾದ ಹೆಜ್ಜೆಗಳ ಕುರಿತು ಚರ್ಚೆ ಮಾಡಿದ್ದೇನೆ.ನಮ್ಮ ರಾಜ್ಯಕ್ಕೆ ಆಗಬೇಕಿರುವ ಕೆಲಸಗಳ ಬಗ್ಗೆ ಕೇಂದ್ರ ಸಚಿವರ ಬಳಿ ಮಾತನಾಡಿದ್ದೇನೆ ಎಂದು ಹೇಳಿದರು.
ಬೀದರ್‌ನಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದು ಕೆಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇದೆ. ಅದನ್ನೂ ಅವಲೋಕಿಸುತ್ತೇನೆ. ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಡಿಕೆಶಿಗೆ ಅಭದ್ರತೆ
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಮೇಲೆ ಆ ಪಕ್ಷದ ನಾಯಕರಿಗೆ ನಂಬಿಕೆಯಿಲ್ಲ. ಹೀಗಾಗಿ, ನಮ್ಮ ಮೇಲೆ ತಪ್ಪು ಹಾಕುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಕೆಲವು ಶಾಸಕರಿಗೆ ಮಂತ್ರಿ ಮಾಡುವ ಭರವಸೆ ನೀಡಿದ್ದರು. ಆದರೆ, ಸಾಧ್ಯವಾಗಲಿಲ್ಲ. ಇದೀಗ ಶಾಸಕರು ಅವರ ಬೆನ್ನು ಬಿದ್ದಿದ್ದಾರೆ. ಹೀಗಾಗಿ, ಶಿವಕುಮಾರ್‌ಗೆ ಅಭದ್ರತೆ ಕಾಡುತ್ತಿದೆ. ಕಾಂಗ್ರೆಸ್ ಶಾಸಕರು ನಮ್ಮ ಟಚ್‌ನಲ್ಲಿ ಇದ್ದಾರೆ ಅಥವಾ ಇಲ್ಲ ಎಂದು ನಾವು ಹೇಳುವುದು ಸರಿಯಲ್ಲ.
– ಶ್ರೀರಾಮುಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.