ಮಲೆನಾಡು, ಕರಾವಳಿಯಲ್ಲಿ ಮತ್ತೆ ಮಳೆಯಬ್ಬರ
Team Udayavani, Aug 9, 2018, 6:25 AM IST
ಬೆಂಗಳೂರು: ರಾಜ್ಯದ ಕರಾವಳಿ, ಕೊಡಗು, ಮಲೆನಾಡು ಭಾಗದಲ್ಲಿ ಆಶ್ಲೇಷಾ ಮಳೆ ಅಬ್ಬರಿಸುತ್ತಿದೆ. ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಭಾಗಮಂಡಲ ಮತ್ತು ಮಡಿಕೇರಿಯಲ್ಲಿ ರಾಜ್ಯದಲ್ಲಿಯೇ ಅಧಿಕ 11 ಸೆಂ.ಮೀ.ಗಳಷ್ಟು ಮಳೆ ಸುರಿಯಿತು.
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆಯಿಂದಲೇ ತುಂತುರು ಮಳೆಯಾಗಿದೆ. ಕೊಡಗಿನಲ್ಲಿ ಮಳೆಯಿಂದಾಗಿ ಭಾಗಮಂಡಲದ ತ್ರಿವೇಣಿ ಸಂಗಮ ವ್ಯಾಪ್ತಿಯ ರಸ್ತೆಗಳು ಜಲಾವೃತಗೊಂಡಿದ್ದು, ಕಕ್ಕಬ್ಬೆ ಹೊಳೆ ಬದಿಯಲ್ಲಿ ರಾತ್ರಿ ನಿಲ್ಲಿಸಿದ್ದ ಖಾಸಗಿ ಬಸ್ಸೊಂದು ನೀರಿನಲ್ಲಿ ಮುಳುಗಿತ್ತು. ಮಡಿಕೇರಿ- ಮಂಗಳೂರು ರಸ್ತೆಯ ಒಂದು ಭಾಗ ಸುಮಾರು 300 ಅಡಿಯಷ್ಟು ಆಳಕ್ಕೆ ಕುಸಿದಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗುವ ಅಪಾಯ ಎದುರಾಗಿದೆ.
ಕರಾವಳಿಯಲ್ಲೂ ಉತ್ತಮ ಮಳೆಯಾಗುತ್ತಿದ್ದು, ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿರುವ ಹೊಸಮಠ ಮುಳುಗು ಸೇತುವೆ ಮುಳುಗಿದೆ. ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳಲ್ಲಿನ ನೀರು ಅಪಾಯದ ಮಟ್ಟಕ್ಕೆ ಸನಿಹ ತಲುಪಿದ್ದು, ಸುಬ್ರಹ್ಮಣ್ಯದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಇದರಿಂದಾಗಿ ಯಾತ್ರಿಗಳಿಗೆ ಪುಣ್ಯಸ್ನಾನ ನೆರವೇರಿಸಲು ತೊಡಕುಂಟಾಗಿದೆ. ಧರ್ಮಸ್ಥಳದ ಅಶೋಕನಗರದಲ್ಲಿ ಮನೆಯ ಗೋಡೆಯೊಂದು ಕುಸಿದು ಬಿದ್ದಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ.
ಸಕಲೇಶಪುರ ತಾಲೂಕಿನ ಎಡಕುಮೇರಿ ಶಿರುವಾಗಿಲು ಸಮೀಪ 3 ಕಡೆ ಹಳಿ ಮೇಲೆ ಗುಡ್ಡ ಕುಸಿತಗೊಂಡಿದ್ದು, ಮಂಗಳೂರು-ಹಾಸನ ರೈಲು ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನಿಂದ (ಯಶವಂತಪುರ- ಮಂಗಳೂರು ಜಂಕ್ಷನ್- ಕಾರವಾರ-ವಾರದಲ್ಲಿ ಮೂರು ದಿನ ಓಡಾಡುವ ರೈಲು ನಂ: 16515) ಕಡೆಗೆ ಸಂಚರಿಸುವ ರೈಲುಗಳನ್ನು ಹಾಸನ ನಿಲ್ದಾಣದಲ್ಲಿ, ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗಬೇಕಾಗಿದ್ದ ರೈಲನ್ನು ಸುಬ್ರಹ್ಮಣ್ಯ ರೈಲು ನಿಲ್ದಾಣದಲ್ಲಿ ತಡೆ ಹಿಡಿದು ಮಂಗಳೂರಿಗೆ ಹಿಂತಿರುಗಿ ಕಳುಹಿಸಲಾಯಿತು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ತುಂಗಾ, ಭದ್ರಾ ಹಾಗೂ ಮಾಲತಿ ನದಿಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ ರಾಜಾಲಖಮಗೌಡಾ ಜಲಾಶಯದಿಂದ ಬುಧವಾರ ಸಂಜೆ ಹತ್ತು ಕ್ರಸ್ಟ್‌ಗೇಟ್‌ಗಳಿಂದ 9 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.